Featured

ಮಂಗಳೂರು: ಎಸ್‌ಸಿಡಿಸಿಸಿ ಬ್ಯಾಂಕ್ ಆಡಳಿತ ಮಂಡಳಿ ಚುನಾವಣೆ: ರಾಜೇಂದ್ರ ಕುಮಾರ್ ಸೇರಿ 16 ಮಂದಿ ಅವಿರೋಧವಾಗಿ ಆಯ್ಕೆ – Vishwanews24

ಮಂಗಳೂರು: ಎಸ್‌ಸಿಡಿಸಿಸಿ ಬ್ಯಾಂಕ್ ಆಡಳಿತ ಮಂಡಳಿ ಚುನಾವಣೆ: ರಾಜೇಂದ್ರ ಕುಮಾರ್ ಸೇರಿ 16 ಮಂದಿ ಅವಿರೋಧವಾಗಿ ಆಯ್ಕೆ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ (ಎಸ್‌ಸಿಡಿಸಿಸಿ ಬ್ಯಾಂಕ್) ಇದರ ಮುಂದಿನ ಐದು ವರ್ಷಗಳ ಅವಧಿಗೆ ಆಡಳಿತ ಮಂಡಳಿಯ ನಿರ್ದೇಶಕರ ಸ್ಥಾನಗಳಿಗೆ ಎಂ.ಎನ್.ರಾಜೇಂದ್ರ ಕುಮಾರ್ ನೇತೃತ್ವದ ಅಭ್ಯರ್ಥಿಗಳು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ನಿರ್ದೇಶಕರ ಸ್ಥಾನಕ್ಕೆ ಮಾ.3ರಂದು ನಾಮಪತ್ರ ಸಲ್ಲಿಕೆಗೆ ಕೊನೆಯ ದಿನವಾಗಿತ್ತು. ಮಾ.4 ರಂದು ನಾಮಪತ್ರಗಳ ಪರಿಶೀಲನೆ ನಡೆದು ಎಲ್ಲರೂ ಅವಿರೋಧವಾಗಿ ಆಯ್ಕೆಯಾದರು. ಮಾ.11ರಂದು ಚುನಾವಣೆ ನಿಗದಿಯಾಗಿತ್ತು.

ಎಲ್ಲಾ ಪ್ರಾಥಮಿಕ ವ್ಯವಸಾಯ ಸೇವಾ ಸಹಕಾರ ಸಂಘಗಳ ಪ್ರತಿನಿಧಿಗಳ ಕ್ಷೇತ್ರದಿಂದ 13, ತಾಲೂಕು ಕೃಷಿ ಉತ್ಪನ್ನ ಮಾರಾಟ ಸಹಕಾರ ಸಂಘಗಳ ಕ್ಷೇತ್ರದಿಂದ 1, ಪಟ್ಟಣ ಸಹಕಾರ ಬ್ಯಾಂಕುಗಳ ಮತ್ತು ಕೃಷಿಯೇತರ ಪತ್ತಿನ ಸಹಕಾರ ಸಂಘಗಳ ಕ್ಷೇತ್ರದಿಂದ 1, ಹಾಗೂ ಇತರೆ ಎಲ್ಲಾ ಸಹಕಾರ ಸಂಘಗಳ ಕ್ಷೇತ್ರದಿಂದ ಒಬ್ಬರು ಅವಿರೋಧವಾಗಿ ಆಯ್ಕೆ ಆಗಿರುವರು.

ಚುನಾಯಿತ ಪ್ರತಿನಿಧಿಗಳು: ಎಸ್‌ಸಿಡಿಸಿಸಿ ಬ್ಯಾಂಕಿನ ನಿರ್ದೇಶಕರಾಗಿ ಅವಿರೋಧವಾಗಿ ಆಯ್ಕೆಯಾದವರ ಪಟ್ಟಿ

ಮಂಗಳೂರು ತಾಲೂಕು ಪ್ರಾಥಮಿಕ ವ್ಯವಸಾಯ ಸೇವಾ ಸಹಕಾರ ಸಂಘಗಳ ಕ್ಷೇತ್ರದಿಂದ ಎಂ.ಎನ್.ರಾಜೇಂದ್ರ ಕುಮಾರ್, ವಿನಯ ಕುಮಾರ್ ಸೂರಿಂಜೆ, ಭಾಸ್ಕರ ಎಸ್.ಕೋಟ್ಯಾನ್, ಕೆ.ಹರಿಶ್ಚಂದ್ರ

