Featured

ಮಂಗಳೂರು:  ಉಳ್ಳಾಲ ಕ್ಷೇತ್ರಕ್ಕೆ ಯು ಟಿ ಖಾದರ್ ವಿರುದ್ಧ SDPI ಪಕ್ಷದ ರಿಯಾಝ್ ಫರಂಗಿ ಪೇಟೆ  – Vishwanews24

ಮಂಗಳೂರು:  ಉಳ್ಳಾಲ ಕ್ಷೇತ್ರಕ್ಕೆ ಯು ಟಿ ಖಾದರ್ ವಿರುದ್ಧ SDPI ಪಕ್ಷದ ರಿಯಾಝ್ ಫರಂಗಿ ಪೇಟೆ

ಮಂಗಳೂರು: ರಾಜ್ಯ ವಿಧಾನ ಸಭಾ ಚುನಾವಣಾ ಕಾವು ಜೋರಾಗಿದ್ದು, ಚುನಾವಣಾ ದಿನಾಂಕ ಘೋಷಣೆಗೂ ಮುನ್ನವೇ ಇದೀಗ ಸೋಲು ಗೆಲುವಿನ ಲೆಕ್ಕಾಚಾರ ಶುರುವಾಗಿದೆ. ದಕ್ಷಿಣ ಕನ್ನಡ 8 ವಿಧಾನ ಸಭಾ ಕ್ಷೇತ್ರದಲ್ಲಿ ಸತತ ಗೆಲುವಿನ ಸರದಾರ ಮಂಗಳೂರು ಅಂದರೆ ಉಳ್ಳಾಲ ಕ್ಷೇತ್ರದ ಕಾಂಗ್ರೆಸ್ ಶಾಸಕ ಯು ಟಿ ಖಾದರ್ ಅವರನ್ನು ಕಟ್ಟಿ ಹಾಕಲು ಇತರ ಪಕ್ಷಗಳು ಸತತ ಪ್ರಯತ್ನ ನಡೆಸಿವೆ. ಈ ಬಾರಿ ಉಳ್ಳಾಲ ಕ್ಷೇತ್ರದ ಚುನಾವಣೆ ಇನ್ನಷ್ಟು ರೋಚಕವಾಗಿರಲಿದೆ. ಇದಕ್ಕೆ ಪ್ರಮುಖ ಕಾರಣ ಎಸ್ ಡಿಪಿಐ ಪಕ್ಷ ಉಳ್ಳಾಲ ಕ್ಷೇತ್ರಕ್ಕೆ ರಿಯಾಝ್ ಫರಂಗಿ ಪೇಟೆಯನ್ನು ಕಣಕ್ಕಿಳಿಸಿದೆ.

ತಾಂಟ್ರೆ ಬಾ ತಾಂಟ್‌ ಭಾಷಣದ ಮೂಲಕ ಪ್ರಸಿದ್ಧಿಗೆ ಬಂದಿರುವ ರಿಯಾಝ್‌ ಎಸ್‌ಡಿಪಿಐ ಪಕ್ಷದ ಜನಪ್ರಿಯ ನಾಯಕ. ಎಲ್ಲರನ್ನೂ ಒಗ್ಗೂಡಿಸಿಕೊಂಡು ಹೋಗುವ ಚಾಕಚಕ್ಯತೆ ಉಳ್ಳವರು. ಹೀಗಾಗಿ ಯು ಟಿ ಖಾದರ್ ವಿರುದ್ಧ ಎಸ್‌ಡಿಪಿಐ ಸಮರ್ಥ ಅಭ್ಯರ್ಥಿಯನ್ನೇ ಕಣಕ್ಕಿಳಿಸಿದ್ದು,ಈ ಬಾರಿ ಉಳ್ಳಾಲವನ್ನು ಕರಾವಳಿಯಲ್ಲಿ ತನ್ನ ಗೆಲುವಿಗೆ ಮೆಟ್ಟಲನ್ನಾಗಿ ಮಾಡಬಹುದೇ ಎನ್ನುವ ಪ್ರಶ್ನೆ ಎದುರಾಗಿದೆ.

ಇನ್ನು ಬಿಜೆಪಿ ಕೂಡಾ ಇಲ್ಲಿ ಖಾದರ್ ವಿರುದ್ಧ ಸಮರ್ಥ ಅಭ್ಯರ್ಥಿಯನ್ನೇ ಕಣಕ್ಕಿಳಿಸಲು ಹುಡುಕಾಟ ನಡೆಸುತ್ತಿದೆ. ಆದರೆ ಅದಕ್ಕೂ ಖಾದರ್ ವಿರುದ್ಧ ಸ್ಪರ್ಧಿಸುವ ಅಭ್ಯರ್ಥಿ ಸಮರ್ಥ ಅಭ್ಯರ್ಥಿ ಕೊರತೆ ಕಾಡಿದೆ.ಆದರೆ ಖಾದರ್ ಮಾತ್ರ ಯಾವುದೇ ತಲೆ ಕೆಡಿಸಿಕೊಳ್ಳದೇ ತನ್ನ ಕೆಲಸ ಕಾರ್ಯಗಳನ್ನು ಯಾವುದೇ ಜಾತಿ, ಮತ, ಧರ್ಮ ಇಲ್ಲದೇ ಎಲ್ಲರನ್ನೂ ಒಗ್ಗೂಡಿಸಿಕೊಂಡು ಹೋಗುತ್ತಿದ್ದಾರೆ.ಒಟ್ಟಿನಲ್ಲಿ ಉಳ್ಳಾಲ ಕ್ಷೇತ್ರದ ಚುನಾವಣಾ ಕ್ಷೇತ್ರ ಮಾತ್ರ ಈ ಬಾರಿ ರೋಚಕವಾಗಿರಲಿದೆ.

