Featured

ಮಂಗಳೂರು : ಊಹಿಸಲು ಅಸಾಧ್ಯವಾದ ಅಪಪ್ರಚಾರಗಳನ್ನು ನಡೆಸಿ ನನ್ನನ್ನು ಸೋಲಿಸಲಾಗಿದೆ : ರಮಾನಾಥ ರೈ – Vishwanews24

ಸರ್ವರನ್ನೂ ಒಗ್ಗಟ್ಟಿನಲ್ಲಿ ಕೊಂಡೊಯ್ಯುವ ರಮಾನಾಥ ರೈಗಳು ಮತ್ತೊಮ್ಮೆ ಸಚಿವರಾಗಬೇಕು : ಮಹಿಳಾ ಕಾಂಗ್ರೆಸ್

ಮಂಗಳೂರು: ಎಲ್ಲಾ ಧರ್ಮ, ಜಾತಿಗಳನ್ನು ಒಗ್ಗಟ್ಟಾಗಿ ಕೊಂಡೊಯ್ದು ಜನ ಸೇವೆ ಮಾಡುವ ಕಾಂಗ್ರೆಸ್ ನ ಜನಪ್ರಿಯ ನಾಯಕ ಬಿ. ರಮಾನಾಥ ರೈ ಅವರು ಮತ್ತೊಮ್ಮೆ ಶಾಸಕರಾಗಿ ಆಯ್ಕೆಯಾಗಿ, ಸಚಿವರೂ ಆಗಬೇಕು ಎಂದು ರಾಜ್ಯ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಡಾ. ಪುಷ್ಪ ಅಮರನಾಥ್ ಆಶಯ ವ್ಯಕ್ತಪಡಿಸಿದ್ದಾರೆ. ಬಿ.ಸಿ. ರೋಡ್ ನ ಬ್ರಹ್ಮಶ್ರೀ ನಾರಾಯಣಗುರು ಸಭಾ ಭವನದಲ್ಲಿ ಪಾಣೆಮಂಗಳೂರು ಬ್ಲಾಕ್ ಮಹಿಳಾ ಕಾಂಗ್ರೆಸ್ ವತಿಯಿಂದ ಇಂದು ನಡೆದ ಮಾತೃಶಕ್ತಿ ಸಮಾವೇಶ ಉದ್ಘಾಟಿಸಿ ಅವರು ಮಾತನಾಡಿದರು.

ಸಾವಿತ್ರಿಬಾ ಫೂಲೆ ಅವರು ಮಹಿಳೆಯರಿಗೆ ಮೊತ್ತ ಮೊದಲ ಬಾರಿಗೆ ಶಿಕ್ಷಣ ನೀಡಿದ ಪರಿಣಾಮ ದೇಶದಲ್ಲಿ ಮಹಿಳೆಯರು ಸಾಕಷ್ಟು ಸಶಕ್ತರಾಗಿದ್ದಾರೆ. ತೊಟ್ಟಿಲು ತೂಗುವ ಕೈಗಳು ದೇಶವನ್ನು ಸಮರ್ಥವಾಗಿ ಮುನ್ನಡೆಸಬಲ್ಲವು ಎಂಬುದನ್ನು ದೇಶದ ಹೆಮ್ಮೆಯ ನಾಯಕಿ ಇಂದಿರಾ ಗಾಂಧಿ ತೋರಿಸಿಕೊಟ್ಟಿದ್ದಾರೆ. ಎರಡು ದಶಕಗಳ ಕಾಲ ಕಾಂಗ್ರೆಸ್ ಅನ್ನು ಸೋನಿಯಾ ಗಾಂಧಿ ಮುನ್ನಡೆಸಿದ್ದಾರೆ. ದೇಶದ ಪ್ರಥಮ ಮಹಿಳಾ ರಾಷ್ಟ್ರಪತಿ ಪ್ರತಿಭಾ ಪಾಟೀಲ್ ಕಾಂಗ್ರೆಸ್ ಕೊಡುಗೆ ಎಂದು ಅವರು ಈ ವೇಳೆ ಸ್ಮರಿಸಿದರು.