ಬಂಟ್ವಾಳ ತಾಲೂಕು ಪ್ರಾಥಮಿಕ ವ್ಯವಸಾಯ ಸೇವಾ ಸಹಕಾರ ಸಂಘಗಳ ಕ್ಷೇತ್ರದಿಂದ ಟಿ.ಜಿ.ರಾಜಾರಾಮ ಭಟ್

ಉಡುಪಿ ತಾಲೂಕು ಪ್ರಾಥಮಿಕ ವ್ಯವಸಾಯ ಸೇವಾ ಸಹಕಾರ ಸಂಘಗಳ ಕ್ಷೇತ್ರದಿಂದ ದೇವಿ ಪ್ರಸಾದ್ ಶೆಟ್ಟಿ, ಬಿ.ಅಶೋಕ್ ಕುಮಾರ್ ಶೆಟ್ಟಿ

ಪುತ್ತೂರು ತಾಲೂಕು ಪ್ರಾಥಮಿಕ ವ್ಯವಸಾಯ ಸೇವಾ ಸಹಕಾರ ಸಂಘಗಳ ಕ್ಷೇತ್ರದಿಂದ ಶಶಿಕುಮಾರ್ ರೈ ಬಿ.,

ಕುಂದಾಪುರ ತಾಲೂಕು ಪ್ರಾಥಮಿಕ ವ್ಯವಸಾಯ ಸೇವಾ ಸಹಕಾರ ಸಂಘಗಳ ಕ್ಷೇತ್ರದಿಂದ ಎಸ್.ರಾಜು ಪೂಜಾರಿ, ಎಂ.ಮಹೇಶ್ ಹೆಗ್ಡೆ

ಕಾರ್ಕಳ ತಾಲೂಕು ಪ್ರಾಥಮಿಕ ವ್ಯವಸಾಯ ಸೇವಾ ಸಹಕಾರ ಸಂಘಗಳ ಕ್ಷೇತ್ರದಿಂದ ಯಂ.ವಾದಿರಾಜ ಶೆಟ್ಟಿ,

ಬೆಳ್ತಂಗಡಿ ತಾಲೂಕು ಪ್ರಾಥಮಿಕ ವ್ಯವಸಾಯ ಸೇವಾ ಸಹಕಾರ ಸಂಘಗಳ ಕ್ಷೇತ್ರದಿಂದ ಕುಶಾಲಪ್ಪ ಗೌಡ ಪಿ,

ಸುಳ್ಯ ತಾಲೂಕು ಪ್ರಾಥಮಿಕ ವ್ಯವಸಾಯ ಸೇವಾ ಸಹಕಾರ ಸಂಘಗಳ ಕ್ಷೇತ್ರದಿಂದ ಎಸ್.ಎನ್.ಮನ್ಮಥ, ತಾಲೂಕು ಕೃಷಿ ಉತ್ಪನ್ನ ಮಾರಾಟ ಸಹಕಾರ ಸಂಘಗಳ ಕ್ಷೇತ್ರದಿಂದ ಮೋನಪ್ಪ ಶೆಟ್ಟಿ ಎಕ್ಕಾರು, ಪಟ್ಟಣ ಸಹಕಾರ ಬ್ಯಾಂಕುಗಳ ಮತ್ತು ಕೃಷಿಯೇತರ ಪತ್ತಿನ ಸಹಕಾರ ಸಂಘಗಳ ಕ್ಷೇತ್ರದಿಂದ ಕೆ.ಜೈರಾಜ್ ಬಿ.ರೈ. ಮತ್ತು ಇತರೆ ಎಲ್ಲಾ ಸಹಕಾರ ಸಂಘಗಳ ಕ್ಷೇತ್ರದಿಂದ ಎಸ್.ಬಿ.ಜಯರಾಮ ರೈ ಅವಿರೋಧವಾಗಿ ಆಯ್ಕೆಗೊಂಡಿದ್ದಾರೆ.

ಚುನಾವಣಾಧಿಕಾರಿಯಾಗಿ ಮಂಗಳೂರು ಉಪವಿಭಾಗದ ಸಹಾಯಕ ಆಯುಕ್ತರಾದ ಹರ್ಷವರ್ಧನ ಎಸ್.ಜೆ., ಮಂಗಳೂರು ಉಪ ವಿಭಾಗದ ಸಹಕಾರ ಸಂಘಗಳ ಸಹಾಯಕ ನಿಬಂಧಕರಾದ ಸುಧೀರ್ ಕುಮಾರ್ ಜೆ. ಸಹಾಯಕ ಚುನಾವಣಾಧಿಕಾರಿಯಾಗಿದ್ದರು

Vishwa News 24

Recent Posts

ಉಡುಪಿ ನಗರಸಭೆ ವ್ಯಾಪ್ತಿಯ ಮೂಲ ಸೌಕರ್ಯ ಅಭಿವೃದ್ಧಿಗೆ ರೂ. 30 ಕೋಟಿ ಅನುದಾನ ಮಂಜೂರು ಮಾಡುವಂತೆ  ಶಾಸಕ ಯಶ್ ಪಾಲ್ ಮನವಿ – vishwanews24

