Featured

ಮಂಗಳೂರು: ಉರ್ವ ಶ್ರೀ ಮಾರಿಯಮ್ಮ ದೇವಸ್ಥಾನದಲ್ಲಿ ಫೆ.11ರಿಂದ ಫೆ.15ರ ವರೆಗೆ  ಪುನರ್‌ ಪ್ರತಿಷ್ಠ, ಬ್ರಹ್ಮಕಲಶೋತ್ಸವ – VIshwanews24

ಮಂಗಳೂರು: ಉರ್ವ ಶ್ರೀ ಮಾರಿಯಮ್ಮ ದೇವಸ್ಥಾನದಲ್ಲಿಫೆ.11ರಿಂದ ಫೆ.15ರ ವರೆಗೆ  ಪುನರ್‌ ಪ್ರತಿಷ್ಠೆ, ಬ್ರಹ್ಮಕಲಶೋತ್ಸವ

ಮಂಗಳೂರು: ಉರ್ವ ಶ್ರೀ ಮಾರಿಯಮ್ಮ ದೇವಸ್ಥಾನದಲ್ಲಿ ಫೆ.11ರಿಂದ ಫೆ.15ರ ವರೆಗೆ ಶ್ರದ್ಧಾ ಭಕ್ತಿಯಿಂದ ನಡೆಯಲಿರುವ ಪುನರ್‌ಪ್ರತಿಷ್ಠೆ ಸಹಿತ ಬ್ರಹ್ಮಕಲ ಶೋತ್ಸವದ ಪೂರ್ವಭಾವಿಯಾಗಿ ವೈಭವದ ಹೊರೆಕಾಣಿಕೆ ಮೆರವಣಿಗೆ ಶುಕ್ರವಾರ ಸಂಜೆ ಮಂಗಳೂರಿನಲ್ಲಿ ಸಂಪನ್ನಗೊಂಡಿತು.

ನಗರದ ಗೋಲ್ಡ್‌ ಪಿಂಚ್‌ ಸಿಟಿ ಮೈದಾನ ಕೂಳೂರು ಹಾಗೂ ಕೇಂದ್ರ ಮೈದಾನದಿಂದ ಏಕಕಾಲದಲ್ಲಿ ಹೊರೆ ಕಾಣಿಕೆ ಮೆರವಣಿಗೆ ಆರಂಭ ವಾಯಿತು. 300ಕ್ಕೂ ಅಧಿಕ ಹೊರೆ ದಿಬ್ಬಣದ ವಾಹನಗಳು ಹಾಗೂ ಸಾವಿರಾರು ಮಂದಿ ಮೆರವಣಿಗೆಯಲ್ಲಿ ಭಾಗವಹಿಸಿದರು. ಎರಡೂ ಕಡೆ ಯಿಂದ ಸಾಗಿಬಂದ ಹೊರೆಕಾಣಿಕೆ ಮೆರವಣಿಗೆ ಸಂಜೆ 6.30ರ ಸುಮಾರಿಗೆ ಲೇಡಿಹಿಲ್‌ ನಾರಾಯಣಗುರು ಸರ್ಕಲ್‌ ಬಳಿ ಒಟ್ಟು ಸೇರಿ ಉರ್ವ ಮಾರಿಯಮ್ಮ ಕ್ಷೇತ್ರಕ್ಕೆ ಸಾಗಿತು.

