ಮಂಗಳೂರು : ಮಂಗಳೂರು ಬಜ್ಪೆಯಲ್ಲಿರುವ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಹುಸಿಬಾಂಬ್ ಕರೆ ಮಾಡಿದ್ದ ಆರೋಪಿಯನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ಬಂಧಿತನನ್ನು ಕಾರ್ಕಳ ಮುದ್ರಾಡಿಯ ವಸಂತ ಎಂದು ಗುರುತಿಸಲಾಗಿದೆ.
ಇಂದು ಮಧ್ಯಾಹ್ನ ಸಂದರ್ಭ ಮಂಗಳೂರು ಏರ್ ಪೋರ್ಟ್ ಗೆ ಕರೆ ಮಾಡಿದ ವ್ಯಕ್ತಿ ಏರ್ಪೋರ್ಟ್‌ನೊಳಗೆ ಬಾಂಬ್ ಇಟ್ಟಿರುವುದಾಗಿ ಬೆದರಿಕೆ ಹಾಕಿದ್ದಾನೆ. ಕೂಡಲೇ ಸಿಐಎಸ್ ಎಫ್ ಸಿಬ್ಬಂದಿ ಸೇರಿ ಪೊಲೀಸರಿಂದ ಸಂಪೂರ್ಣ ಏರ್ ಪೋರ್ಟ್ ತಪಾಸಣೆ ಮಾಡಿದ ನಂತರ ಇದೊಂದು ಹುಸಿ ಬಾಂಬ್ ಕರೆ ಎಂದು ತಿಳಿದು ಬಂದಿದೆ.
ಈ ಘಟನೆ ಕುರಿತಂತೆ ಎರ್ ಪೋರ್ಟ್ ಅಧಿಕಾರಿಗಳು ಬಜ್ಪೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದರು. ಇದೀಗ ಅಧಿಕಾರಿಗಳು ಮಾಹಿತಿ ಕಲೆ ಹಾಕಿ ಕೆಲವೇ ಗಂಟೆಗಳಲ್ಲಿ ಅರೋಪಿಯನ್ನು ಬಂಧಿಸಿದ್ಧಾರೆ. ಬಂಧಿತನು ಕಾರ್ಕಳ ಮುದ್ರಾಡಿಯ ವಸಂತ ಎಂದು ಗುರುತಿಸಲಾಗಿದ್ದು ಮಂಗಳೂರು ಸಿಸಿಬಿ ತಂಡ ಮುದ್ರಾಡಿಯ ಮನೆಯಿಂದ ಆರೋಪಿ ವಸಂತನನ್ನು ವಶಕ್ಕೆ ಪಡೆದಿದ್ದಾರೆ ವಸಂತ ಹೋಟೆಲ್ ನಲ್ಲಿ ಕೆಲಸಕ್ಕಿದ್ದು ಮಾನಸಿಕ ಅಸ್ವಸ್ಥನೆಂದು ಪೊಲೀಸರು ಮಾಹಿತಿ ನೀಡಿದ್ದಾರೆ.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…