Featured

ಮಂಗಳೂರು: ಎಲೆಕ್ಟ್ರಿಕಲ್‌ ಆಟೋ ಸಂಚಾರಕ್ಕೆ ಅನುಮತಿ; ರಿಕ್ಷಾ ಚಾಲಕರಿಂದ ಬೃಹತ್ ಮೆರವಣಿಗೆ, ಪ್ರತಿಭಟನೆ – vishwanews24

ಮಂಗಳೂರು: ಎಲೆಕ್ಟ್ರಿಕಲ್‌ ಆಟೋಗಳ ಸಂಚಾರಕ್ಕೆ ಅನುಮತಿ..

ಆದೇಶ ವಾಪಸ್ ಪಡೆಯಲು ಒತ್ತಾಯಿಸಿ ಸಾವಿರಾರು ಆಟೋ ರಿಕ್ಷಾ ಚಾಲಕರ ಮೆರವಣಿಗೆ ..

ಜಿಲ್ಲಾಧಿಕಾರಿ ಕಚೇರಿ ಚಲೋಗೆ ಕ್ಲಾಕ್ ಟವರ್ ಬಳಿ ಪೊಲೀಸರ ತಡೆ..

ಸ್ಥಳಕ್ಕೆ ಜಿಲ್ಲಾಧಿಕಾರಿ ಆಗಮಿಸಿ ಮನವಿ ಸ್ವೀಕರಿಸಲು ಒತ್ತಾಯಿಸಿ ಪ್ರತಿಭಟನೆ..

ಮಂಗಳೂರು: ಎಲೆಕ್ಟ್ರಿಕಲ್‌ ಅಟೋ ರಿಕ್ಷಾಗಳಿಗೆ ಜಿಲ್ಲೆಯಾದ್ಯಂತ ಸಂಚರಿಸಲು ಅನುಮತಿ ನೀಡಿರುವ ಆದೇಶವನ್ನು ವಾಪಸ್ ಪಡೆಯಲು ಒತ್ತಾಯಿಸಿ ಸಾವಿರಾರು ಸಂಖ್ಯೆಯಲ್ಲಿ ಆಟೋ ರಿಕ್ಷಾ ಚಾಲಕರು ಮೆರವಣಿಗೆ ಪ್ರತಿಭಟನಾ ಸಭೆ ನಡೆಸುತ್ತಿದ್ದಾರೆ.

ದಕ್ಷಿಣ ಕನ್ನಡ ಜಿಲ್ಲಾ ಆಟೋರಿಕ್ಷಾ ಚಾಲಕರ ಮಾಲಕರ ಸಂಘಗಳ ಒಕ್ಕೂಟ ಮತ್ತು ಸಮಾನ ಮನಸ್ಕ ಆಟೋರಿಕ್ಷಾ ಚಾಲಕ ಮಾಲಕರ ಸಂಘಟನೆಗಳ ನೇತೃತ್ವದಲ್ಲಿ ನಗರದ ಅಂಬೇಡ್ಕರ್ ವೃತ್ತದಿಂದ ಕ್ಲಾಕ್ ಟವರವರೆಗೆ ಮೆರವಣಿಗೆ ನಡೆಸಿದ ಆಟೋ ರಿಕ್ಷಾ ಚಾಲಕರು, ಸ್ಥಳಕ್ಕೆ ಜಿಲ್ಲಾಧಿಕಾರಿ ಆಗಮಿಸಿ ಮನವಿ ಸ್ವೀಕರಿಸಲು ಒತ್ತಾಯಿಸಿ ಪ್ರತಿಭಟಿಸುತ್ತಿದ್ದಾರೆ.

ಜಿಲ್ಲಾಧಿಕಾರಿ ಕಚೇರಿ ಚಲೋಗೆ ನಿರ್ಧರಿಸಿ ಮೆರವಣಿಗೆ ಆರಂಭಿಸಿದ್ದ ಆಟೋ ರಿಕ್ಷಾ ಚಾಲಕರನ್ನು ಪೊಲೀಸರು ಕ್ಲಾಕ್ ಟವರ್ ಬಳಿ ಬ್ಯಾರಿಕೇಡ್ ಗಳನ್ನೂ ಅಳವಡಿಸಿ ತಡೆದರು.

ಈ ಸಂಧರ್ಭ ಪ್ರತಿಭಟನಾ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಸಿಐಟಿಯು ಮುಖಂಡ ಸುನಿಲ್ ಕುಮಾರ್ ಬಜಾಲ್ , ಜಿಲ್ಲಾಧಿಕಾರಿಯವರು ಏಕಪಕ್ಷೀಯವಾಗಿ ಎಲೆಕ್ಟ್ರಿಕ್ ಆಟೋ ರಿಕ್ಷಾ ಬಗ್ಗೆ ಆದೇಶ ಮಾಡಿರುವುದನ್ನು ಹಿಂಪಡೆಯುವ ನಿಟ್ಟಿನಲ್ಲಿ ಈ ಹೋರಾಟ ಎಚ್ಚರಿಕೆಯ ಕರೆಗಂಟೆ. ಆದೇಶ ವಾಪಸ್ ಪಡೆಯದಿದ್ದರೆ ಜಿಲ್ಲೆಯ ಸಾವಿರಾರು ಸಂಖ್ಯೆಯ ಬದುಕಿಗೆ ಕೊಳ್ಳಿ ಇಟ್ಟಂತೆ ಎಂದರು.

ಮಾತೆತ್ತಿದರೆ ಕೇಂದ್ರ ಸರಕಾರದ ತೀರ್ಮಾನ ಎನ್ನುತ್ತಾರೆ. ಆದರೆ ಪಕ್ಕದ ಉಡುಪಿ ಅಥವಾ ಬೇರೆ ಜಿಲ್ಲೆಗಳಲ್ಲಿ ಇಲ್ಲದ ಆದೇಶ ದಕ ಜಿಲ್ಲೆಯಲ್ಲಿ ಯಾಕೆ ಎಂದು ಪ್ರಶ್ನಿಸಿದ ಅವರು, ಎಲೆಕ್ಟ್ರಿಕ್ ಕಂಪನಿಗಳ ಜೊತೆ ಶಾಮೀಲಾಗಿ ಈ ತೀರ್ಮಾನವನ್ನು ಜಿಲ್ಲಾಡಳಿತ ಮಾಡಿದೆ ಎಂದು ಆರೋಪಿಸಿದರು.

ದ.ಕ.ಜಿಲ್ಲಾಡಳಿತದ ನಿರ್ಧಾರವನ್ನು ಕೂಡಲೇ ವಾಪಸ್ ಪಡೆದು ಜಿಲ್ಲೆಯಾದ್ಯಂತ ಅಟೋರಿಕ್ಷಾ ಚಾಲಕರು ಅನುಭವಿಸುತ್ತಿರುವ ಭವಣೆಗಳನ್ನು ಸಮಗ್ರವಾಗಿ ಅಧ್ಯಯನ ಮಾಡಿ ವೈಜ್ಞಾನಿಕ ನೆಲೆಯಲ್ಲಿ ವ್ಯವಸ್ಥೆ ಮಾಡಬೇಕೆಂದು ಎಂದು ಒಕ್ಕೂಟ ಒತ್ತಾಯಿಸಿದೆ.

ಒಕ್ಕೂಟದ ಅಧ್ಯಕ್ಷ ಅಶೋಕ್ ಶೆಟ್ಟಿ ಬೋಳಾರ, ಅಬೂಬಕರ್ ಸುರತ್ಕಲ್, ಮುಸ್ತಾಕ್ ಅಲಿ, ಸ್ಟ್ಯಾನಿ ನೋರೋನ, ಭರತ್ ಕುಮಾರ್, ಲೋಕೇಶ್ ಬಲ್ಲಾಳ್ ಬಾಗ್, ಅರುಣ್ ಕುಮಾರ್, ವಸಂತ್ ಮೇರ ನಗರ, ಅಪ್ಪು ಸ್ವಾಮಿ, ವಿಷ್ಣುಮೂರ್ತಿ ವಿಶ್ವನಾಥ್ ಶೆಟ್ಟಿ, ಶೇಖರ್ ದೇರಳಕಟ್ಟೆ , ಇಬ್ರಾಹಿಂ ಮದಕ, ಲೋಕೇಶ್ , ಕೇಶವ , ಸುರೇಶ್ ಬಜಾಲ್, ಗಂಗಾಧರ್ ಸುರತ್ಕಲ್ ಇನ್ನಿತರರು ಭಾಗವಹಿಸಿದ್ದಾರೆ

Vishwa News 24

Recent Posts

ಬಿಜೆಪಿ ಪಕ್ಷಕ್ಕೆ ಸೇರ್ಪಡೆಗೊಂಡ ಟೆನಿಸ್ ಆಟಗಾರ ಲಿಯಾಂಡರ್ ಪೇಸ್ – vishwanews24

ಬಿಜೆಪಿ ಪಕ್ಷಕ್ಕೆ ಸೇರ್ಪಡೆಗೊಂಡ ಟೆನಿಸ್ ಆಟಗಾರ ಲಿಯಾಂಡರ್ ಪೇಸ್ ಹೊಸದಿಲ್ಲಿ: ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಗೆ ಮುನ್ನ ಟೆನಿಸ್ ಆಟಗಾರ…

5 hours ago

ಬೀದರ್ : ಮಳೆ ಆರ್ಭಟ ; ಸಿಡಿಲು ಬಡಿದು ಯುವಕ ಸಾವು – vishwanews24

ಬೀದರ್ : ಮಳೆ ಆರ್ಭಟ - ಸಿಡಿಲು ಬಡಿದು ಯುವಕ ಸಾವು ಬೀದರ್: ಸಿಡಿಲು ಬಡಿದು ಯುವಕನೊಬ್ಬ ಮೃತಪಟ್ಟ ಘಟನೆ ಔರಾದ್…

6 hours ago

ಬೆಳ್ತಂಗಡಿ:  ಚಲಿಸುತ್ತಿದ್ದ ಕೆಎಸ್ಸಾರ್ಟಿಸಿ ಬಸ್ಸಿನಿಂದ ಎಸೆಯಲ್ಪಟ್ಟು ಇಬ್ಬರು ವಿದ್ಯಾರ್ಥಿನಿಯರಿಗೆ ಗಾಯ – vishwanews24

ಬೆಳ್ತಂಗಡಿ:  ಏಕಾಏಕಿ ತೆರೆಯಲ್ಪಟ್ಟ ಬಸ್ಸಿನ ಬಾಗಿಲು ; ನಿಯಂತ್ರಣ ತಪ್ಪಿ ರಸ್ತೆಗೆ ಎಸೆಯಲ್ಪಟ್ಟು ಇಬ್ಬರು ವಿದ್ಯಾರ್ಥಿನಿಯರಿಗೆ ಗಾಯ ಬೆಳ್ತಂಗಡಿ: ಚಲಿಸುತ್ತಿದ್ದ ಬಸ್ಸಿನಿಂದ…

6 hours ago

ಉಡುಪಿ: ಚಲಿಸುತ್ತಿದ್ದ ರೈಲಿನಿಂದ ಜಿಗಿಯಲು ಯತ್ನ; ಯುವಕನ ರಕ್ಷಣೆ – vishwanews24

ಉಡುಪಿ: ಚಲಿಸುತ್ತಿದ್ದ ರೈಲಿನಿಂದ ಜಿಗಿಯಲು ಯತ್ನ; ಯುವಕನ ರಕ್ಷಣೆ ಉಡುಪಿ: ಟಿಕೆಟ್ ಇಲ್ಲದೆ ಪ್ರಯಾಣಿಸುತ್ತಿದ್ದ ಯುವಕನೊಬ್ಬ ರೈಲಿನಿಂದ ಜಿಗಿಯಲು ಯತ್ನಿಸುತ್ತಿದ್ದ…

7 hours ago

ಕಾಸರಗೋಡು :  ಕೆಟ್ಟು ನಿಂತಿದ್ದ ಪಿಕಪ್ ವ್ಯಾನ್ ಗೆ ಬೈಕ್ ಢಿಕ್ಕಿ: ಸವಾರ ಮೃತ್ಯು – vishwanews24

ಕಾಸರಗೋಡು :  ಕೆಟ್ಟು ನಿಂತಿದ್ದ ಪಿಕಪ್ ವ್ಯಾನ್ ಗೆ ಬೈಕ್ ಢಿಕ್ಕಿ: ಸವಾರ ಮೃತ್ಯು ಕಾಸರಗೋಡು : ರಾಷ್ಟ್ರೀಯ ಹೆದ್ದಾರಿಯ ಬದಿಯಲ್ಲಿ…

8 hours ago

ಪ್ರಥಮ ಪಿಯುಸಿ ಫಲಿತಾಂಶ ಪ್ರಕಟ ; ಆನ್‌ಲೈನ್‌ನಲ್ಲಿ ವೀಕ್ಷಿಸುವುದು ಹೇಗೆ? – vishwanews24

ಪ್ರಥಮ ಪಿಯುಸಿ ಫಲಿತಾಂಶ ಪ್ರಕಟ ; ಆನ್‌ಲೈನ್‌ನಲ್ಲಿ ವೀಕ್ಷಿಸುವುದು ಹೇಗೆ? ಬೆಂಗಳೂರು: ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿಯು…

8 hours ago