ಮಂಗಳೂರು : ಉಳ್ಳಾಲದ ನೇತ್ರಾವತಿ ನದಿ ಸೇತುವೆಯ ಎರಡೂ ಕಡೆಗಳಲ್ಲಿ ಸುರಕ್ಷತಾ ತಡೆಗೋಡೆ ಅಳವಡಿಕೆಗೆ ಕ್ರಿಯಾ ಯೋಜನೆ ಹಾಗೂ ಸೇತುವೆಯ ಎರಡೂ ಬದಿಗಳಲ್ಲಿ ತಕ್ಷಣವೇ ಸಿಸಿ ಕ್ಯಾಮರಾ ಅಳವಡಿಕೆಗೆ ಶನಿವಾರ ನಡೆದ ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರ ಸಭೆಯಲ್ಲಿ ಸೂಚನೆ ನೀಡಲಾಗಿದೆ ಎಂದು ಶಾಸಕ ವೇದವ್ಯಾಸ್ ಕಾಮತ್ ತಿಳಿಸಿದ್ದಾರೆ.
ಇಂದು ನಡೆದ ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರ ಸಭೆಯಲ್ಲಿ ಮಂಗಳೂರು – ಕೇರಳ ರಾಷ್ಟ್ರೀಯ ಹೆದ್ದಾರಿಯಲ್ಲಿ ಬರುವ ನೇತ್ರಾವತಿ ಸೇತುವೆಯಲ್ಲಿ ಹೆಚ್ಚುತ್ತಿರುವ ಅಹಿತಕರ ಘಟನೆಗಳನ್ನು ತಡೆಯವ ನಿಟ್ಟಿನಲ್ಲಿ ಸೇತುವೆಯ ಎರಡು ಕಡೆಗಳಲ್ಲಿ ಸುರಕ್ಷತಾ ತಡೆಗೋಡೆ ಅಳವಡಿಸುವ ಕಾಮಗಾರಿಗೆ ಕ್ರಿಯಾ ಯೋಜನೆ ತಯಾರಿಸಿ ಮುಂದಿನ ತಿಂಗಳು ನಡೆಯುವ ಸಭೆಯಲ್ಲಿ ಅನುಮೋದನೆ ನೀಡುವ ಕುರಿತು ನಿರ್ಧರಿಸಲಾಗಿದೆ. ಹಾಗೂ ತಕ್ಷಣವೇ ಇಕ್ಕೆಲಗಳಲ್ಲಿ ಸಿಸಿಟಿವಿ ಕ್ಯಾಮರಾ ಅಳವಡಿಕೆಗೆ ಸೂಚನೆ ನೀಡಲಾಗಿದೆ ಎಂದು ಅವರು ತಿಳಿಸಿದ್ದಾರೆ.
ವೆಲೆನ್ಸಿಯಾ ಜಂಕ್ಷನ್‌ನಲ್ಲಿರುವ ಪಾರ್ಕನ್ನು ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರದ ಕಡೆಯಿಂದ ತಕ್ಷಣವೇ ಅಭಿವೃದ್ಧಿಪಡಿಸಲು ನಿರ್ಧರಿಸಲಾಗಿದೆ. ನಗರದ ಸೌಂದರ್ಯ ಹೆಚ್ಚಿಸಲು ಸಹಕಾರಿಯಾಗುವಂತೆ ಪಾರ್ಕ್ ಅಭಿವೃದ್ಧಿಗೊಳಿಸಲಾಗುವುದು ಎಂದು ಅವರು ತಿಳಿಸಿದ್ದಾರೆ.
ಸಭೆಯಲ್ಲಿ ಜಿಲ್ಲಾಧಿಕಾರಿ ಸಿಂಧೂ ರೂಪೇಶ್, ವಿಧಾನ ಪರಿಷತ್ ಸದಸ್ಯರಾದ ಐವನ್ ಡಿಸೋಜ, ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರದ ಆಯುಕ್ತರಾದ ಶ್ರೀಕಾಂತ್ ರಾವ್, ಪಾಲಿಕೆ ಆಯುಕ್ತ ಶಾನಾಡಿ ಅಜಿತ್ ಕುಮಾರ್ ಹೆಗ್ಡೆ ಹಾಗೂ ಇತರ ಅಧಿಕಾರಿಗಳು ಉಪಸ್ಥಿತರಿದ್ದರು.