ಗೋಲ್ಡ್‌ ಪಿಂಚ್‌ ಸಿಟಿ ಮೈದಾನದಲ್ಲಿ ಹೊರೆಕಾಣಿಕೆ ಮೆರವಣಿಗೆಗೆ ಚಾಲನೆ ನೀಡಿ ಮಾತನಾಡಿದ ಬ್ರಹ್ಮಕಲಶೋತ್ಸವ ಸಮಿತಿ ಗೌರವಾಧ್ಯಕ್ಷ ಡಾ| ಜಿ. ಶಂಕರ್‌, ಬ್ರಹ್ಮಕಲಶೋತ್ಸವದ ಸಂಭ್ರಮಕ್ಕೆ ಸಕಲ ಸಿದ್ಧತೆ ನಡೆಸ ಲಾಗಿದೆ. ಊರ-ಪರವೂರಿನ ಭಕ್ತ ಜನರು ವಿವಿಧ ಪ್ರಕಾರದಲ್ಲಿ ಸಹಕಾರ ನೀಡುತ್ತಿದ್ದಾರೆ. ಕ್ಷೇತ್ರದಲ್ಲಿ ವಿವಿಧ ಅಭಿವೃದ್ಧಿ ನಡೆದಿದೆ. ಬ್ರಹ್ಮಕಲಶೋತ್ಸವ ಸಂಭ್ರಮದಲ್ಲಿ ಸರ್ವರೂ ಪಾಲ್ಗೊಳ್ಳುವ ಮೂಲಕ ಶ್ರೀದೇವರ ಕೃಪೆಗೆ ಪಾತ್ರರಾಗೋಣ ಎಂದರು.
ಮಂಗಳೂರು ಮೇಯರ್‌ ಸುಧೀರ್‌ ಶೆಟ್ಟಿ ಕಣ್ಣೂರು, ಕ್ಷೇತ್ರದ ಪುರೋಹಿತರಾದ ವೆಂಕಟರಮಣ, ಬ್ರಹ್ಮಕಲಶೋತ್ಸವ ಸಮಿತಿ ಅಧ್ಯಕ್ಷ ಅನಿಲ್‌ ಕುಮಾರ್‌ ಕರ್ಕೇರ ಬೊಕ್ಕಪಟ್ಣ, ಪ್ರಧಾನ ಸಂಚಾಲಕ ಗೌತಮ್‌ ಸಾಲ್ಯಾನ್‌ ಕೋಡಿಕಲ್‌, ಪ್ರಧಾನ ಕಾರ್ಯದರ್ಶಿ ಜಗದೀಶ್‌ ಬಂಗೇರ ಬೋಳೂರು, ಪ್ರಮುಖರಾದ ಲಕ್ಷ್ಮಣ್‌ ಅಮೀನ್‌ ಕೋಡಿಕಲ್‌, ಚೇತನ್‌ ಬೆಂಗ್ರೆ ಸಹಿತ ಗಣ್ಯರು ಉಪಸ್ಥಿತರಿದ್ದರು.

ನೆಹರೂ ಮೈದಾನದಿಂದ ಆರಂಭವಾದ ಹೊರೆಕಾಣಿಕೆ ಮೆರವಣಿಗೆಗೆ ಎ.ಜೆ. ಸಮೂಹ ಸಂಸ್ಥೆಗಳ ಅಧ್ಯಕ್ಷ ಎ.ಜೆ.ಶೆಟ್ಟಿ ಅವರು ಚಾಲನೆ ನೀಡಿದರು. ಗಣೇಶ್‌ ಕುಲಾಲ್‌, ಲೋಕೇಶ್‌ ಸುವರ್ಣ, ಶಶಿಕುಮಾರ್‌ ಬೆಂಗ್ರೆ, ಭರತ್‌ ಭೂಷಣ್‌, ಮೋಹನ್‌ ಬೆಂಗ್ರೆ, ನಿತಿನ್‌ ಕುಮಾರ್‌ ಮುಂತಾದವರು ಉಪಸ್ಥಿತರಿದ್ದರು.

 

ಆಕರ್ಷಕ ಹೊರೆದಿಬ್ಬಣ
ಮೆರವಣಿಗೆಯಲ್ಲಿ ಕೇಸರಿ ಪೇಟಧಾರಿಗಳು, ಭಜನ ತಂಡಗಳು, ಕೊಂಬು-ಚೆಂಡೆ, ಕೀಲು ಕುದುರೆ, ಶಿಲ್ಪಕಲಾಗೊಂಬೆ ತಂಡಗಳು, ನಾಸಿಕ್‌ ತಂಡಗಳು ವಿಶೇಷ ಮೆರುಗು ನೀಡಿದವು. ಹೂವು, ತೋರಣ, ಬಾಳೆಗೊನೆ, ಭಗವಾಧ್ವಜ ಅಲಂಕಾರದಿಂದ ಶೋಭಿಸಿದ ವಾಹನಗಳಲ್ಲಿ ಹಸುರು ಹೊರೆಕಾಣಿಕೆಯನ್ನು ತರಲಾಯಿತು. ಉರ್ವ ಮಾರಿಯಮ್ಮ ದೇವಸ್ಥಾನ, ಮೀನುಗಾರಿಕೆ ಬೋಟು, ಶ್ರೀರಾಮ ಸಹಿತವಾದ ಅಯೋಧ್ಯೆ ದೇವಸ್ಥಾನ, ಮಹಿಷ ಮರ್ದಿನಿ, ಬಲಿ ಚಕ್ರವರ್ತಿ, ಹನುಮಾನ್‌ ಸ್ತಬ್ದಚಿತ್ರಗಳು ಗಮನ ಸೆಳೆದವು.

