ಮಂಗಳೂರು: ಕೆಫೆ ಕಾಫಿ ಡೇ ಸ್ಥಾಪಕ ಸಿದ್ದಾರ್ಥ ವಿ.ಜಿ ಅವರು ಉಳ್ಳಾಲದ ನೇತ್ರಾವತಿ ಸೇತುವೆಯ ಬಳಿ ಸಾವನ್ನಪ್ಪಿದ ಬಳಿಕ ಮುಂದಿನ ದಿನಗಳಲ್ಲಿ ಇಂತಹ ಅನಾಹುತಗಳನ್ನು ತಪ್ಪಿಸುವ ಸಲುವಾಗಿ ಸೇತುವೆಗೆ ಸಿಸಿಟಿವಿ ಅಳವಡಿಸಲು ಶಾಸಕ ವೇದವ್ಯಾಸ ಕಾಮತ್ ಚಿಂತನೆ ನಡೆಸಿದ್ದಾರೆ.
ಶುಕ್ರವಾರ ಬೆಳಿಗ್ಗೆ ಫೇಸ್ ಬುಕ್ ಪೋಸ್ಟ್ ಮಾಡಿರುವ ಶಾಸಕ ಕಾಮತ್, ʼʼಮಂಗಳೂರಿನಿಂದ ಉಳ್ಳಾಲಕ್ಕೆ ಹೋಗುವ ರಸ್ತೆಯಲ್ಲಿ ಪ್ರಮುಖವಾಗಿ ಸಿಗುವ ನೇತ್ರಾವತಿ ಸೇತುವೆ ಅಥವಾ ಉಳ್ಳಾಲ ಸೇತುವೆಗೆ ಸಿಸಿಟಿವಿ ಅಳವಡಿಸಲು ಚಿಂತನೆ ಮಾಡಿದ್ದು, ಈ ಬಗ್ಗೆ ಮುಂದಿನ ದಿನಗಳಲ್ಲಿ ಜಿಲ್ಲಾಧಿಕಾರಿಯವರೊಂದಿಗೆ ಸಮಾಲೋಚಿಸುತ್ತೇನೆ.
ನೇತ್ರಾವತಿ ಸೇತುವೆ ಇತ್ತೀಚಿನ ದಿನಗಳಲ್ಲಿ ಹೆಚ್ಚು ಅಪಾಯಕಾರಿ ತಾಣವಾಗಿ ಪರಿಣಮಿಸುತ್ತದೆ. ಆತ್ಮಹತ್ಯೆಯಂತಹ ಅಹಿತಕರ ಘಟನೆಗಳಿಗೆ ಇದು ಕಾರಣವಾಗುತ್ತಿದೆ. ಸಿಸಿಟಿವಿಗಳನ್ನು ಅಳವಡಿಸುವುದರಿಂದ ಸೇತುವೆಯ ಮೇಲೆ ನಡೆದ ದುರ್ಘಟನೆಗಳನ್ನು ತಕ್ಷಣ ಪರಿಶೀಲಿಸಲು ಅನುಕೂಲವಾಗುತ್ತದೆ. ಸಿಸಿಟಿವಿ ದೃಶ್ಯಗಳನ್ನು ಪರಿಶೀಲಿಸಿ ಮುಂದಿನ ಕ್ರಮ ಕೈಗೊಳ್ಳುವುದರಿಂದ ಜಿಲ್ಲಾಡಳಿತ ಹಾಗೂ ಪೊಲೀಸ್ ಇಲಾಖೆಯ ಸಮಯ ಮತ್ತು ಶ್ರಮ ವ್ಯರ್ಥವಾಗುವುದಿಲ್ಲ.
ಇನ್ನು ಮನೆಯಿಂದ ನಾಪತ್ತೆಯಾಗುವ ವ್ಯಕ್ತಿಗಳ ಬಗ್ಗೆ ಇಂತಹ ಸಿಸಿಟಿವಿ ಕ್ಯಾಮೆರಾಗಳ ದೃಶ್ಯಗಳು ನಾಪತ್ತೆಯಾದವರ ಮನೆಯವರಿಗೆ, ಗೆಳೆಯರಿಗೆ ಹಾಗೇ ನಾಪತ್ತೆ ಪ್ರಕರಣಗಳ ತನಿಖೆ ನಡೆಸುವ ಪೊಲೀಸ್ ಅಧಿಕಾರಿಗಳಿಗೆ ಅನುಕೂಲವಾಗುತ್ತದೆ. ಒಟ್ಟಿನಲ್ಲಿ ಸಿಸಿಟಿವಿ ಕ್ಯಾಮೆರಾಗಳ ಅಳವಡಿಕೆಯಿಂದ ಪೊಲೀಸ್ ಇಲಾಖೆಗೆ ತನಿಖೆಗೆ ಸಹಕಾರಿಯಾಗುವುದನ್ನು ದೃಷ್ಟಿಯಲ್ಲಿಟ್ಟು ಈ ಬಗ್ಗೆ ಕ್ರಮ ಕೈಗೊಳ್ಳುವುಗುವುದುʼʼ ಎಂದಿದ್ದಾರೆ.
