Featured

ಮಂಗಳೂರು: ಎರಡು ದಿನಗಳಿಂದ 40 ಗಂಟೆಗಳ ಕಾಲ ನಿರಂತರ ಗಾಯನ ; ಗೋಲ್ಡನ್ ಬುಕ್ ಆಫ್ ವರ್ಲ್ಡ್ ರೆಕಾರ್ಡ್ಸ್‌ನಲ್ಲಿ ದಾಖಲೆ – vishwanews24

460 ಹಾಡು, 136 ಗಾಯಕರು, 40 ಗಂಟೆಗಳ ಕಾಲ ಗಾಯನ..

ಮಂಗಳೂರಲ್ಲಿ ಕಿಶೋರ್ ಕುಮಾರ್ ಹಾಡುಗಳ ವಿಶ್ವದಾಖಲೆ

ಮಂಗಳೂರು:ಎರಡು ದಿನಗಳಿಂದ ನಿರಂತರ‌ 40 ಗಂಟೆಗಳ ಕಾಲ ಹಾಡುವ ಮೂಲಕ ತಂಡವೊಂದು ಗೋಲ್ಡನ್ ಬುಕ್ ಆಫ್ ವರ್ಲ್ಡ್ ರೆಕಾರ್ಡ್ಸ್‌ನಲ್ಲಿ ಸ್ಥಾನ ಪಡೆದಿದೆ.

ಗೋಲ್ಡನ್ ಬುಕ್ ಆಫ್ ವರ್ಲ್ಡ್ ರೆಕಾರ್ಡ್ಸ್ ಹೋಲ್ಡರ್, ಜೀ ಕನ್ನಡದ ಸರಿಗಮ ಖ್ಯಾತಿಯ ಯಶವಂತ್ ಎಂ.ಜಿ. ಮಾರ್ಗದರ್ಶನದಲ್ಲಿ ಶೋಡಶಿ ಫೌಂಡೇಶನ್ ವತಿಯಿಂದ, ಭಾರತೀಯ ಸಿನೀ ಸಂಗೀತ ಲೋಕದ ಅಮರ ಗಾಯಕ ಕಿಶೋರ್ ಕುಮಾರ್ ಅವರಿಗೆ ಗೌರವವಾಗಿ ಮಂಗಳೂರು ಪುರಭವನದಲ್ಲಿ “ಗಾತಾ ರಹೇ ಮೇರಾ ದಿಲ್ ” ಎಂಬ ಹೆಸರಿನಲ್ಲಿ ಈ ಕಾರ್ಯಕ್ರಮ ನಡೆಯಿತು.

ನವೆಂಬರ್ 18ರಂದು ಬೆಳಿಗ್ಗೆ 2.00 ಗಂಟೆಗೆ – ಡಿ ವೈ ಎಸ್ ಪಿ ಮಹೇಶ್ ಕುಮಾರ್ ದೀಪ ಬೆಳಗುವ ಮೂಲಕ ಪ್ರಾರಂಭಗೊಂಡ ಈ ಹಾಡುಗಳ ಸರಣಿ, 19ರಂದು ಸಂಜೆ 6.10 ಗಂಟೆಗೆ ಸಮಾಪ್ತಿಗೊಂಡಿತು. ಮಹಾ ಸಂಗೀತ ಸಂಭ್ರಮದಲ್ಲಿ ನೂರಮೂವತ್ತಕ್ಕೂ ಹೆಚ್ಚು ಹಾಡುಗಾರರು ಪಾಲ್ಗೊಂಡಿದ್ದರು.ಈ ಎರಡು ದಿನಗಳ ಕಾರ್ಯಕ್ರಮದಲ್ಲಿ ಕಿಶೋರ್ ಕುಮಾರ್ ಅವರ ಪ್ರಮುಖ ಗೀತೆಗಳೊಂದಿಗೆ 40 ಗಂಟೆಗಳ ನಿರಂತರ ಗಾಯನ ಪ್ರದರ್ಶನ ನಡೆಯಿತು.

ಈ ಕಾರ್ಯಕ್ರಮವನ್ನು ಕರ್ನಾಟಕದ ಪ್ರಖ್ಯಾತ ಹಾಗೂ ಗೌರವಾನ್ವಿತ ಗಾಯಕರಿಂದ ನಡೆಸಲಾಗಿದ್ದು, ಸಂಗೀತಾಭಿಮಾನಿಗಳಿಗೆ ಸಾಂಸ್ಕೃತಿಕ ಹಬ್ಬದಂತೆಯೇ ಸಂಭ್ರಮ ನೀಡಿತು. ದಾಖಲೆ ಪೂರೈಸಿದ ಶೋಡಶಿ ಫೌಂಡೇಶನ್ ಗೆ ಗೋಲ್ಡನ್ ಬುಕ್ ಆಫ್ ವರ್ಲ್ಡ್ ರೆಕಾರ್ಡ್ಸ್‌ನ ಮನೀಷ್ ಬಿಷ್ಣೋಯ್, ಶಾಸಕ ವೇದವ್ಯಾಸ ಕಾಮತ್ ಪ್ರಮಾಣ ಪತ್ರ ವಿತರಿಸಿದರು.

