Featured

ಮಂಗಳೂರು : ಎಲ್ಲಾ ಧಾರ್ಮಿಕ‌ ಕೇಂದ್ರಗಳಲ್ಲಿ ಧ್ವನಿವರ್ಧಕ ಬಳಸಲು 15 ದಿನದೊಳಗೆ ಅನುಮತಿ ಪಡೆಯಬೇಕು: ರಾತ್ರಿ 10 ರಿಂದ ಬೆಳಗ್ಗೆ 6 ರವರೆಗೆ ಮೈಕ್‌ ನಿಷೇಧ : ಡಿಸಿ ಆದೇಶ – Vishwanews24

ಎಲ್ಲ ಧಾರ್ಮಿಕ, ಶೈಕ್ಷಣಿಕ ಹಾಗೂ ಸಾರ್ವಜನಿಕ ಸ್ಥಳಗಳಲ್ಲಿ ಧ್ವನಿವರ್ಧಕ ಬಳಕೆಗೆ ಅನುಮತಿ ಪಡೆಯುವುದು ಕಡ್ಡಾಯ..

15 ದಿನಗಳ ಒಳಗಾಗಿ ಅನುಮತಿ ಪಡೆಯದಿದ್ದಲ್ಲಿ ಸ್ವಯಂ ಪ್ರೇರಿತವಾಗಿ ಮೈಕ್‌ಗಳನ್ನು ತೆರವು..

ರಾತ್ರಿ 10 ರಿಂದ ಬೆಳಗ್ಗೆ 6 ರವರೆಗೆ ಧ್ವನಿವರ್ಧಕಗಳನ್ನು ಬಳಸಿದ್ದಲ್ಲಿ ಕಾನೂನು ಕ್ರಮ..

ದ.ಕ.ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ. ಆದೇಶ

ಮಂಗಳೂರು: ದ.ಕ.ಜಿಲ್ಲೆಯ ಎಲ್ಲಾ ಧಾರ್ಮಿಕ‌ ಕೇಂದ್ರಗಳಲ್ಲಿ ನಡೆಯುವ ಕಾರ್ಯಕ್ರಮಗಳಲ್ಲಿ ಧ್ವನಿವರ್ಧಕ ಬಳಸಲು 15 ದಿನದೊಳಗೆ ಅನುಮತಿ ಪಡೆಯಬೇಕು ಎಂದು ದ.ಕ.ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ. ಆದೇಶ ನೀಡಿದ್ದಾರೆ.

ಇನ್ನು ಮುಂದೆ ಜಿಲ್ಲೆಯಲ್ಲಿ ಎಲ್ಲ ಧಾರ್ಮಿಕ, ಶೈಕ್ಷಣಿಕ ಹಾಗೂ ಸಾರ್ವಜನಿಕ ಸ್ಥಳಗಳಲ್ಲಿ ಧ್ವನಿವರ್ಧಕ ಬಳಕೆಗೆ ಅನುಮತಿ ಪಡೆಯುವುದು ಕಡ್ಡಾಯ.

ಶಬ್ದ ಮಾಲಿನ್ಯ ನಿಯಂತ್ರಣ ನಿಯಮಗಳು 2000 ಹಾಗೂ ಪರಿಸರ ರಕ್ಷಣೆ ಕಾಯ್ದೆ1986ರಂತೆ ಶಬ್ದ ಮಾಲಿನ್ಯ ನಿಯಂತ್ರಿಸುವ ನಿಟ್ಟಿನಲ್ಲಿ ರಾಜ್ಯ ಸರಕಾರದ ಆದೇಶದಂತೆ ಜಿಲ್ಲಾ ಮಟ್ಟದಲ್ಲಿ ಅಧಿಕಾರಿಗಳ ಸಭೆ ನಡೆಸಿ ಸಮಿತಿ ರಚಿಸಲಾಗಿದೆ.

ಒಂದು ವೇಳೆ 15 ದಿನಗಳ ಒಳಗಾಗಿ ಅನುಮತಿ ಪಡೆಯದಿದ್ದಲ್ಲಿ ಅಂತಹ ಕೇಂದ್ರಗಳು ಸ್ವಯಂ ಪ್ರೇರಿತವಾಗಿ ಮೈಕ್‌ಗಳನ್ನು ತೆರವುಗೊಳಿಸಬೇಕು. ಇಲ್ಲದಿದ್ದಲ್ಲಿ ಅಧಿಕೃತ ಪ್ರಾಧಿಕಾರದಿಂದ ತೆರವು ಕಾರ್ಯಾಚರಣೆ ನಡೆಸಲಾಗುವುದು ಎಂದು ಜಿಲ್ಲಾಧಿಕಾರಿ ಎಚ್ಚರಿಕೆ ನೀಡಿದ್ದಾರೆ.

ಈ ಕಾಯ್ದೆಯ ಪ್ರಕಾರ ಬೆಳಗ್ಗೆ 6ರಿಂದ ರಾತ್ರಿ 10ರವರೆಗೆ ಸಾರ್ವಜನಿಕರು ಯಾವುದೇ ಸಭೆ ಸಮಾರಂಭ ಹಾಗೂ ಧಾರ್ಮಿಕ ಕಾರ್ಯಕ್ರಮಗಳಲ್ಲಿ ಧ್ವನಿವರ್ಧಕ ಬಳಕೆಗೆ ಕಡ್ಡಾಯವಾಗಿ ಅನುಮತಿ ಪಡೆಯಬೇಕು. ರಾತ್ರಿ 10 ರಿಂದ ಬೆಳಗ್ಗೆ 6 ರವರೆಗೆ ಧ್ವನಿವರ್ಧಕಗಳನ್ನು ಬಳಸಿದ್ದಲ್ಲಿ ಕಾನೂನು ಕ್ರಮಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ.

Vishwa News 24

Recent Posts

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು: ಯು.ಟಿ.ಖಾದರ್ – vishwanews24

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು ,  ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…

3 days ago

ಉಚ್ಚಿಲ : ಮೊಗವೀರ ಕುಲಗುರು ಕೀರ್ತಿಶೇಷ ಶ್ರೀ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ – vishwanews24

ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…

3 days ago

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ : ಅ. 18-19ರಂದು ವಿಜಯ ದಶಮಿ ಕರೆಯಲ್ಲಿ ಜೋಡುಕರೆ ಕಂಬಳ – vishwanews24

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…

3 days ago

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ – vishwanews24

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…

3 days ago

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ – vishwanews24

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…

3 days ago

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ – vishwanews24

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…

3 days ago