ಮಂಗಳೂರು: ಬಂಟ್ವಾಳದ ಕಾಲೇಜೊಂದರ ಉಪನ್ಯಾಸಕಿಯ ಬಗ್ಗೆ ಮಾನಹಾನಿಕರ ಪತ್ರ ಬರೆದು ಮಾನಸಿಕ ಕಿರುಕುಳ ನೀಡುತ್ತಿದ್ದ ಪ್ರಕರಣಕ್ಕೆ ಸಂಬಂಧಿಸಿ ಪೊಲೀಸ್ ಕಸ್ಟಡಿಯಲ್ಲಿದ್ದ ಕಾಲೇಜಿನ ಅರ್ಥಶಾಸ್ತ್ರ ಉಪನ್ಯಾಸಕ ಬಂಟ್ವಾಳ ಸಿದ್ದಕಟ್ಟೆಯ ಮೇಗಿನ ಉಳಿರೋಡಿ ನಿವಾಸಿ ಪ್ರದೀಪ್ ಪೂಜಾರಿ ಹಾಗೂ ದೈಹಿಕ ಶಿಕ್ಷಣ ನಿರ್ದೇಶಕ ತಾರಾನಾಥ (32) ನ್ಯಾಯಾಲಯ ಜಾಮೀನು ನೀಡಿದೆ.
ಇನ್ನೋರ್ವ ಆರೋಪಿ ಕಾಲೇಜೊಂದರ ಸಂಚಾಲಕ ಪ್ರಕಾಶ್ ಶೆಣೈ ಗೆ ನ್ಯಾಯಾಲಯ ಕಳೆದ ಶುಕ್ರವಾರ ಜಾಮೀನು ನೀಡಿತ್ತು. ಉಳಿದ ಇಬ್ಬರು ಆರೋಪಿಗಳನ್ನು ಹೆಚ್ಚಿನ ವಿಚಾರಣೆಗೆ ಸಿಸಿಬಿ ಪೊಲೀಸರು ಮರಳಿ ಕಸ್ಟಡಿಗೆ ಪಡೆದಿದ್ದರು.
ಈ ಮೂವರು ಆರೋಪಿಗಳು ಹಾಗೂ 58 ವರ್ಷದ ಉಪನ್ಯಾಸಕಿ ಬಂಟ್ವಾಳದಲ್ಲಿ ಕಾಲೇಜೊಂದರಲ್ಲಿ ಸಹೋದೋಗ್ಯಿಗಳಾಗಿದ್ದರು. ನಾಲ್ಕು ವರ್ಷಗಳ ಹಿಂದೆ ಕಾಲೇಜು ಆಡಳಿತ ಮಂಡಳಿಯೊಂದಿಗಿನ ಭಿನ್ನಾಭಿಪ್ರಾಯದಿಂದಾಗಿ ಡೆಪ್ಯೂಟೇಷನ್ ನಲ್ಲಿ ಮಂಗಳೂರಿನ ಸರ್ಕಾರಿ ಕಾಲೇಜಿನಲ್ಲಿ ಕಾರ್ಯನಿರ್ವಹಿಸುತ್ತಿದ್ದರು.
ಆ ಬಳಿಕ ಆರೋಪಿಗಳು ವಿವಿಧ ಕಡೆಯ ಪಬ್ಲಿಕ್ ಟಾಯ್ಲೆಟ್ನಲ್ಲಿ ಈ ಉಪನ್ಯಾಸಕಿ ಫೋನ್ ನಂಬರ್ ಹಾಗೂ ಇ-ಮೇಲ್ ಐಡಿ ಹಾಕಿದ್ದರು. 10 ದಿನಗಳ ಅವಧಿಯಲ್ಲಿ ಸುಮಾರು 800 ಅಶ್ಲೀಲ ಕರೆಗಳು ಬಂದಿದ್ದು, ಕಿರುಕುಳ ಸಹಿಸಿಕೊಳ್ಳಲಾಗದೆ ಉಪನ್ಯಾಸಕಿ ಪೊಲೀಸರಿಗೆ ದೂರು ದಾಖಲಿಸಿದಾಗ ಆರೋಪಿಗಳ ಕೃತ್ಯ ಬೆಳಕಿಗೆ ಬಂದಿತ್ತು.
ಕಡಬ: ಚಿನ್ನದ ತೂಕ ಹೆಚ್ಚಿಸಿ ಬ್ಯಾಂಕ್ ಗೆ ವಂಚನೆಗೆ ಯತ್ನ: ಇಬ್ಬರ ಬಂಧನ ಕಡಬ: ಚಿನ್ನಾಭರಣದ ತೂಕವನ್ನು ಕೃತಕವಾಗಿ ಹೆಚ್ಚಿಸಿ…
ಮಹಾರಾಷ್ಟ್ರ : ಮಳೆ ಅಬ್ಬರ - ಕುಸಿದು ಬಿದ್ದ ರತ್ನಗಿರಿ ರೈಲು ನಿಲ್ದಾಣದ ಛಾವಣಿ ; ತಪ್ಪಿದ ದೊಡ್ಡ ದುರಂತ…
ಶಿವಮೊಗ್ಗ: ಬಸ್ ನಿಲ್ದಾಣದಲ್ಲಿ ಚೀಲದೊಳಗೆ ನವಜಾತ ಹೆಣ್ಣು ಮಗು ಪತ್ತೆ ಶಿವಮೊಗ್ಗ: ನವಜಾತ ಹೆಣ್ಣು ಶಿಶುವೊಂದನ್ನು ಬಸ್ ನಿಲ್ದಾಣದಲ್ಲಿ ಅನಾಥವಾಗಿ…
ಪಡುಬಿದ್ರಿ : ನಡಿಪಟ್ಟಣದಲ್ಲಿ ಕಡಲು ಕೊರೆತಕ್ಕೆ ತಡೆಗೋಡೆ ನಿರ್ಮಾಣಕ್ಕೆ ಸಚಿವ ಖಾದರ್ ಗೆ ವಿಶ್ವಾಸ್ ಅಮೀನ್ ಮನವಿ ಪಡುಬಿದ್ರಿ: ಉಡುಪಿ…
ಬಂಟ್ವಾಳ : ಬಸ್ಸಿಗೆ ಕಾಯುತ್ತಿದ್ದ ವಿದ್ಯಾರ್ಥಿಗೆ ಚೂರಿ ಇರಿತ ಬಂಟ್ವಾಳ : ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಇರಾ…
ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಅರ್ಜಿ ವಿಚಾರಣೆಗೆ ಅರ್ಹವಲ್ಲ: ಮತ್ತೊಮ್ಮೆ ಜಾಮೀನು ತಿರಸ್ಕರಿಸಿದ ಸುಪ್ರೀಂ ನಟ ದರ್ಶನ್ ರೇಣುಕಾ…