ಇಲ್ಲಿಯವರೆಗೂ ಏಷ್ಟೋ ದೈವ ದೇವರು ಜ್ಯೋತಿಷ್ಯರಲ್ಲಿ ಕೇಳಿ ಸರಿಯಾದ ಪರಿಹಾರ ಸಿಗದೆ ನೊಂದಿದ್ದರೆ.ಅಂತಃಹ ಯಾವುದೇ ಕಠಿಣ ಸಮಸ್ಯೆ ಗಳಿದ್ದರು ಉತ್ತಮ ಸಲಹೆ ಹಾಗೂ ಶಾಶ್ವತ ಪರಿಹಾರ ತಿಳಿಸುತ್ತಾರೆ.
ಇಂದೇ ಸಂಪರ್ಕಿಸಿ ಪಂಡಿತ್ ವೈದಿಕ ಶ್ರೀ ಗಣಪತಿ ಭಟ್
8088827292
ಮೂಡುಬಿದಿರೆ: ಚಲಿಸುತ್ತಿದ್ದ ಕಾರಿನಲ್ಲಿ ಬೆಂಕಿ; ಪ್ರಯಾಣಿಕರು ಪ್ರಾಣಾಪಾಯದಿಂದ ಪಾರು ಮೂಡುಬಿದಿರೆ : ಚಲಿಸುತ್ತಿದ್ದ ಕಾರಿನ ಫಾಗ್ ಲೈಟ್‌ನಿಂದ ಅಕಸ್ಮಾತ್ತಾಗಿ ಬೆಂಕಿ…
ಆರೆಸ್ಸೆಸ್‌ನವರು ಇಂದಲ್ಲ ನಾಳೆ ದಾಖಲೆ ಕೊಡುತ್ತಾರೆ, ಕೊಡದೆ ಎಲ್ಲಿ ಹೋಗುತ್ತಾರೆ : ಪ್ರಿಯಾಂಕ ಖರ್ಗೆ ಬೆಂಗಳೂರು: ಆರೆಸ್ಸೆಸ್‌ನವರು ಇಂದಲ್ಲ ನಾಳೆ ದಾಖಲೆ…
ಉಡುಪಿ : ಬಾಲಕಿ ನಾಪತ್ತೆ ಉಡುಪಿ : ಉಡುಪಿ ಮಹಿಳಾ ಪೊಲೀಸ್ ಠಾಣಾ ವ್ಯಾಪ್ತಿಯ ನಿವಾಸಿ ಪ್ರೀತಿ (16) ಎಂಬ…
ಮಂಗಳೂರು ವಿಮಾನ ನಿಲ್ದಾಣದಲ್ಲಿ 'ಉಬರ್' ಸೇವೆ ಆರಂಭ ಪ್ರಯಾಣಿಕರಿಗೆ ವೇಗವಾದ ಮತ್ತು ಸುಲಭ ಸಾರಿಗೆ ಸೌಲಭ್ಯ ಮಂಗಳೂರು: ಮಂಗಳೂರು ಅಂತರರಾಷ್ಟ್ರೀಯ…
ಉಡುಪಿ ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ ಅತ್ಯಂತ ಖಂಡನೀಯ ಕೃತ್ಯ : ರೆನೋಲ್ಡ್ ಪ್ರವೀಣ್ ಕುಮಾರ್ ಉಡುಪಿ: ಜಿಲ್ಲಾ ನ್ಯಾಯಾಲಯಕ್ಕೆ…
ಉಡುಪಿ : ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ ಸಂದೇಶ ; ಪೊಲೀಸರು, ಶ್ವಾನ ದಳದಿಂದ ಶೋಧ ಕಾರ್ಯಾಚರಣೆ ಉಡುಪಿ: ಉಡುಪಿ…