ಕಾರ್ಯಕ್ರಮದಲ್ಲಿ ಮಾತನಾಡಿದ ಶಾಸಕ‌ ವೇದವ್ಯಾಸ ಕಾಮತ್ ಈ ರೀತಿಯ ಪ್ರಯೋಗಗಳು ನಡೆಯುತ್ತಲೇ ಇರುತ್ತದೆ. ದೇವಸ್ಥಾನಗಳಲ್ಲಿ ನಿರಂತರ ಭಜನೆ ಕೂಡಾ ನಡೆಯುತ್ತದೆ. ಆದರೆ ಆಧ್ಯಾತ್ಮಿಕ ಕಾರಣಕ್ಕಾಗಿ ಅದನ್ನು ದಾಖಲೆಗೆ ಬಳಸುವುದಿಲ್ಲ. ಇಂತಹ ಸಾಧನೆಗಳು ಮತ್ತಷ್ಟು ನಡೆಯಬೇಕು. ಇಂತಹ ಕಾರ್ಯಕ್ರಮಗಳಿಗೆ ಸಂಪೂರ್ಣ ಬೆಂಬಲ ನೀಡುವುದಾಗಿ ತಿಳಿಸಿದರು.

ಕಾರ್ಯಕ್ರಮದಲ್ಲಿ ಮಾತನಾಡಿದ ಡಾ.ಶಿವರಾಮ್ ಕೆ.ಭಂಡಾರಿ, ಅತ್ಯಂತ ಪರಿಶ್ರಮದಿಂದ ಈ ಸಾಧನೆ ಮಾಡಿದ್ದಾರೆ. ಎಲ್ಲರಿಗೂ ಅಭಿನಂದನೆಗಳು ಎಂದು ಹೇಳಿದರು. ತಮ್ಮ ಕಸುಬನ್ನು ಪರಿಶ್ರಮ ಮತ್ತು ಪ್ರೀತಿಯಿಂದ ಕೆಲಸ ಮಾಡಿದರೆ ಉನ್ನತ ಸ್ಥಿತಿಗೆ ಏರಬಹುದು ಎಂದರು.

ಮಣಿಕಾಂತ ಕದ್ರಿ ಮಾತನಾಡಿ, ಈ ರೀತಿಯ ಕಾರ್ಯಕ್ರಮ ಮಾಡಿರುವುದಕ್ಕೆ ಹೆಮ್ಮೆ ಇದೆ. ಇನ್ನಷ್ಟು ಕಾರ್ಯಕ್ರಮ ಗಳು ನಡೆಯಲಿದೆ, ಎಸ್ಪಿಬಿ, ರಾಜ್‌ಕುಮಾರ್ ಅವರ ಹಾಡುಗಳೂ ಇರಲಿ ಎಂದರು.

ಭರತ್ ಕಾಮತ್ ಪ್ರಾಸ್ತಾವಿಕ ಮಾತುಗಳನ್ನಾಡಿದರು. ಕಾರ್ಯಕ್ರಮದಲ್ಲಿ, ಯಶ್ವಂತ್ ಎಂ.ಜಿ, ಮನೀಷ್ ವಿಷ್ಣೋಯ್, ಲಂಚುಲಾಲ್, ಮಣಿಕಾಂತ ಕದ್ರಿ, ರಮೇಶ್ ಚಂದ್ರ, ಶ್ರೀಕಾಂತ ಕಾಮತ್, ವೇಣುಗೋಪಾಲ್ ಪುತ್ತೂರು, ರಂಜನ್ ದಾಸ್ , ವಿಶ್ವಾಸ್ ಗುರುಪುರ, ಸತೀಶ್ ಇರಾ, ಡಾ ಶಿವರಾಮ್ ಭಂಡಾರಿ ಅವರನ್ನು ಸನ್ಮಾನಿಸಲಾಯಿತು.

ವೇದಿಕೆಯಲ್ಲಿ ಡಾ. ಮನೀಷ್ ವಿಷ್ಣೋಯ್, ಡಾ. ಶಿವರಾಮ್ ಕೆ. ಭಂಡಾರಿ,ರಮೇಶ್ ಚಂದ್ರ, ರಮೇಶ್. ಕೆ . ಪಾಟೀಲ್, ಅನಿಲ್ ಶೆಟ್ಟಿ ಸೂರಿಂಜೆ, ಮನೋಹರ್ ಶೆಟ್ಟಿ, ಗೋಪಾಲ ಕೃಷ್ಣ, ಭರತ್ ಕಾಮತ್, ಮಣಿಕಾಂತ ಕದ್ರಿ ಮತ್ತಿತರರು ಉಪಸ್ಥಿತರಿದ್ದರು

Vishwa News 24

Recent Posts

ಉಡುಪಿ : ಹೊಟೇಲ್ ಮುಚ್ಚುವ ಭೀತಿ ; ಜಿಲ್ಲೆಯ ಆರ್ಥಿಕತೆಯ ಮೇಲೆ ಗಂಭೀರ ಪರಿಣಾಮ : ತಲ್ಲೂರು ಶಿವರಾಮ ಶೆಟ್ಟಿ – vishwanews24

ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್‌ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…

6 days ago

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ – vishwanews24

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…

6 days ago

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ – vishwanews24

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…

6 days ago

ಉಡುಪಿ : ಗ್ಯಾಸ್ ಹೆಸರಿನಲ್ಲಿ ಸೈಬರ್ ವಂಚನೆ: ಅಪರಿಚಿತರಿಂದ ಬರುವ ಲಿಂಕ್‌, ಎಪಿಕೆ ಫೈಲ್‌ ಓಪನ್ ಮಾಡುವ ಮುನ್ನ ಎಚ್ಚರ : ಎಸ್ಪಿ ಮನವಿ – vishwanews24

ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…

6 days ago

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ ‘ಗೀತಾ’ – vishwanews24

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…

6 days ago

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿಯ ಬಂಧನ – vishwanews24

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…

6 days ago