Featured

ಮಂಗಳೂರು : ಎಲ್ಲೆಡೆ ಕನ್ನಡ ಭಾಷೆಯನ್ನು ಪ್ರಧಾನವಾಗಿ ಜಾರಿಗೆ ತರುವಂತೆ ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ. ಸೂಚನೆ – Vishwanews24

ಮಂಗಳೂರು : ಎಲ್ಲೆಡೆ ಕನ್ನಡ ಭಾಷೆಯನ್ನು ಪ್ರಧಾನವಾಗಿ ಜಾರಿಗೆ ತರುವಂತೆ ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ. ಸೂಚನೆ – Vishwanews24

ಮಂಗಳೂರು: ಸಾಮಾಜಿಕ ಜಾಲತಾಣಗಳು ಸೇರಿದಂತೆ ಎಲ್ಲೆಡೆ ಕನ್ನಡ ಭಾಷೆಯ ವ್ಯಾಪಕ ಬಳಕೆಗೆ ಒತ್ತು ನೀಡುವ ಅಗತ್ಯತೆಯ ಬಗ್ಗೆ ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ. ಅವರು ಪ್ರತಿಪಾದಿಸಿದರು.

ಅವರು  ನಗರದ ಜಿಲ್ಲಾಧಿಕಾರಿಯವರ ಕಚೇರಿಯಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಕನ್ನಡ ಜಾಗೃತಿ ಸಮಿತಿ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಫೆಸ್‍ಬುಕ್, ಟ್ವಿಟ್ಟರ್, ಇನ್‍ಸ್ಟಾಗ್ರಾಂ ಸೇರಿದಂತೆ ಎಲ್ಲಾ ಸಾಮಾಜಿಕ ಜಾಲತಾಣಗಳಲ್ಲಿ ಕನ್ನಡ ಭಾಷೆಯನ್ನು ಪ್ರಧಾನವಾಗಿ ಬಳಸಬೇಕು, ಬ್ಯಾಂಕುಗಳು, ವಾಹನಗಳ ಸಂಖ್ಯಾ ಫಲಕ, ಸರ್ಕಾರಿ ವಾಹನಗಳ ನಾಮಫಲಕ, ಹೆದ್ದಾರಿ ಫಲಕ, ವಾಣಿಜ್ಯ ಮಳಿಗೆಗಳು, ಸಂಕಿರ್ಣಗಳು, ಖಾಸಗಿ ಕಚೇರಿಗಳು, ಹೋಟೆಲ್, ಚಿತ್ರಮಂದಿರ ಸೇರಿದಂತೆ ಕನ್ನಡ ಭಾಷೆಯನ್ನು ಕಡ್ಡಾಯವಾಗಿಸುವ ಬಗ್ಗೆ ಸಂಬಂಧಿಸಿದ ಇಲಾಖೆಯ ಮುಖ್ಯಸ್ಥರು ಅಗತ್ಯ ಕ್ರಮವಹಿಸುವಂತೆ ಅವರು ಸೂಚಿಸಿದರು.

ಇನ್ನುಮುಂದೆ ಕೆಡಿಪಿ ಸಭೆಗಳಲ್ಲಿ ಕನ್ನಡ ಭಾಷೆಯ ಬಳಕೆ ಕುರಿತಂತೆ ಅದನ್ನು ಒಂದು ಅಂಶವಾಗಿ ಚರ್ಚಿಸಲಾಗುವುದು, ಎಲ್ಲಾ ಸರ್ಕಾರಿ ಕಚೇರಿಯ ಜಾಲತಾಣಗಳಲ್ಲಿ ಕನ್ನಡವನ್ನು ಪ್ರಧಾನ ಭಾಷೆಯಾಗಿ ಜಾರಿಗೆ ತರುವಂತೆ ಅವರು ಸೂಚಿಸಿದರು.