Vishwa News 24

Recent Posts

ಭಾರೀ ಮಳೆ ಮುನ್ಸೂಚನೆ : ನಾಳೆ(ಜುಲೈ 2)ದ.ಕ ಜಿಲ್ಲೆಯ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ -vishwanews24

ಭಾರೀ ಮಳೆ ಮುನ್ಸೂಚನೆ : ನಾಳೆ(ಜುಲೈ 2)ದ.ಕ ಜಿಲ್ಲೆಯ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಮಂಗಳೂರು: ಕರಾವಳಿ ಕರ್ನಾಟಕದಲ್ಲಿ ಭಾರೀ ಮಳೆಯಾಗುವ…

6 hours ago

ಶಿರ್ವ : ಕಾರಿಗೆ ಡೀಸೆಲ್ ತುಂಬಿಸಿ ಹಣ ನೀಡದೆ ಪಾವತಿಸದೆ ಪರಾರಿ ; ಪ್ರಕರಣ ದಾಖಲು – vishwanews24

ಶಿರ್ವ : ಕಾರಿಗೆ ಡೀಸೆಲ್ ತುಂಬಿಸಿ ಹಣ ನೀಡದೆ ಪಾವತಿಸದೆ ಪರಾರಿ ; ಪ್ರಕರಣ ದಾಖಲು ಶಿರ್ವ : ಶಂಕರಪುರದ…

8 hours ago

ಹಜ್ ಯಾತ್ರೆ – 2027 : ಅರ್ಜಿ ಸಲ್ಲಿಕೆಗೆ ಜುಲೈ 20 ಕೊನೆ ದಿನ – vishwanews24

ಹಜ್ ಯಾತ್ರೆ - 2027 : ಅರ್ಜಿ ಸಲ್ಲಿಕೆಗೆ ಜುಲೈ 20 ಕೊನೆ ದಿನ ಬೆಂಗಳೂರು: ಮುಂದಿನ (2027ನೇ) ಸಾಲಿನಲ್ಲಿ…

9 hours ago

ಉಡುಪಿ: ಭಾರೀ ಮಳೆಯಾಗುವ ಸಾಧ್ಯತೆ ; ಜುಲೈ 2 ಮತ್ತು 3ರಂದು ರೆಡ್‌ ಅಲರ್ಟ್ ಘೋಷಣೆ  – vishwanews24

ಉಡುಪಿ: ಭಾರೀ ಮಳೆಯಾಗುವ ಸಾಧ್ಯತೆ ; ಜುಲೈ 2 ಮತ್ತು 3ರಂದು ರೆಡ್‌ ಅಲರ್ಟ್ ಘೋಷಣೆ  ಮೀನುಗಾರರು ಸಮುದ್ರಕ್ಕೆ ಇಳಿಯದಂತೆ…

9 hours ago

ಇಂದಿನಿಂದ ಜಾರಿಗೆ ಬರಲಿವೆ ಹೊಸ ರೂಲ್ಸ್‌: LPG, ಆಧಾರ್, ರೈಲ್ವೆ, ಬ್ಯಾಂಕ್ ಸೇವೆಗಳಲ್ಲಿ ಬದಲಾವಣೆ – vishwanews24

ಇಂದಿನಿಂದ ಜಾರಿಗೆ ಬರಲಿವೆ ಹೊಸ ರೂಲ್ಸ್‌: LPG, ಆಧಾರ್, ರೈಲ್ವೆ, ಬ್ಯಾಂಕ್ ಸೇವೆಗಳಲ್ಲಿ ಬದಲಾವಣೆ ನವದೆಹಲಿ: ಇಂದಿನಿಂದ ದೇಶಾದ್ಯಂತ ಹಲವು…

9 hours ago

ಬ್ರಹ್ಮಾವರ : ಭೀಕರ ರಸ್ತೆ ಅಪಘಾತ ; ಖ್ಯಾತ ಹುಲಿ ವೇಷ ಕಲಾವಿದ ಸಾವು – vishwanews24

ಬ್ರಹ್ಮಾವರ :ಭೀಕರ ರಸ್ತೆ ಅಪಘಾತ: ಪ್ರಸಿದ್ಧ ಹುಲಿ ವೇಷ ಕಲಾವಿದ ಸಾವು ಬ್ರಹ್ಮಾವರ: ರಾಷ್ಟ್ರೀಯ ಹೆದ್ದಾರಿ 66ರ ಬ್ರಹ್ಮಾವರದ ಹೇರೂರು…

10 hours ago