Featured

ಮಂಗಳೂರು:  ಎಲ್ಲ ಕಡೆ ಕಾಂಗ್ರೆಸ್ ಬದಲಾವಣೆಯ ಗಾಳಿ ಬೀಸತೊಡಗಿದೆ , ಅದು ಕರಾವಳಿಯಿಂದಲೇ ಆರಂಭ ಎನ್ನುವುದು ಸಂತೋಷ : ದಿನೇಶ್ ಗುಂಡೂರಾವ್ – Vishwanews24

ಮಂಗಳೂರು:  ಎಲ್ಲ ಕಡೆ ಕಾಂಗ್ರೆಸ್ ಬದಲಾವಣೆಯ ಗಾಳಿ ಬೀಸತೊಡಗಿದೆ , ಅದು ಕರಾವಳಿಯಿಂದಲೇ ಆರಂಭ : ದಿನೇಶ್ ಗುಂಡೂರಾವ್

ಮಂಗಳೂರು: ಸಮಾಜದ ಪ್ರತಿಯೊಬ್ಬರು ಅಭಿವೃದ್ಧಿಯಾಗಬೇಕು. ಈ ನಿಟ್ಟಿನಲ್ಲಿ ಸರಕಾರ ಕೆಲಸ ಮಾಡುತ್ತಿಲಿದೆ. ಇದೀಗ ಎಲ್ಲ ಕಡೆ ಕಾಂಗ್ರೆಸ್ ಬದಲಾವಣೆಯ ಗಾಳಿ ಬೀಸತೊಡಗಿದೆ. ಅದು ಕರಾವಳಿಯಿಂದಲೇ ಆರಂಭವಾಗಿದೆ ಎನ್ನುವುದು ಸಂತೋಷದ ವಿಷಯ ಎಂದು ದ.ಕ.ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ.

ನಗರದ ಓಷಿಯನ್ ಪರ್ಲ್’ನಲ್ಲಿ ಹಿಂದುಳಿದ ವರ್ಗಗಳಾದ ಗಟ್ಟಿ, ಕುಲಾಲ್, ವಿಶ್ವಕರ್ಮ, ಮೊಗವೀರ, ದೇವಾಡಿಗ, ಕ್ರೈಸ್ತ, ಬ್ರಾಹ್ಮಣ, ಬಲ್ಯಾಯ, ಜಿಎಸ್‌ಬಿ., ಎಸ್‌ಸಿ., ಎಸ್‌ಟಿ., ಜೋಗಿ, ರಾಮ ಕ್ಷತ್ರೀಯಾ, ಗಾಣಿಗ, ಸವಿತಾ, ಮಡಿವಾಳ ಸಮುದಾಯಗಳ ಸಮಾಲೋಚನಾ ಸಭೆಯಲ್ಲಿ ಮಾತನಾಡಿದ ಅವರು ನೀವು ನಮ್ಮ ಆತ್ಮವಿಶ್ವಾಸವನ್ನು ಹೆಚ್ಚಿಸಿದ್ದೀರಿ. ನ್ಯಾಯಯುತ ಬದುಕಿಗೆ ಯಾವುದೇ ತೊಂದರೆ ಆಗದಂತೆ ಕ್ರಮ ಕೈಗೊಳ್ಳಲಾಗುವುದು ಎಂದರು.

 

ಹಿಂದುಳಿದ ವರ್ಗಗಳ ಸಮಸ್ಯೆಗಳನ್ನು ತಿಳಿದುಕೊಳ್ಳುವ ದಿಶೆಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಅವರ ನೇತೃತ್ವದಲ್ಲಿ ಸಮಾಲೋಚನಾ ಸಭೆ ಕರೆಯಲಾಗಿದೆ. ಸಮಾಜದ ಅಭಿವೃದ್ಧಿ, ಬೇಡಿಕೆಗಳ ಬಗ್ಗೆ ಕ್ರಮ ಕೈಗೊಳ್ಳುವ ನಿಟ್ಟಿನಲ್ಲಿ ಇದೊಂದು ಮಹತ್ವದ ಹೆಜ್ಜೆ. ದೈವ ದೇವರುಗಳ ನೆಲೆಬೀಡಾದ ಈ ನೆಲದಲ್ಲಿ ಸಂಪ್ರದಾಯಕ್ಕೆ ಬೆಲೆ ಸಿಗುವಂತಾಗಬೇಕು. ಸಾಮಾಜಿಕ ನ್ಯಾಯ ನೀಡುವಲ್ಲಿ ಬದ್ಧತೆ ಇರುವ ಪಕ್ಷ ಕಾಂಗ್ರೆಸ್. ಮುಂದೆ ಪ್ರತಿ ಮೂರು ತಿಂಗಳಿಗೊಮ್ಮೆ ಅಧಿಕಾರಿಗಳ ಜೊತೆ ಇದೇ ರೀತಿಯ ಸಮಾಲೋಚನಾ ಸಭೆ ನಡೆಸಲಾಗುವುದು. ಹಿಂದುಳಿದ ವರ್ಗಗಳ ಧ್ವನಿಯಾಗಿ ಕೆಲಸ ನಿರ್ವಹಿಸುತ್ತೇನೆ ಎಂದರು.

ವಿಧಾನ ಪರಿಷತ್ ಸದಸ್ಯ ಬಿ.ಕೆ. ಹರಿಪ್ರಸಾದ್, ಡಿಸಿಸಿ ಅಧ್ಯಕ್ಷ ಹರೀಶ್ ಕುಮಾರ್, ರಮಾನಾಥ ರೈ, ಕೆಪಿಸಿಸಿ ಉಪಾಧ್ಯಕ್ಷ ಐವನ್ ಡಿಸೋಜ, ಕಾರ್ಪೋರೇಟರ್ ಎ.ಸಿ. ವಿನಯ್ ರಾಜ್, ಮಾಜಿ ಮೇಯರ್ ಭಾಸ್ಕರ್ ಮೊಯಿಲಿ, ಮಾಜಿ ಶಾಸಕ ಜೆ.ಆರ್. ಲೋಬೊ, ಕಾಂಗ್ರೆಸ್ ಧುರೀಣ ಕಣಚೂರು ಮೋನು ಮೊದಲಾದವರು ಉಪಸ್ಥಿತರಿದ್ದರು.

Vishwa News 24

Recent Posts

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ -vishwanews24

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…

5 days ago

ದೋಣಿ ಮುಗುಚಿ ಇಬ್ಬರು ಯುವಕರು ನೀರುಪಾಲು : ಓರ್ವನ ಮೃತದೇಹ ಪತ್ತೆ, ಇನ್ನೋರ್ವನಿಗಾಗಿ ಶೋಧ – vishwanews24

ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು  ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…

6 days ago

ಬಿಜೆಪಿ ಬೆಂಬಲಿಸುವವರೂ ನಮ್ಮ ಗ್ಯಾರಂಟಿಗಳ ಫಲಾನುಭವಿಗಳು : ಸಿದ್ದರಾಮಯ್ಯ – vishwanews24

 ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…

6 days ago

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ – vishwanews24

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…

6 days ago

ರೈಲು ಪ್ರಯಾಣಿಕರ ಗಮನಕ್ಕೆ: ಇಂದಿನಿಂದ ಬುಕ್ಕಿಂಗ್ ಮತ್ತು ರದ್ದತಿ  ನಿಯಮದಲ್ಲಿ ಭಾರಿ ಬದಲಾವಣೆ ; ಇಲ್ಲಿದೆ ಪೂರ್ಣ ಮಾಹಿತಿ – vishwanews24

ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…

6 days ago

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ – vishwanews24

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…

6 days ago