ಜಿಲ್ಲೆಯಲ್ಲಿ ಕೇಂದ್ರ ಸರ್ಕಾರದ ಕಾರ್ಖಾನೆಗಳು, ಕಚೇರಿಗಳು, ಖಾಸಗಿ ಕಂಪನಿ, ಮತ್ತು ಕೈಗಾರಿಕೆಗಳಲ್ಲಿ ಉದ್ಯೋಗದಲ್ಲಿ ಕನ್ನಡಿಗರಿಗೆ ಪ್ರಾಧ್ಯಾನ್ಯತೆ ನೀಡುವಂತೆ ಸೂಚಿಸಿದರು, ವಾರ್ಷಿಕ ದರಪಟ್ಟಿ, ಅಂದಾಜುಪಟ್ಟಿ, ಟೆಂಡರುಗಳ ಪಟ್ಟಿಯನ್ನು ಕನ್ನಡದಲ್ಲಿ ಮುದ್ರಿಸಬೇಕು, ಸರ್ಕಾರಿ ಶಾಲೆಗಳ ಸಬಲೀಕರಣಕ್ಕಾಗಿ ಶಾಲೆಗಳ ದುರಸ್ತಿ, ಗ್ರಂಥಾಲಯ, ಗುಣಮಟ್ಟದ ಶಿಕ್ಷಣಕ್ಕೆ ಮೂಲಭೂತ ಅಭಿವೃದ್ಧಿ ಕಾಮಗಾರಿ ಕೆಲಸ ನಡೆಯುತ್ತಿದೆ ಎಂದು ಜಿಲ್ಲಾಧಿಕಾರಿಗಳು ತಿಳಿಸಿದರು.

ನ್ಯಾಯಾಲಯಗಳಲ್ಲಿ ಸಿವಿಲ್ ಹಾಗೂ ಕ್ರಿಮಿನಲ್ ಸೇರಿದಂತೆ ಇತರೆ ಪ್ರಕರಣಗಳ ಆದೇಶಗಳು ಕನ್ನಡ ಭಾಷೆಯಲ್ಲಿ ಲಭ್ಯವಾಗುವಂತೆ ಕ್ರಮವಹಿಸಲು ಜಿಲ್ಲಾ ನ್ಯಾಯಾಧೀಶರಿಗೆ ಮನವಿ ಮಾಡಲು ಸಭೆಯಲ್ಲಿ ನಿರ್ಣಯಿಸಲಾಯಿತು.

ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ಕುಮಾರ್, ಅಪರ ಜಿಲ್ಲಾಧಿಕಾರಿ ಕೃಷ್ಣಮೂರ್ತಿ, ಕನ್ನಡ ಮತ್ತು ಸಂಸ್ಕøತಿ ಇಲಾಖೆಯ ಸಹಾಯಕ ನಿರ್ದೇಶಕ ರಾಜೇಶ್ ಜಿ., ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಡಾ. ಎಂ.ಪಿ. ಶ್ರೀನಾಥ್, ಜಿಲ್ಲಾ ಕನ್ನಡ ಜಾಗೃತಿ ಸಮಿತಿ ಸದಸ್ಯರಾದ ರಾಮಚಂದ್ರ ಬೈಕಂಪಾಡಿ, ಸಸಿರಾಜ್ ಕಾವೂರು ಹಾಗೂ ಸಂಬಂಧಿಸಿದ ಅಧಿಕಾರಿಗಳು ಸಭೆಯಲ್ಲಿದ್ದರು.

Vishwa News 24

Recent Posts

ಕಡಬ: ಚಿನ್ನದ ತೂಕ ಹೆಚ್ಚಿಸಿ ಬ್ಯಾಂಕ್‌ ಗೆ ವಂಚನೆಗೆ ಯತ್ನ: ಇಬ್ಬರ ಬಂಧನ – vishwanews24

ಕಡಬ: ಚಿನ್ನದ ತೂಕ ಹೆಚ್ಚಿಸಿ ಬ್ಯಾಂಕ್‌ ಗೆ ವಂಚನೆಗೆ ಯತ್ನ: ಇಬ್ಬರ ಬಂಧನ ಕಡಬ: ಚಿನ್ನಾಭರಣದ ತೂಕವನ್ನು ಕೃತಕವಾಗಿ ಹೆಚ್ಚಿಸಿ…

