ಮಂಗಳೂರು: ನಗರದ ಮಣಪ್ಪುರಂ ಫೈನಾನ್ಸ್‌ನ ಉದ್ಯೋಗಿಯಾಗಿದ್ದ ಯುವತಿಯೊಬ್ಬಳು ನಾಪತ್ತೆಯಾದ ಬಗ್ಗೆ ಸುರತ್ಕಲ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕಮಲಾಕ್ಷ ಎಂಬವರ ಪುತ್ರಿ ಶಿವಾನಿ (20) ಕಾಣೆಯಾದ ಯುವತಿ. ಈಕೆ ಜ.16ರಂದು ಬೆಳಗ್ಗೆ 7ಕ್ಕೆ ಕೆಲಸಕ್ಕೆ ತೆರಳಿದ್ದು, ಸಂಜೆ 6 ಗಂಟೆಯಾದರೂ ಮರಳಿ ಬಂದಿಲ್ಲ ಎಂದು ದೂರಿನಲ್ಲಿ ತಿಳಿಸಲಾಗಿದೆ. ಮೊಬೈಲ್ ಸ್ವಿಚ್ ಆಫ್ ಆಗಿದ್ದು ಸಂಸ್ಥೆಯ ಸಿಬ್ಬಂದಿಯವರಲ್ಲಿ ವಿಚಾರಿಸಿದಾಗಲೂ ಹೆಚ್ಚಿನ ಮಾಹಿತಿ ತಿಳಿದುಬಂದಿಲ್ಲ.
5.6 ಅಡಿ ಎತ್ತರದ, ಬಿಳಿ ಮೈಬಣ್ಣದ, ದಪ್ಪಮುಖದ, ಸಾಧಾರಣ ಮೈಕಟ್ಟಿನ ಈಕೆ ತುಳು ಮತ್ತು ಕನ್ನಡ ಭಾಷೆ ಮಾತನಾಡುತ್ತಾರೆ.ಮನೆಯಿಂದ ಹೊರಟು ಹೋದಾಗ ಹಸಿರು ಬಣ್ಣದ ಟಾಪ್ ಹಾಗೂ ಗೋಲ್ಡನ್ ಕಲರ್ ಪ್ಯಾಂಟ್ ಧರಿಸಿರುತ್ತಾರೆ. ಈಕೆಯನ್ನು ಕಂಡವರು ಸುರತ್ಕಲ್ ಠಾಣೆ (0824-2220540, 9480805360, 9480802345) ಅಥವಾ ಮಂಗಳೂರು ನಗರ ಕಂಟ್ರೋಲ್ ರೂಮ್ (0824-2220800) ಮಾಹಿತಿ ನೀಡಬಹುದು ಎಂದು ಪ್ರಕಟನೆ ತಿಳಿಸಿದೆ.
Join our Whatsapp group by clicking the below link 👇👇
ಉಡುಪಿ: ಆಸ್ತಿಯನ್ನು ಬಲವಂತವಾಗಿ ತನ್ನ ಹೆಸರಿಗೆ ವರ್ಗಾಯಿಸಿಕೊಂಡು ವೃದ್ಧ ಪೋಷಕರನ್ನು ಮನೆಯಿಂದ ಹೊರಹಾಕಿದ ಮಗ ಉಡುಪಿ: ತಾಯಿಯ ಹೆಸರಿನಲ್ಲಿದ್ದ ಆಸ್ತಿಯನ್ನು…
ವಿಟ್ಲ : ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದ ಮರ ಹಾಗೂ ವಿದ್ಯುತ್ ಕಂಬ: ದಂಪತಿ ಅಪಾಯದಿಂದ ಪಾರು ವಿಟ್ಲ: ಮರ ಹಾಗೂ…
ಮಂಗಳೂರು: ಉದ್ಯಮಿಯ ಕಾರು ಅಡ್ಡಗಟ್ಟಿ ಕಾರು ಸಹಿತ ಚಿನ್ನಾಭರಣ ದರೋಡೆ ಮಂಗಳೂರು: ಕೇರಳ ಮೂಲದ ಉದ್ಯಮಿಯೊಬ್ಬರ ಕಾರನ್ನು ಅಡ್ಡಗಟ್ಟಿ ಕಾರು…
ವಯೋವಂದನ ಯೋಜನೆ : ವೇದಿಕೆಯ ನೇತೃತ್ವಕ್ಕೆ ಸಮಾಜದ ಸಹಭಾಗಿತ್ವ ಅಗತ್ಯ : ಸಿ ಎಂ ಗುಜ್ಜಾಡಿ ಪ್ರಭಾಕರ್ ನಾಯಕ್ ಜಿ…
ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ‘ನುವಾ’ ವಜ್ರಾಭರಣ ಅನಾವರಣ ಉಡುಪಿ: ಮಲಬಾರ್ ಗೋಲ್ಡ್ ಆ್ಯಂಡ್ ಡೈಮಂಡ್ಸ್ ಉಡುಪಿ ಶಾಖೆಯಲ್ಲಿ ಮೈನ್ ಬ್ರಾಂಡಿನ…
ಧರ್ಮಸ್ಥಳ ಪ್ರಕರಣ : ವಿಠಲ್ ಗೌಡ ವಿರುದ್ಧ ಅರೆಸ್ಟ್ ವಾರಂಟ್: ಪೊಲೀಸರಿಂದ ಹುಡುಕಾಟ ಬೆಳ್ತಂಗಡಿ: ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ…