Featured

ಮಂಗಳೂರು : ಎರ್ ಪೋರ್ಟ್ ಹುಸಿಬಾಂಬ್ ಕರೆ : ಆರೋಪಿ ಪೋಲಿಸ್ ವಶಕ್ಕೆ -Vishwanews24

ಮಂಗಳೂರು : ಮಂಗಳೂರು ಬಜ್ಪೆಯಲ್ಲಿರುವ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಹುಸಿಬಾಂಬ್ ಕರೆ ಮಾಡಿದ್ದ ಆರೋಪಿಯನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ಬಂಧಿತನನ್ನು ಕಾರ್ಕಳ ಮುದ್ರಾಡಿಯ ವಸಂತ ಎಂದು ಗುರುತಿಸಲಾಗಿದೆ.

ಇಂದು ಮಧ್ಯಾಹ್ನ ಸಂದರ್ಭ ಮಂಗಳೂರು ಏರ್ ಪೋರ್ಟ್ ಗೆ ಕರೆ ಮಾಡಿದ ವ್ಯಕ್ತಿ ಏರ್ಪೋರ್ಟ್‌ನೊಳಗೆ ಬಾಂಬ್ ಇಟ್ಟಿರುವುದಾಗಿ ಬೆದರಿಕೆ ಹಾಕಿದ್ದಾನೆ. ಕೂಡಲೇ ಸಿಐಎಸ್ ಎಫ್ ಸಿಬ್ಬಂದಿ ಸೇರಿ ಪೊಲೀಸರಿಂದ ಸಂಪೂರ್ಣ ಏರ್ ಪೋರ್ಟ್ ತಪಾಸಣೆ ಮಾಡಿದ ನಂತರ ಇದೊಂದು ಹುಸಿ ಬಾಂಬ್ ಕರೆ ಎಂದು ತಿಳಿದು ಬಂದಿದೆ.

ಈ ಘಟನೆ ಕುರಿತಂತೆ ಎರ್ ಪೋರ್ಟ್ ಅಧಿಕಾರಿಗಳು ಬಜ್ಪೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದರು. ಇದೀಗ ಅಧಿಕಾರಿಗಳು ಮಾಹಿತಿ ಕಲೆ ಹಾಕಿ ಕೆಲವೇ ಗಂಟೆಗಳಲ್ಲಿ ಅರೋಪಿಯನ್ನು ಬಂಧಿಸಿದ್ಧಾರೆ. ಬಂಧಿತನು ಕಾರ್ಕಳ ಮುದ್ರಾಡಿಯ ವಸಂತ ಎಂದು ಗುರುತಿಸಲಾಗಿದ್ದು ಮಂಗಳೂರು ಸಿಸಿಬಿ ತಂಡ ಮುದ್ರಾಡಿಯ ಮನೆಯಿಂದ ಆರೋಪಿ ವಸಂತನನ್ನು ವಶಕ್ಕೆ ಪಡೆದಿದ್ದಾರೆ ವಸಂತ ಹೋಟೆಲ್‌ ನಲ್ಲಿ ಕೆಲಸಕ್ಕಿದ್ದು ಮಾನಸಿಕ ಅಸ್ವಸ್ಥನೆಂದು ಪೊಲೀಸರು ಮಾಹಿತಿ ನೀಡಿದ್ದಾರೆ.

Vishwa News 24

Recent Posts

ಎಸ್‌ಟಿಪಿಯನ್ನು ಮೂಳೂರಿನಿಂದ ಬೆಳಪು ಪ್ರದೇಶಕ್ಕೆ ಸ್ಥಳಾಂತರ ಮಾಡಿದರೆ ಕಾಪು ಪುರಸಭೆಗೆ ಸಂಪೂರ್ಣ ಸ್ವಾಗತ : ದೇವಿಪ್ರಸಾದ್ ಶೆಟ್ಟಿ – vishwanews24

ಬೆಳಪು ಪ್ರದೇಶದಲ್ಲಿ ಎಲ್ಲಾ ಅಗತ್ಯ ಸೌಲಭ್ಯಗಳೊಂದಿಗೆ ಘಟಕ ನಿರ್ಮಿಸಿದರೆ ನಮ್ಮಿಂದ ಯಾವುದೇ ವಿರೋಧ ಇರುವುದಿಲ್ಲ : ದೇವಿಪ್ರಸಾದ್ ಶೆಟ್ಟಿ ಮೂಳೂರು…

24 hours ago

ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ – vishwanews24

ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ ಬೆಳಗಾವಿ: ಪ್ರಿಯಕರನ ಜೊತೆ…

1 day ago

ಬಿಜೆಪಿ ನಡೆಸಿರುವ ಅಪವಿತ್ರ ಮೈತ್ರಿ ಇತಿಹಾಸವನ್ನು ದೇಶ ಮರೆತಿಲ್ಲ : ಬಿ.ಕೆ.ಹರಿಪ್ರಸಾದ್ – vishwanews24

ದೇಶದ ಜಾತ್ಯತೀತ ಮೌಲ್ಯಗಳನ್ನು ರಕ್ಷಿಸಲು ಕಾಂಗ್ರೆಸ್ ಪಕ್ಷ ಸದಾ ಸಮಾನ ಚಿಂತನೆಯ ಪಕ್ಷಗಳೊಂದಿಗೆ ಕೈಜೋಡಿಸಿದೆ : ಬಿ.ಕೆ.ಹರಿಪ್ರಸಾದ್ ಬೆಂಗಳೂರು: ‘ಬಿಜೆಪಿ…

1 day ago

ಪಡುಬಿದ್ರಿ: ಕಿಶೋರ್ ಆಳ್ವ ಅವರಿಗೆ ಪ್ರತಿಷ್ಠಿತ ಮಹಾತ್ಮ ಗಾಂಧಿ ಸಬರಮತಿ ಸಂತ ಪ್ರಶಸ್ತಿ ಪ್ರದಾನ – vishwanews24

ಪಡುಬಿದ್ರಿ: ಕಿಶೋರ್ ಆಳ್ವ ಅವರಿಗೆ ಪ್ರತಿಷ್ಠಿತ ಮಹಾತ್ಮ ಗಾಂಧಿ ಸಬರಮತಿ ಸಂತ ಪ್ರಶಸ್ತಿ ಪ್ರದಾನ ಪಡುಬಿದ್ರಿ: ಸನಾತನ ಫೌಂಡೇಶನ್‌ನ ಅಧ್ಯಕ್ಷ,…

1 day ago

ವಿವಾಹಿತ ಮಹಿಳೆ  ಜತೆ ಲಿವ್ ಇನ್ ರಿಲೇಶನ್‌ ಶಿಪ್‌ನಲ್ಲಿದ್ದ ಯುವಕ ಶವವಾಗಿ ಪತ್ತೆ  – vishwanews24

ವಿವಾಹಿತ ಮಹಿಳೆ ಜತೆ ಲಿವ್ ಇನ್ ರಿಲೇಶನ್‌ಶಿಪ್‌ನಲ್ಲಿದ್ದ ಯುವಕ ಶವವಾಗಿ ಪತ್ತೆ  ಬೆಂಗಳೂರು: ಲಿವ್ ಇನ್ ರಿಲೇಶನ್‌ಶಿಪ್‌ನಲ್ಲಿದ್ದ ಯುವಕ ನೇಣುಬಿಗಿದ…

1 day ago

ಬಿಜೆಪಿ ನಾಯಕ ಸುವೇಂದು ಅಧಿಕಾರಿ ಬಂಗಾಳದ ನೂತನ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕಾರ – vishwanews24

ಪಶ್ಚಿಮ ಬಂಗಾಳದ ರಾಜಕೀಯ ಇತಿಹಾಸದಲ್ಲಿ ಹೊಸ ಪರ್ವ.. ಬಿಜೆಪಿ ಮೊದಲ ಸಿಎಂ ಆಗಿ ಪ್ರಮಾಣ ಸ್ವೀಕಾರ.. ಐತಿಹಾಸಿಕ ಕ್ಷಣಕ್ಕೆ ಮೋದಿ,…

1 day ago