ಮಂಗಳೂರು: ಸಾರ್ವಜನಿಕರು ಹಾಗೂ ವಿದ್ಯಾರ್ಥಿಗಳನ್ನು ಗುರಿಯಾಗಿಸಿಕೊಂಡು ನಿಷೇಧಿತ ಮಾದಕ ವಸ್ತು ಎಂಡಿಎಂಎ (MDMA) ಮಾರಾಟ ಮಾಡುತ್ತಿದ್ದ ಆರೋಪಿಯನ್ನು ಮಂಗಳೂರು ನಗರ ಸಿಸಿಬಿ ಪೊಲೀಸರು ಬಂಧಿಸಿದ್ದು, ಆತನಿಂದ ಸುಮಾರು ರೂ.2.10 ಲಕ್ಷ ಮೌಲ್ಯದ ಎಂಡಿಎಂಎ ಹಾಗೂ ಇತರೆ ಸೊತ್ತುಗಳನ್ನು ವಶಪಡಿಸಿಕೊಂಡಿದ್ದಾರೆ.
ಬಂಧಿತ ಆರೋಪಿಯನ್ನು ಅಣ್ಣಪ್ಪ ಸ್ವಾಮಿ @ ಮನು (26), ದಿ. ಹನುಮಂತಪ್ಪ ಅವರ ಪುತ್ರ, ಇಡ್ಯಾ ಸಮೀಪದ ಈಶ್ವರ್ ನಗರ ನಿವಾಸಿ ಹಾಗೂ ಪ್ರಸ್ತುತ ಕುಳಾಯಿಗುಡ್ಡೆ ವಾಟರ್ ಟ್ಯಾಂಕ್ ಸಮೀಪದ ಬಾಡಿಗೆ ಮನೆಯಲ್ಲಿ ವಾಸವಾಗಿದ್ದವನು ಎಂದು ಗುರುತಿಸಲಾಗಿದೆ.
ಮಂಗಳೂರು ನಗರದಲ್ಲಿ ಸಾರ್ವಜನಿಕರು ಹಾಗೂ ವಿದ್ಯಾರ್ಥಿಗಳಿಗೆ ಎಂಡಿಎಂಎ ಮಾರಾಟ ಮಾಡುತ್ತಿರುವ ಬಗ್ಗೆ ಖಚಿತ ಮಾಹಿತಿ ಪಡೆದ ಸಿಸಿಬಿ ಪೊಲೀಸರು ಜೂನ್ 25ರಂದು ಕುಳಾಯಿಗುಡ್ಡೆ ಪ್ರದೇಶದ ಮನೆಯಲ್ಲಿ ದಾಳಿ ನಡೆಸಿ ಆರೋಪಿಯನ್ನು ಬಂಧಿಸಿದರು.
ಕಾರ್ಯಾಚರಣೆಯಲ್ಲಿ ಆರೋಪಿಯಿಂದ 15 ಗ್ರಾಂ ಎಂಡಿಎಂಎ (ಅಂದಾಜು ಮೌಲ್ಯ ರೂ.1.50 ಲಕ್ಷ), ಮೊಬೈಲ್ ಫೋನ್, ಜಿಪ್ ಲಾಕ್ ಕವರ್ ಹಾಗೂ ಡಿಜಿಟಲ್ ತೂಕಮಾಪನ ಯಂತ್ರ ಸೇರಿದಂತೆ ಒಟ್ಟು ರೂ.2,10,500 ಮೌಲ್ಯದ ಸೊತ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ.
ಈ ಸಂಬಂಧ ಸುರತ್ಕಲ್ ಪೊಲೀಸ್ ಠಾಣೆಯಲ್ಲಿ ಎನ್‌ಡಿಪಿಎಸ್ ಕಾಯ್ದೆಯಡಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…