ಮಂಗಳೂರು : ಮೀನುಗಾರಿಕೆಗಾಗಿ ಆಳ ಸಮುದ್ರಕ್ಕೆ ತೆರಳಿದ್ದ ಮೀನುಗಾರಿಕೆ ಬೋಟ್ ಎಂಜಿನ್ ವೈಫಲ್ಯದಿಂದ ಸಮುದ್ರ ತಟದ ಕಲ್ಲು ಬಂಡೆಗಳಿಗೆ ಬಡಿದು ಪಲ್ಟಿ ಹೊಡೆದ ಘಟನೆ ಉಳ್ಳಾಲ ಸೀಗ್ರೌಂಡ್‌ನಲ್ಲಿ ಸೋಮವಾರ ಮುಂಜಾನೆ ಘಟನೆ ನಡೆದಿದೆ. ಹಡಗಿನಲ್ಲಿದ್ದ 13 ಮೀನುಗಾರರ ಪ್ರಾಣ ಅಪಾಯದಿಂದ ಪಾರಾಗಿದ್ದಾರೆ.
ಬುರಾಕ್ ಟ್ರಾಲರ್ ಎಂಬ ದೋಣಿ ಉಳ್ಳಾಲದ ಮುಕ್ಕಚ್ಚೇರಿ ನಿವಾಸಿ ಮೊಹಮ್ಮದ್ ಅಶ್ಫಾಕ್ ಅವರಿಗೆ ಸೇರಿದ್ದು, ಭಾನುವಾರ ರಾತ್ರಿ ಈ ಹಡಗು ಮಂಗಳೂರು ಬಂದರಿನಿಂದ ಕೇರಳದ ಕಡೆಗೆ ಆಳ ಸಮುದ್ರ ಮೀನುಗಾರಿಕೆಗಾಗಿ ಹೊರಟಿತ್ತು.
ಅದೃಷ್ಟವಶಾತ್, ಸಮುದ್ರ ಅಲೆಗಳ ಹೊಡೆತಕ್ಕೆ ಸಿಲುಕಿ, ದೋಣಿ ಕರಾವಳಿಯ ಕಡೆಗೆ ಸಾಗಿ ಸೋಮವಾರ ಮುಂಜಾನೆ ಸೀಗ್ರೌಂಡ್ ಬಳಿ ಎಂಜಿನ್ ಹಠಾತ್ತಾಗಿ ಬಂದ್ ಆಗಿ ಕಡಲ ತೀರಕ್ಕೆ ಡಿಕ್ಕಿ ಹೊಡೆದಿದೆ. 13 ಮೀನುಗಾರರು ಯಾವುದೇ ಅಪಾಯವಿಲ್ಲದೆ ಪಾರಾಗಿದ್ದಾರೆ. ಈ ಘಟನೆಯಿಂದ ದೋಣಿ ಮಾಲೀಕರಿಗೆ ಲಕ್ಷಾಂತರ ರೂಪಾಯಿ ನಷ್ಟವಾಗಿದೆ. ಘಟನೆಗೆ ಸಂಬಂಧಿಸಿದಂತೆ ಉಳ್ಳಾಲ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…