ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ (ಎಸ್‌ಸಿಡಿಸಿಸಿ ಬ್ಯಾಂಕ್) ಇದರ ಮುಂದಿನ ಐದು ವರ್ಷಗಳ ಅವಧಿಗೆ ಆಡಳಿತ ಮಂಡಳಿಯ ನಿರ್ದೇಶಕರ ಸ್ಥಾನಗಳಿಗೆ ಎಂ.ಎನ್.ರಾಜೇಂದ್ರ ಕುಮಾರ್ ನೇತೃತ್ವದ ಅಭ್ಯರ್ಥಿಗಳು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ನಿರ್ದೇಶಕರ ಸ್ಥಾನಕ್ಕೆ ಮಾ.3ರಂದು ನಾಮಪತ್ರ ಸಲ್ಲಿಕೆಗೆ ಕೊನೆಯ ದಿನವಾಗಿತ್ತು. ಮಾ.4 ರಂದು ನಾಮಪತ್ರಗಳ ಪರಿಶೀಲನೆ ನಡೆದು ಎಲ್ಲರೂ ಅವಿರೋಧವಾಗಿ ಆಯ್ಕೆಯಾದರು. ಮಾ.11ರಂದು ಚುನಾವಣೆ ನಿಗದಿಯಾಗಿತ್ತು.
ಎಲ್ಲಾ ಪ್ರಾಥಮಿಕ ವ್ಯವಸಾಯ ಸೇವಾ ಸಹಕಾರ ಸಂಘಗಳ ಪ್ರತಿನಿಧಿಗಳ ಕ್ಷೇತ್ರದಿಂದ 13, ತಾಲೂಕು ಕೃಷಿ ಉತ್ಪನ್ನ ಮಾರಾಟ ಸಹಕಾರ ಸಂಘಗಳ ಕ್ಷೇತ್ರದಿಂದ 1, ಪಟ್ಟಣ ಸಹಕಾರ ಬ್ಯಾಂಕುಗಳ ಮತ್ತು ಕೃಷಿಯೇತರ ಪತ್ತಿನ ಸಹಕಾರ ಸಂಘಗಳ ಕ್ಷೇತ್ರದಿಂದ 1, ಹಾಗೂ ಇತರೆ ಎಲ್ಲಾ ಸಹಕಾರ ಸಂಘಗಳ ಕ್ಷೇತ್ರದಿಂದ ಒಬ್ಬರು ಅವಿರೋಧವಾಗಿ ಆಯ್ಕೆ ಆಗಿರುವರು.
ಚುನಾಯಿತ ಪ್ರತಿನಿಧಿಗಳು: ಎಸ್‌ಸಿಡಿಸಿಸಿ ಬ್ಯಾಂಕಿನ ನಿರ್ದೇಶಕರಾಗಿ ಅವಿರೋಧವಾಗಿ ಆಯ್ಕೆಯಾದವರ ಪಟ್ಟಿ
ಮಂಗಳೂರು ತಾಲೂಕು ಪ್ರಾಥಮಿಕ ವ್ಯವಸಾಯ ಸೇವಾ ಸಹಕಾರ ಸಂಘಗಳ ಕ್ಷೇತ್ರದಿಂದ ಎಂ.ಎನ್.ರಾಜೇಂದ್ರ ಕುಮಾರ್, ವಿನಯ ಕುಮಾರ್ ಸೂರಿಂಜೆ, ಭಾಸ್ಕರ ಎಸ್.ಕೋಟ್ಯಾನ್, ಕೆ.ಹರಿಶ್ಚಂದ್ರ
ಬಂಟ್ವಾಳ ತಾಲೂಕು ಪ್ರಾಥಮಿಕ ವ್ಯವಸಾಯ ಸೇವಾ ಸಹಕಾರ ಸಂಘಗಳ ಕ್ಷೇತ್ರದಿಂದ ಟಿ.ಜಿ.ರಾಜಾರಾಮ ಭಟ್
ಉಡುಪಿ ತಾಲೂಕು ಪ್ರಾಥಮಿಕ ವ್ಯವಸಾಯ ಸೇವಾ ಸಹಕಾರ ಸಂಘಗಳ ಕ್ಷೇತ್ರದಿಂದ ದೇವಿ ಪ್ರಸಾದ್ ಶೆಟ್ಟಿ, ಬಿ.ಅಶೋಕ್ ಕುಮಾರ್ ಶೆಟ್ಟಿ
ಪುತ್ತೂರು ತಾಲೂಕು ಪ್ರಾಥಮಿಕ ವ್ಯವಸಾಯ ಸೇವಾ ಸಹಕಾರ ಸಂಘಗಳ ಕ್ಷೇತ್ರದಿಂದ ಶಶಿಕುಮಾರ್ ರೈ ಬಿ.,
ಕುಂದಾಪುರ ತಾಲೂಕು ಪ್ರಾಥಮಿಕ ವ್ಯವಸಾಯ ಸೇವಾ ಸಹಕಾರ ಸಂಘಗಳ ಕ್ಷೇತ್ರದಿಂದ ಎಸ್.ರಾಜು ಪೂಜಾರಿ, ಎಂ.ಮಹೇಶ್ ಹೆಗ್ಡೆ
ಕಾರ್ಕಳ ತಾಲೂಕು ಪ್ರಾಥಮಿಕ ವ್ಯವಸಾಯ ಸೇವಾ ಸಹಕಾರ ಸಂಘಗಳ ಕ್ಷೇತ್ರದಿಂದ ಯಂ.ವಾದಿರಾಜ ಶೆಟ್ಟಿ,
ಬೆಳ್ತಂಗಡಿ ತಾಲೂಕು ಪ್ರಾಥಮಿಕ ವ್ಯವಸಾಯ ಸೇವಾ ಸಹಕಾರ ಸಂಘಗಳ ಕ್ಷೇತ್ರದಿಂದ ಕುಶಾಲಪ್ಪ ಗೌಡ ಪಿ,
ಸುಳ್ಯ ತಾಲೂಕು ಪ್ರಾಥಮಿಕ ವ್ಯವಸಾಯ ಸೇವಾ ಸಹಕಾರ ಸಂಘಗಳ ಕ್ಷೇತ್ರದಿಂದ ಎಸ್.ಎನ್.ಮನ್ಮಥ, ತಾಲೂಕು ಕೃಷಿ ಉತ್ಪನ್ನ ಮಾರಾಟ ಸಹಕಾರ ಸಂಘಗಳ ಕ್ಷೇತ್ರದಿಂದ ಮೋನಪ್ಪ ಶೆಟ್ಟಿ ಎಕ್ಕಾರು, ಪಟ್ಟಣ ಸಹಕಾರ ಬ್ಯಾಂಕುಗಳ ಮತ್ತು ಕೃಷಿಯೇತರ ಪತ್ತಿನ ಸಹಕಾರ ಸಂಘಗಳ ಕ್ಷೇತ್ರದಿಂದ ಕೆ.ಜೈರಾಜ್ ಬಿ.ರೈ. ಮತ್ತು ಇತರೆ ಎಲ್ಲಾ ಸಹಕಾರ ಸಂಘಗಳ ಕ್ಷೇತ್ರದಿಂದ ಎಸ್.ಬಿ.ಜಯರಾಮ ರೈ ಅವಿರೋಧವಾಗಿ ಆಯ್ಕೆಗೊಂಡಿದ್ದಾರೆ.
ಚುನಾವಣಾಧಿಕಾರಿಯಾಗಿ ಮಂಗಳೂರು ಉಪವಿಭಾಗದ ಸಹಾಯಕ ಆಯುಕ್ತರಾದ ಹರ್ಷವರ್ಧನ ಎಸ್.ಜೆ., ಮಂಗಳೂರು ಉಪ ವಿಭಾಗದ ಸಹಕಾರ ಸಂಘಗಳ ಸಹಾಯಕ ನಿಬಂಧಕರಾದ ಸುಧೀರ್ ಕುಮಾರ್ ಜೆ. ಸಹಾಯಕ ಚುನಾವಣಾಧಿಕಾರಿಯಾಗಿದ್ದರು
ಮಲಬಾರ್ ಗೋಲ್ಡ್ ಅಂಡ್ ಡೈಮಂಡ್ಸ್ ಉಡುಪಿ ಶಾಖೆ ವತಿಯಿಂದ ಗಾಂಧಿ ಜಯಂತಿ ಆಚರಣೆ ಮಲಬಾರ್ ಗೋಲ್ಡ್ ಅಂಡ್ ಡೈಮಂಡ್ಸ್ ಉಡುಪಿ…
ಮಂಗಳೂರು : ಅ.2ರಂದು ಜಿಲ್ಲಾ ಯುವ ಕಾಂಗ್ರೆಸ್‌ನಿಂದ ‘ಸದ್ಭಾವನಾ ನಡಿಗೆ’ ಮಂಗಳೂರು: ಗಾಂಧಿ ಜಯಂತಿ ಪ್ರಯುಕ್ತ ದ.ಕ.ಜಿಲ್ಲಾ ಯುವ ಕಾಂಗ್ರೆಸ್…
ಶಂಕರಪುರ ದ್ವಾರಕಾಮಾಯಿ ಮಠದಲ್ಲಿ ‘ಪಂಚಾಶತ್ ಜನ್ಮ ವೈಭವ’ ಅ.3ರಿಂದ ಧಾರ್ಮಿಕ ಕಾರ್ಯಕ್ರಮಗಳ ಚಾಲನೆ.. ವರ್ಷಪೂರ್ತಿ ಗೋಸೇವೆ, ಅನ್ನದಾನ, ಆರೋಗ್ಯ–ಶಿಕ್ಷಣ ಸೇವೆ…
ಸೌಜನ್ಯಾ ಪ್ರಕರಣದ ಮರುತನಿಖೆ: ಮಂಗಳೂರಿಗೆ ಆಗಮಿಸಿದ ನೂತನ ಎಸ್ಐಟಿ ತಂಡ ಮಂಗಳೂರು : ಸೌಜನ್ಯಾ ಅತ್ಯಾಚಾರ, ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ…
ಪರಪ್ಪನ ಆಗ್ರಹಾರ ಕಾರಾಗೃಹದಲ್ಲಿ ಮತ್ತೆ ಮೊಬೈಲ್ ಫೋನ್, ಸಿಮ್ಕಾರ್ಡ್ ಗಳು ಪತ್ತೆ ಬೆಂಗಳೂರು: ಪರಪ್ಪನ ಆಗ್ರಹಾರ ಕೇಂದ್ರ ಕಾರಾಗೃಹದಲ್ಲಿ ಮೊಬೈಲ್…
ಎಂಆರ್‌ಪಿಎಲ್ ಕಾರ್ಮಿಕರ ಮುಷ್ಕರ: ಮೃತ ಮನೀಶ್ ಕಾರ್ಕಡಗೆ ಶ್ರದ್ಧಾಂಜಲಿ, ಪರಿಹಾರಕ್ಕೆ ಆಗ್ರಹ ಮಂಗಳೂರು: ಎಂಆರ್‌ಪಿಎಲ್‌ನಲ್ಲಿ ನಿನ್ನೆ (ಸೆ.30ರ ಬುಧವಾರ) ನಡೆದ…