ಬಿಜೆಪಿ ಸಾಕಷ್ಟು ಸುಳ್ಳು ಭರವಸೆಗಳು ನೀಡಿ, ಊಹಾಪೋಹಗಳನ್ನು ಹರಡಿ, ಅಪಪ್ರಚಾರಗಳನ್ನು ಮಾಡಿ ಅಧಿಕಾರಕ್ಕೆ ಬಂದಿದೆ. ತಾನು ನೀಡಿದ ಯಾವುದೇ ಭರವಸೆಗಳನ್ನು ಅದು ಈಡೇರಿಸಿಲ್ಲ. ಆದರೆ ಕಾಂಗ್ರೆಸ್ ನುಡಿದಂತೆ ನಡೆದ ಪಕ್ಷ. ಈಗಲೂ ಗ್ಯಾರಂಟಿ ಕಾರ್ಡ್‍ಗಳ ಮೂಲಕ ಹಲವು ಕಾರ್ಯಕ್ರಮಗಳನ್ನು ಕಾಂಗ್ರೆಸ್ ಘೋಷಿಸಿದೆ. ನಮ್ಮ ಪಕ್ಷ ಅಧಿಕಾರಕ್ಕೆ ಬಂದರೆ ಇವೆಲ್ಲಾ ಕಾರ್ಯಕ್ರಮಗಳು ಖಚಿತವಾಗಿ ಜಾರಿಗೊಳ್ಳುತ್ತವೆ ಎಂದು ಅವರು ಭರವಸೆ ನೀಡಿದರು.

ಗೃಹಲಕ್ಷ್ಮಿ ಯೋಜನೆಯಡಿ ಪ್ರತಿಯೊಂದು ಮನೆ ಯಜಮಾನಿಗೆ ಮಾಸಿಕ 2,000 ರೂ., ಗೃಹಜ್ಯೋತಿ ಕಾರ್ಯಕ್ರಮದಡಿ 200 ಯೂನಿಟ್ ವಿದ್ಯುತ್ ಉಚಿತ ಮತ್ತು ವಿದ್ಯಾವಂತ ಪದವೀಧ ನಿರುದ್ಯೋಗಿಗಳಿಗೆ 3,000 ಹಾಗೂ ಡಿಪ್ಲೊಮಾ ಪದವೀಧರರಿಗೆ 1,500 ರೂ. ನೀಡುವ ಬಗ್ಗೆ ಕಾಂಗ್ರೆಸ್ ಗ್ಯಾರಂಟಿ ಯೋಜನೆಗಳನ್ನು ಘೋಷಿಸಿದೆ. ಪ್ರತಿಯೊಬ್ಬ ಸದಸ್ಯನಿಗೆ 10 ಕೆ.ಜಿ. ಅಕ್ಕಿ ವಿತರಿಸುವ ಬಗ್ಗೆಯೂ ಭರವಸೆ ನೀಡಿದೆ. ನೀಡಿದ ಭರವಸೆಗಳನ್ನು ಈಡೇರಿಸುವ ಮೂಲಕ ಮತ್ತೊಮ್ಮೆ ನುಡಿದಂತೆ ನಡೆದ ಸರಕಾರ ಎಂಬ ಹೆಗ್ಗಳಿಕೆಗೆ ಕಾಂಗ್ರೆಸ್ ಪಾತ್ರವಾಗಲಿದೆ ಎಂದು ಅವರು ಹೇಳಿದರು.

ತಾವು ಅಧಿಕಾರದಲ್ಲಿದ್ದಾಗ ಶಿಕ್ಷಣಕ್ಕೆ ಹೆಚ್ಚು ಮಹತ್ವ ನೀಡಿದ್ದ ರಮಾನಾಥ ರೈಗಳು ಏಷ್ಯಾದಲ್ಲೇ ಎರಡನೇ ಅತಿಹೆಚ್ಚು ಅಂಗನವಾಡಿಗಳನ್ನು ತೆರೆದ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. 20,000ಕ್ಕೂ ಹೆಚ್ಚು ಹಕ್ಕುಪತ್ರಗಳನ್ನು ವಿತರಿಸಿ ರಾಜ್ಯದಲ್ಲೇ ಅತ್ಯಧಿಕ ಹಕ್ಕುಪತ್ರಗಳನ್ನು ನೀಡಿದ ಜನನಾಯಕ ಎಂದು ಗುರುತಿಸಿಕೊಂಡಿದ್ದಾರೆ. ಹೀಗಾಗಿ ಮಹಿಳೆಯರು ಮತ್ತೊಮ್ಮೆ ಅವರನ್ನು ಶಾಸಕರನ್ನಾಗಿ ಆಯ್ಕೆ ಮಾಡುವ ಜವಾಬ್ದಾರಿಯನ್ನು ಹೊತ್ತುಕೊಳ್ಳಬೇಕು ಎಂದು ಅವರು ಕರೆ ನೀಡಿದರು.

