Featured

ಮಂಗಳೂರು : ಎನ್ ಐಎ ರಾಜಕೀಯ ಪ್ರೇರಿತವಾಗಿ ಕೆಲಸ ಮಾಡುತ್ತಿದೆ : ರಿಯಾಝ್ ಫರಂಗಿಪೇಟೆ – Vishwanews24

ಮಂಗಳೂರು : ಎನ್ ಐಎ ರಾಜಕೀಯ ಪ್ರೇರಿತವಾಗಿ ಕೆಲಸ ಮಾಡುತ್ತಿದೆ : ರಿಯಾಝ್ ಫರಂಗಿಪೇಟೆ

ಮಂಗಳೂರು : ಎನ್ ಐಎ ತನಿಖಾ ಸಂಸ್ಥೆ ರಾಜಕೀಯ ಪ್ರೇರಿತವಾಗಿ ಕೆಲಸ ಮಾಡುತ್ತಿದೆ ಎಂದು ಎಸ್ ಡಿಪಿಐ ಮುಖಂಡ ರಿಯಾಝ್ ಫರಂಗಿಪೇಟೆ ಕಿಡಿ ಕಾರಿದ್ದಾರೆ.

ನಿವಾಸದ ಮೇಲೆ ಎನ್ ಐಎ ದಾಳಿ ಬಳಿಕ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ರಿಯಾಝ್ ಫರಂಗಿಪೇಟೆ, ಜುಲೈ ಪ್ರಕರಣ ಸಂಬಂಧಿಸಿದಂತೆ ಎನ್ ಐಎ ಅಧಿಕಾರಿಗಳು ಹಲವು ಪ್ರಶ್ನೆ ಕೇಳಿದ್ದಾರೆ.ಹಲವು ದಾಖಲೆಗಳನ್ನು ಪರಿಶೀಲನೆ ಮಾಡಿದ್ದಾರೆ.

ಎನ್ ಐ ಎ ತನಿಖೆ ಪಾರದರ್ಶಕ ವಾಗಿರಲಿ ಎಂದರು.

ಕುಂದಾಪುರ : ಸಂಗಮ್ ಸೇತುವೆಯಿಂದ ನದಿಗೆ ಹಾರಿ ಯುವಕ ಆತ್ಮಹತ್ಯೆ ; ಶೋಧ ಕಾರ್ಯ – Vishwanews24

ಎನ್ ಐಎ ಸರ್ಕಾರದ ಅಣತಿಯಂತೆ ಕೆಲಸ ಮಾಡುತ್ತಿದೆ.ನಾನು ಬಿಹಾರದಲ್ಲಿ ಎಸ್ ಡಿಪಿಐ ಪಕ್ಷದ ಉಸ್ತುವಾರಿ ವಹಿಸಿಕೊಂಡಿದ್ದೇನೆ. ರಾಷ್ಟ್ರೀಯ ಕಾರ್ಯಕಾರಿಣಿ ಸಮಿತಿಯಲ್ಲಿರೋದರಿಂದ ಬಿಹಾರ ರಾಜ್ಯ ಸಮಿತಿ ಮೀಟಿಂಗ್ ನಲ್ಲಿ ಭಾಗವಹಿಸುತ್ತಿದ್ದೆ. ಪ್ರಧಾನಿ ಮೋದಿ ಕಾರ್ಯಕ್ರಮ ದಲ್ಲಿ ಗಡಿಬಿಡಿ ಮಾಡುವ ಊಹಾಪೋಹದಿಂದ ಬಿಹಾರದಲ್ಲಿ ಪಕ್ಷದ ಐದು ಮಂದಿಯನ್ನು ಬಂಧನ ಮಾಡಿದ್ದರು.ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಎನ್ ಐಎ ಪೂರಕ ಪರಿಶೀಲನೆ ಮಾಡುತ್ತಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಪಕ್ಷದ ಜಿಲ್ಲಾ ಪ್ರಧಾನ ಕಾರ್ಯದರ್ಶಿಯನ್ನೂ ಬಂಧನ ಮಾಡಿದ್ದರು.2047 ಇಸ್ಲಾಂ ರಾಷ್ಟ್ರ ಸಂಬಂಧ ಪಟ್ಟಂತೆ ಫೌಂಡೇಶನ್ ಬುಕ್ ಲೇಟ್ ಬಿಡುಗಡೆ ಮಾಡಿತ್ತು. ಈ ಬಗ್ಗೆ ಸಂಬಂಧಪಟ್ಟ ಸಂಘಟನೆ ಹೇಳಿಕೆ ನೀಡಿದೆ. ಪಿಎಫ್ ಐ ಕೂಡಾ ಇದರ ಬಗ್ಗೆ ಸ್ಪಷ್ಟನೆ ನೀಡಿದೆ. ಉ.ಪ್ರದೇಶದಲ್ಲಿ ಆದ ಬುಕ್ ಲೇಟ್ ನ ಒಂದು ಕಾಪಿಯನ್ನು ಈ ಬುಕ್ ಲೇಟ್ ಗೆ ಇಡಲಾಗಿತ್ತು. ಕೇಂದ್ರ ಸರ್ಕಾರ ಪ್ರೇರಿತವಾಗಿ ಈ ಕಾರ್ಯ ಮಾಡಲಾಗಿತ್ತು ಎಂದರು.

ಎನ್ ಐ ಎ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಹಲವು ಪ್ರಶ್ನೆ ಕೇಳಿತ್ತು. ಮುಂದೆಯೂ ತನಿಖೆಗೆ ಸಹಕಾರ ನೀಡುತ್ತೇನೆ. ನನ್ನ ಮತ್ತು ನನ್ನ ಪತ್ನಿಯ ಮೊಬೈಲ್ ನ್ನು ಎನ್ ಐ ಎ ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ ಎಂದು ಹೇಳಿದ್ದಾರೆ.