ತನ್ನ ಫೇಸ್ ಬುಕ್ ಖಾತೆಯಲ್ಲಿ ಮಂಗಳೂರು ದಕ್ಷಿಣ ಕ್ಷೇತ್ರದ ಶಾಸಕ ವೇದವ್ಯಾಸ ಕಾಮತ್ ಅವರು ಉಳ್ಳಾಲ ಸೇತುವೆಗೆ ಸಿಸಿಟಿವಿ ಅಳವಡಿಕೆಗೆ ಬಗ್ಗೆ ಜಿಲ್ಲಾಧಿಕಾರಿಯವರೊಂದಿಗೆ ಸಮಾಲೋಚನೆ ನಡೆಸುತ್ತೇನೆ ಎಂದು ಬರೆದುಕೊಂಡಿದ್ದಾರೆ.
ಉಡುಪಿ ಜಿಲ್ಲೆಯ ನಿರ್ಲಕ್ಷ್ಯ : ಮೇ 16ರಂದು ಜಿಲ್ಲಾ ಉಸ್ತುವಾರಿ ಸಚಿವರಿಗೆ ಕಪ್ಪು ಬಾವುಟ ಪ್ರದರ್ಶಿಸಿ ಪ್ರತಿಭಟನೆ : ಪೃಥ್ವಿರಾಜ್…
ಸಾಂಪ್ರದಾಯಿಕ ಧಾರ್ಮಿಕ ಸಂಕೇತಗಳನ್ನು ಧರಿಸಬಹುದು, ಹೊಸದಾಗಿ ಮಾಡುವಂತಿಲ್ಲ : ಸಿಎಂ ಸ್ಪಷ್ಟನೆ ಮೈಸೂರು : "ಪ್ರಾಥಮಿಕ ತರಗತಿಯಿಂದ 12ನೇ ತರಗತಿಯವರೆಗೆ…
ಮದ್ಯ ಖರೀದಿ, ಮಾರಾಟ ಮಾಡಲು 21 ವರ್ಷ ಕಡ್ಡಾಯ : ಸಿಎಂ ವಿಜಯ್ ಸರ್ಕಾರ ಆದೇಶ ಚೆನ್ನೈ: ಇನ್ನು ಮುಂದೆ…
ಇಂದಿರಾ ಗಾಂಧಿ ನಂತರ ಯಾರಾದ್ರೂ ಮಾಸ್ ಲೀಡರ್ ಇದ್ರೆ, ಅದು ಮೋದಿ ಮಾತ್ರ: ಕೆ.ಎನ್ ರಾಜಣ್ಣ ನಾನು ಮೋದಿಯವರನ್ನು ಹೊಗಳುತ್ತಿಲ್ಲ.…
ಸಕ್ಕರೆ ರಫ್ತಿಗೆ ಸೆ.30 ರವರೆಗೆ ಸಂಪೂರ್ಣ ನಿಷೇಧ ಹೇರಿದ ಸರ್ಕಾರ ನವದೆಹಲಿ: ದೇಶೀಯ ಮಾರುಕಟ್ಟೆಯಲ್ಲಿ ಸಕ್ಕರೆ ಬೆಲೆಯನ್ನು ನಿಯಂತ್ರಿಸಲು ಮತ್ತು…
ಹಿಜಬ್ ಬಗ್ಗೆ ಮಾತಾಡುವ ಬಿಜೆಪಿಯವರು ನೀಟ್ ಬಗ್ಗೆ ಮಾತಾಡಲಿ : ಮಧು ಬಂಗಾರಪ್ಪ ಆಕ್ರೋಶ ಬೆಂಗಳೂರು: ಹಿಜಬ್ ಬಗ್ಗೆ ಮಾತಾಡುವ…