ಉಳುವವನೇ ಹೊಲದ ಒಡೆಯ ಕಾನೂನು ಜಾರಿಯಾದ ಸಂದರ್ಭದಲ್ಲಿ ಭೂಮಿ ಕಳೆದುಕೊಂಡ ಕುಟುಂಬದಿಂದ ಬಂದಿದ್ದರೂ ಕಾಂಗ್ರೆಸ್ ನಲ್ಲೇ ಇನ್ನೂ ಸೇವೆ ಸಲ್ಲಿಸುತ್ತಿರುವ ರಮಾನಾಥ ರೈಗಳು ಈ ಬಾರಿ ಶಾಸಕರಾಗಿ ಆಯ್ಕೆಯಾದರೆ ಮತ್ತೊಮ್ಮೆ ಸಚಿವರಾಗುತ್ತಾರೆ ಎಂದು ದಿಕ್ಸೂಚಿ ಭಾಷಣ ಮಾಡಿದ ರಾಜ್ಯ ಕಾಂಗ್ರೆಸ್ ವಕ್ತಾರೆ ಭವ್ಯಾ ನರಸಿಂಹಮೂರ್ತಿ ಹೇಳಿದರು. ಬಿಜೆಪಿ ಆಡಳಿತದಲ್ಲಿ ಆಗಿರುವ ಬೆಲೆ ಏರಿಕೆಗಳಿಂದ ಜನರ ಉಳಿತಾಯಕ್ಕೆ ಆಗಿರುವ ನಷ್ಟ ಮತ್ತು ಕಾಂಗ್ರೆಸ್ ಮುಂದೆ ಅಧಿಕಾರಕ್ಕೆ ಬಂದರೆ ನೀಡಲಿರುವ ಗ್ಯಾರಂಟಿ ಯೋಜನೆಗಳಿಂದಾಗುವ ಉಳಿತಾಯಗಳ ಬಗ್ಗೆ ಕಾರ್ಯಕರ್ತರು ಜನತೆಗೆ ಮನವರಿಕೆ ಮಾಡಿಕೊಡಬೇಕು ಎಂದು ಅವರು ಸೂಚಿಸಿದರು.

ಎಲ್ಲಾ ಧರ್ಮಗಳಲ್ಲಿ ಸ್ತ್ರೀಯರಿಗೆ ಪ್ರಾಧಾನ್ಯತೆ ನೀಡಲಾಗಿದೆ. ಹಿಂದೂ, ಮುಸ್ಲಿಂ, ಕ್ರೈಸ್ತ ಎಲ್ಲರೂ ಒಗ್ಗಟ್ಟಾಗಿ ಈ ಬಾರಿ ಕಾಂಗ್ರೆಸ್ ಗೆಲ್ಲಿಸಬೇಕು ಎಂದು ಕೇರಳ ಮಹಿಳಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ, ಜಿಲ್ಲಾ ಉಸ್ತುವಾರಿ ಶಿಬಾ ರಾಮಚಂದ್ರನ್ ಮನವಿ ಮಾಡಿದರು.

ಮಾಜಿ ಪ್ರಧಾನಿ ರಾಜೀವ ಗಾಂಧಿಯವರು ಪಂಚಾಯತ್ ರಾಜ್ ಕಾನೂನಿನಡಿ ಗ್ರಾಮ ಪಂಚಾಯತ್, ತಾಲೂಕು ಪಂಚಾಯತ್, ಜಿಲ್ಲಾ ಪಂಚಾಯತ್ ವರೆಗಿನ ವಿವಿಧ ಹಂತಗಳಲ್ಲಿ ಮಹಿಳೆಯರಿಗೆ ಶೇ.50ರಷ್ಟು ಮಹಿಳಾ ಮೀಸಲಾತಿ ತಂದರು. ಹೀಗಾಗಿ ಇಂದು ಸಾಕಷ್ಟು ಮಹಿಳೆಯರು ಆಡಳಿತದ ವಿವಿಧ ಹಂತಗಳಲ್ಲಿ ಅಧಿಕಾರದಲ್ಲಿದ್ದಾರೆ. ವಿಧಾನಸಭೆ, ಲೋಕಸಭೆಯಲ್ಲೂ ಮಹಿಳೆಯರಿಗೆ ಮೀಸಲಾತಿ ಜಾರಿಗೊಳ್ಳಲು ಕಾಂಗ್ರೆಸ್ ಮತ್ತೆ ಅಧಿಕಾರಕ್ಕೆ ಬರಬೇಕಾಗಿದೆ ಎಂದು ಅಧ್ಯಕ್ಷತೆ ವಹಿಸಿದ್ದ ರಮಾನಾಥ ರೈ ಅವರು ತಿಳಿಸಿದರು.

ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರ ಆಡಳಿತಾವಧಿಯಲಿ ಅಧಿಕಾರದ ವಿಕೇಂದ್ರೀಕರಣದ ಮೂಲಕ ಅನುದಾನಗಳು ಕೆಳಹಂತದ ವರೆಗೂ ತಲುಪುವಂತೆ ಮಾಡಿದ್ದರು. ವೃದ್ಧಾಪ್ಯ ವೇತನ ಸಹಿತ ವಿವಿಧ ಪಿಂಚಣಿ ಯೋಜನೆಗಳು ನೇರವಾಗಿ ಫಲಾನುಭವಿಗಳ ಖಾತೆಗಳಿಗೆ ಜಮಾಗೊಳ್ಳುವಂತೆ ಮನಮೋಹನ್ ಸಿಂಗ್ ಅವಧಿಯಲ್ಲೇ ಆಗಿತ್ತು. ಆದರೆ ಈ ಬಗ್ಗೆ ತಪ್ಪು ಅಭಿಪ್ರಾಯಗಳನ್ನು ಹರಡಲಾಗುತ್ತಿದೆ ಎಂದು ಅವರು ಹೇಳಿದರು.
ಕಳೆದ ಚುನಾವಣೆಯಲ್ಲಿ ನಾನು ಊಹಿಸಲು ಅಸಾಧ್ಯವಾದ ಅಪಪ್ರಚಾರಗಳನ್ನು ನಡೆಸಿ ನನ್ನನ್ನು ಸೋಲಿಸಲಾಗಿದೆ. 6 ಸಲ ಶಾಸಕನಾಗಿ ಪ್ರಾಮಾಣಿಕ ಕೆಲಸ ಮಾಡಿದ್ದೇನೆ. ನಾನು ಪ್ರಾಮಾಣಿಕ ಕೆಲಸ ಮಾಡಿದ್ದು ಹೌದಾದರೆ, ಈ ಬಾರಿ ಚುನಾವಣೆಯಲ್ಲಿ ನೀವು ಗೆಲ್ಲಿಸಿಕೊಡಬೇಕು ಎಂದು ಅವರು ಮನವಿ ಮಾಡಿದರು.

ರಾಜ್ಯ ಪ್ರಧಾನ ಕಾರ್ಯದರ್ಶಿ ಮಮತಾ ಗಟ್ಟಿ. ದ.ಕ. ಜಿಲ್ಲಾ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಶಾಲೆಟ್ ಪಿಂಟೋ, ಸಭೆಯನ್ನುದ್ದೇಶಿಸಿ ಮಾತನಾಡಿದರು. ಪಾಣೆಮಂಗಳೂರು ಬ್ಲಾಕ್ ಕಾಂಗ್ರೆಸ್ ಉಸ್ತುವಾರಿ ಅಪ್ಪಿ, ಬಂಟ್ವಾಳ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಲವೀನಾ ಮೊರಾಸ್ ವೇದಿಕೆಯಲ್ಲಿದ್ದರು. ಪಾಣೆಮಂಗಳೂರು ಬ್ಲಾಕ್ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಜಯಂತಿ ವಿ. ಪೂಜಾರಿ ಸ್ವಾಗತಿಸಿದರು.

Vishwa News 24

Recent Posts

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ -vishwanews24

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…

3 days ago

ದೋಣಿ ಮುಗುಚಿ ಇಬ್ಬರು ಯುವಕರು ನೀರುಪಾಲು : ಓರ್ವನ ಮೃತದೇಹ ಪತ್ತೆ, ಇನ್ನೋರ್ವನಿಗಾಗಿ ಶೋಧ – vishwanews24

ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು  ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…

4 days ago

ಬಿಜೆಪಿ ಬೆಂಬಲಿಸುವವರೂ ನಮ್ಮ ಗ್ಯಾರಂಟಿಗಳ ಫಲಾನುಭವಿಗಳು : ಸಿದ್ದರಾಮಯ್ಯ – vishwanews24

 ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…

4 days ago

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ – vishwanews24

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…

4 days ago

ರೈಲು ಪ್ರಯಾಣಿಕರ ಗಮನಕ್ಕೆ: ಇಂದಿನಿಂದ ಬುಕ್ಕಿಂಗ್ ಮತ್ತು ರದ್ದತಿ  ನಿಯಮದಲ್ಲಿ ಭಾರಿ ಬದಲಾವಣೆ ; ಇಲ್ಲಿದೆ ಪೂರ್ಣ ಮಾಹಿತಿ – vishwanews24

ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…

4 days ago

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ – vishwanews24

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…

4 days ago