Vishwa News 24

Recent Posts

ಎಸ್‌ಐಆರ್‌ ವಿವಾದ: ಬಿಜೆಪಿ ಕಾರ್ಯಕರ್ತರಿಗೆ ಕಿರುಕುಳ ನೀಡಿದರೆ ರಾಜ್ಯಾದ್ಯಂತ ಹೋರಾಟ :ಯಡಿಯೂರಪ್ಪ ಎಚ್ಚರಿಕೆ – vishwanews24

ಬಿಜೆಪಿ ಕಾರ್ಯಕರ್ತರ ಮೇಲಿನ FIR ರದ್ದಿಗೆ ಆಗ್ರಹ : ರಾಜ್ಯಾದ್ಯಂತ ಹೋರಾಟದ ಎಚ್ಚರಿಕೆ ನೀಡಿದ ಬಿಎಸ್‌ವೈ ಬೆಂಗಳೂರು: ಎಸ್‍ಐಆರ್ ಸಂಬಂಧ…

5 hours ago

ಮಂಗಳೂರು: ಮನೆ ಕನ್ನ ಕಳವು ಪ್ರಕರಣ ಭೇದಿಸಿದ ಪೊಲೀಸರು; ದೆಹಲಿ ಮೂಲದ ಇಬ್ಬರ ಬಂಧನ – vishwanews24

ಮಂಗಳೂರು: ಮನೆ ಕನ್ನ ಕಳವು ಪ್ರಕರಣ ಭೇದಿಸಿದ ಪೊಲೀಸರು; ದೆಹಲಿ ಮೂಲದ ಇಬ್ಬರ ಬಂಧನ, 18 ಲಕ್ಷ ಮೌಲ್ಯದ ಸೊತ್ತು…

5 hours ago

ಏಷ್ಯನ್ ಗೇಮ್ಸ್ : ಕುಸ್ತಿಯಲ್ಲಿ ಚಿನ್ನ ಗೆದ್ದ ಅಮನ್ ಸೆಹ್ರಾವತ್ – vishwanews24

ಏಷ್ಯನ್ ಗೇಮ್ಸ್ : ಕುಸ್ತಿಯಲ್ಲಿ ಚಿನ್ನ ಗೆದ್ದ ಅಮನ್ ಸೆಹ್ರಾವತ್ ನಗೋಯಾ: ಜಪಾನ್‌ನ ಐಚಿ-ನಗೋಯಾದಲ್ಲಿ ನಡೆಯುತ್ತಿರುವ 2026ರ ಏಷ್ಯನ್ ಗೇಮ್ಸ್‌ನಲ್ಲಿ…

6 hours ago

ಕಾರ್ಕಳ : ಅ. 5 ರಂದು ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿಯಿಂದ ಬೃಹತ್ ಪ್ರತಿಭಟನೆ – vishwanews24

ಕಾರ್ಕಳ : ಅ. 05 ರಂದು ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿಯಿಂದ ಬೃಹತ್ ಪ್ರತಿಭಟನೆ ಕಾರ್ಕಳ: ರಾಜ್ಯ ಕಾಂಗ್ರೆಸ್ ಸರ್ಕಾರದ…

6 hours ago

ಮಂಗಳೂರು: ಯುವನಿಧಿ ಫಲಾನುಭವಿಗಳಿಗೆ ಕೌಶಲ ಭಾಗ್ಯ: ಉಚಿತ ತರಬೇತಿ ಮತ್ತು ಉದ್ಯೋಗಾವಕಾಶಕ್ಕಾಗಿ ಅರ್ಜಿ ಆಹ್ವಾನ – vishwanews24

ಮಂಗಳೂರು: ಯುವನಿಧಿ ಫಲಾನುಭವಿಗಳಿಗೆ ಕೌಶಲ ಭಾಗ್ಯ: ಉಚಿತ ತರಬೇತಿ ಮತ್ತು ಉದ್ಯೋಗಾವಕಾಶಕ್ಕಾಗಿ ಅರ್ಜಿ ಆಹ್ವಾನ ಮಂಗಳೂರು: ಕರ್ನಾಟಕ ಸರ್ಕಾರದ ಮಹತ್ವಾಕಾಂಕ್ಷೆಯ…

6 hours ago

180 ಜನರ ಪ್ರಾಣ ಉಳಿಸಿದ ಭಾರತೀಯ ಪೈಲಟ್ ಸ್ಮಿತ್ ಮಚ್ಚಾರ್‌ಗೆ 1 ಕೋಟಿ ರೂ. ಘೋಷಣೆ – vishwanews24

180 ಜನರ ಪ್ರಾಣ ಉಳಿಸಿದ ಭಾರತೀಯ ಪೈಲಟ್ ಸ್ಮಿತ್ ಮಚ್ಚಾರ್‌ಗೆ 1 ಕೋಟಿ ರೂ. ಘೋಷಣೆ ನವದೆಹಲಿ : ದುಬೈನಿಂದ…

6 hours ago