ಕನ್ನಡ ಹಿರಿಯ ನಟಿ ಲೀಲಾವತಿಗೆ ಅನಾರೋಗ್ಯ: ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷರ ಭೇಟಿ, ಆರೋಗ್ಯ ವಿಚಾರಣೆ – Vishwanews24

Vishwa News 24

Recent Posts

ನೋಯ್ಡಾ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ‘ನರೇಂದ್ರ ಮೋದಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ’ ಎಂದು ಮರುನಾಮಕರಣ: ಯೋಗಿ ಆದಿತ್ಯನಾಥ್ ಘೋಷಣೆ – vishwanews24

ನೊಯ್ಡಾ ವಿಮಾನ ನಿಲ್ದಾಣಕ್ಕೆ ನರೇಂದ್ರ ಮೋದಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಎಂದು ಮರುನಾಮಕರಣ ನವದೆಹಲಿ: ಉತ್ತರ ಪ್ರದೇಶದ ಜೆವಾರ್‌ನಲ್ಲಿರುವ ನೋಯ್ಡಾ…

14 hours ago

ಮಂಗಳೂರು: MRPL ಅಪಘಾತದಲ್ಲಿ ಮೃತಪಟ್ಟ ಮನೀಶ್ ಕರ್ಕಡ ಕುಟುಂಬಕ್ಕೆ ಸಾಮಾಜಿಕ ಭದ್ರತಾ ಸೌಲಭ್ಯಗಳನ್ನು ಒದಗಿಸಿದ EPFO – vishwanews24

ಮಂಗಳೂರು: MRPL ಅಪಘಾತದಲ್ಲಿ ಮೃತಪಟ್ಟ ಮನೀಶ್ ಕರ್ಕಡ ಕುಟುಂಬಕ್ಕೆ ಸಾಮಾಜಿಕ ಭದ್ರತಾ ಸೌಲಭ್ಯಗಳನ್ನು ಒದಗಿಸಿದ EPFO ಮಂಗಳೂರು: ರಿಫೈನರಿ &…

15 hours ago

ಗೃಹಲಕ್ಷ್ಮಿ ಯೋಜನೆ ಮರುಪರಿಶೀಲನೆ : ಹೊಸ ಅರ್ಜಿ, ಹೊಸ ಷರತ್ತುಗಳು ; ಈ ದಾಖಲೆಗಳು ಕಡ್ಡಾಯ – vishwanews24

ಗೃಹಲಕ್ಷ್ಮಿ ಯೋಜನೆ ಮರುಪರಿಶೀಲನೆ : ಹೊಸ ಅರ್ಜಿ, ಹೊಸ ಷರತ್ತುಗಳು ; ಈ ದಾಖಲೆಗಳು ಕಡ್ಡಾಯ  ಬೆಂಗಳೂರು: ಕರ್ನಾಟಕ ಸರ್ಕಾರದ…

15 hours ago

ಉಡುಪಿ: ಉದ್ಯೋಗಕ್ಕಾಗಿ ಅಲೆದಾಡುವ ಯುವಜನರ ಬಳಿಗೇ ಉದ್ಯೋಗಾವಕಾಶ : ಡಾ. ಕೆ. ಪ್ರಕಾಶ್ ಶೆಟ್ಟಿ – vishwanews24

ಉಡುಪಿ: ಉದ್ಯೋಗಕ್ಕಾಗಿ ಅಲೆದಾಡುವ ಯುವಜನರ ಬಳಿಗೇ ಉದ್ಯೋಗಾವಕಾಶ : ಡಾ. ಕೆ. ಪ್ರಕಾಶ್ ಶೆಟ್ಟಿ ಉಡುಪಿ: ಯುವಜನರು ನಿರಂತರ ಪ್ರಯತ್ನದ…

15 hours ago

ಮಂಗಳೂರು:ಕೋರಿಯರ್ ಮೂಲಕ ಎಂಡಿಎಂಎ ಸಾಗಾಟದ ಜಾಲ ಪತ್ತೆ: ₹1.58 ಕೋಟಿ ಮೌಲ್ಯದ ಮಾದಕವಸ್ತು ವಶ – vishwanews24

ಕೋರಿಯರ್ ಮೂಲಕ ವಾಟರ್ ಪ್ಯೂರಿಫೈಯರ್‌ನಲ್ಲಿ ಎಂಡಿಎಂಎ ಸಾಗಾಟ.. ಮಂಗಳೂರು ಸಿಸಿಬಿ ಬಲೆಗೆ ಮೂವರು ಆರೋಪಿಗಳು; ₹1.58 ಕೋಟಿ ಮೌಲ್ಯದ ಸೊತ್ತು…

15 hours ago

ಮಂಗಳೂರು:  ಅನುಮಾನಾಸ್ಪದ ಸಾವು ಪ್ರಕರಣ ; ಎರಡು ತಿಂಗಳ ಬಳಿಕ ಸಮಾಧಿಯಿಂದ ಶವ ಹೊರತೆಗೆದು ಮರಣೋತ್ತರ ಪರೀಕ್ಷೆ – vishwanews24

ಮಂಗಳೂರು:  ಅನುಮಾನಾಸ್ಪದ ಸಾವು ಪ್ರಕರಣ ; ಎರಡು ತಿಂಗಳ ಬಳಿಕ ಸಮಾಧಿಯಿಂದ ಶವ ಹೊರತೆಗೆದು ಮರಣೋತ್ತರ ಪರೀಕ್ಷೆ ಮಂಗಳೂರು: ಅನುಮಾನಾಸ್ಪದ…

16 hours ago