11 hours ago

ಮಹಾರಾಷ್ಟ್ರ : ಕುಸಿದು ಬಿದ್ದ ರತ್ನಗಿರಿ ರೈಲು ನಿಲ್ದಾಣದ ಛಾವಣಿ ; ತಪ್ಪಿದ ದೊಡ್ಡ ದುರಂತ- vishwanews24

ಮಹಾರಾಷ್ಟ್ರ : ಮಳೆ ಅಬ್ಬರ - ಕುಸಿದು ಬಿದ್ದ ರತ್ನಗಿರಿ ರೈಲು ನಿಲ್ದಾಣದ ಛಾವಣಿ ; ತಪ್ಪಿದ ದೊಡ್ಡ ದುರಂತ…

11 hours ago

ಶಿವಮೊಗ್ಗ: ಬಸ್ ನಿಲ್ದಾಣದಲ್ಲಿ ಚೀಲದೊಳಗೆ ನವಜಾತ ಹೆಣ್ಣು ಮಗು ಪತ್ತೆ  – vishwanews24

ಶಿವಮೊಗ್ಗ: ಬಸ್ ನಿಲ್ದಾಣದಲ್ಲಿ ಚೀಲದೊಳಗೆ ನವಜಾತ ಹೆಣ್ಣು ಮಗು ಪತ್ತೆ  ಶಿವಮೊಗ್ಗ: ನವಜಾತ ಹೆಣ್ಣು ಶಿಶುವೊಂದನ್ನು ಬಸ್ ನಿಲ್ದಾಣದಲ್ಲಿ ಅನಾಥವಾಗಿ…

11 hours ago

ಪಡುಬಿದ್ರಿ : ನಡಿಪಟ್ಟಣದಲ್ಲಿ ಕಡಲು ಕೊರೆತಕ್ಕೆ ತಡೆಗೋಡೆ ನಿರ್ಮಾಣಕ್ಕೆ ಸಚಿವ ಖಾದರ್ ಗೆ ವಿಶ್ವಾಸ್ ಅಮೀನ್ ಮನವಿ – vishwanews24

ಪಡುಬಿದ್ರಿ : ನಡಿಪಟ್ಟಣದಲ್ಲಿ ಕಡಲು ಕೊರೆತಕ್ಕೆ ತಡೆಗೋಡೆ ನಿರ್ಮಾಣಕ್ಕೆ ಸಚಿವ ಖಾದರ್ ಗೆ ವಿಶ್ವಾಸ್ ಅಮೀನ್ ಮನವಿ ಪಡುಬಿದ್ರಿ: ಉಡುಪಿ…

11 hours ago

ಬಂಟ್ವಾಳ : ಬಸ್ಸಿಗೆ ಕಾಯುತ್ತಿದ್ದ ವಿದ್ಯಾರ್ಥಿಗೆ ಚೂರಿ ಇರಿತ – vishwanews24

ಬಂಟ್ವಾಳ : ಬಸ್ಸಿಗೆ ಕಾಯುತ್ತಿದ್ದ ವಿದ್ಯಾರ್ಥಿಗೆ ಚೂರಿ ಇರಿತ ಬಂಟ್ವಾಳ : ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಇರಾ…

11 hours ago

ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಅರ್ಜಿ ವಿಚಾರಣೆಗೆ ಅರ್ಹವಲ್ಲ: ಮತ್ತೊಮ್ಮೆ ಜಾಮೀನು ತಿರಸ್ಕರಿಸಿದ ಸುಪ್ರೀಂ – vishwanews24

 ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಅರ್ಜಿ ವಿಚಾರಣೆಗೆ ಅರ್ಹವಲ್ಲ: ಮತ್ತೊಮ್ಮೆ ಜಾಮೀನು ತಿರಸ್ಕರಿಸಿದ ಸುಪ್ರೀಂ ನಟ ದರ್ಶನ್ ರೇಣುಕಾ…

3 days ago