ಉಡುಪಿ ನಗರಸಭೆ ಮೂಲ ಸೌಕರ್ಯ ಅಭಿವೃದ್ಧಿಗೆ ರೂ. 30 ಕೋಟಿ ವಿಶೇಷ ಅನುದಾನ ಮಂಜೂರು ಮಾಡುವಂತೆ ನಗರಾಭಿವೃದ್ಧಿ ಸಚಿವ ಯತೀಂದ್ರ…

1 hour ago

ಮಂಗಳೂರು: ಮುಂದಿನ ಏಷ್ಯನ್ ಗೇಮ್ಸ್‌ನಲ್ಲಿ ಉತ್ತಮ ಪ್ರದರ್ಶನ ನೀಡಿ ಚಿನ್ನ ಗೆಲ್ಲುವೆ : ಪೂವಮ್ಮ – vishwanews24

ಮಂಗಳೂರು: ಮುಂದಿನ ಏಷ್ಯನ್ ಗೇಮ್ಸ್‌ನಲ್ಲಿ ಉತ್ತಮ ಪ್ರದರ್ಶನ ನೀಡಿ ಚಿನ್ನ ಗೆಲ್ಲುವೆ : ಪೂವಮ್ಮ ಮಂಗಳೂರು: ಬದುಕಿನಲ್ಲಿ ಅನೇಕ ಏಳು…

1 hour ago

ಉಡುಪಿ ಜಿಲ್ಲೆಯಲ್ಲಿ ತಾತ್ಕಾಲಿಕ ಸುಡುಮದ್ದು ಮಾರಾಟಕ್ಕೆ ಲೈಸನ್ಸ್ : ಅರ್ಜಿ ಸಲ್ಲಿಸಲು ಅ.26 ಕೊನೆಯ ದಿನ – vishwanews24

ಉಡುಪಿ :ಜಿಲ್ಲೆಯಲ್ಲಿ ತಾತ್ಕಾಲಿಕ ಸುಡುಮದ್ದು ಮಾರಾಟ ; ಲೈಸನ್ಸ್‌ಗಾಗಿ ಅರ್ಜಿ ಸಲ್ಲಿಸಲು ಅ. 26 ಕೊನೆಯ ದಿನ ಉಡುಪಿ: ದೀಪಾವಳಿ…

2 hours ago

ಉಡುಪಿ : ಯಕ್ಷಗಾನವನ್ನು ‘ಕರ್ನಾಟಕ ರಾಜ್ಯ ಕಲೆ’ ಎಂದು ಘೋಷಿಸಿ : ಮುಖ್ಯಮಂತ್ರಿಗಳಿಗೆ ಕರ್ನಾಟಕ ಯಕ್ಷಗಾನ ಅಕಾಡೆಮಿ ಮನವಿ – vishwanews24

ಉಡುಪಿ : ಯಕ್ಷಗಾನವನ್ನು ‘ಕರ್ನಾಟಕ ರಾಜ್ಯ ಕಲೆ’ ಎಂದು ಘೋಷಿಸಿ : ಮುಖ್ಯಮಂತ್ರಿಗಳಿಗೆ ಕರ್ನಾಟಕ ಯಕ್ಷಗಾನ ಅಕಾಡೆಮಿ ಮನವಿ ಉಡುಪಿ…

2 hours ago

ರಾಜ್ಯಕ್ಕೆ 3705.30 ಕೋಟಿ ರೂ. ಬರ ಪರಿಹಾರ ನೀಡಿ: ಸಿಎಂ ಡಿ.ಕೆ.ಶಿವಕುಮಾರ್ ಮನವಿ – vishwanews24

ರಾಜ್ಯಕ್ಕೆ 3705.30 ಕೋಟಿ ರೂ. ಬರ ಪರಿಹಾರ ನೀಡಿ: ಸಿಎಂ ಡಿ.ಕೆ.ಶಿವಕುಮಾರ್ ಮನವಿ ಕೇಂದ್ರ ಬರ ಅಧ್ಯಯನ ತಂಡದೊಂದಿಗೆ ಸಿಎಂ…

2 hours ago

ಮಣಿಪಾಲ: ಕ್ಯು ಆರ್ ಕೋಡ್ ಬದಲಿಸಿ 12 ಲಕ್ಷ ರೂಪಾಯಿ ವಂಚನೆ – vishwanews24

ಮಣಿಪಾಲ: ಕ್ಯು ಆರ್ ಕೋಡ್ ಬದಲಿಸಿ 12 ಲಕ್ಷ ರೂಪಾಯಿ ವಂಚನೆ ಮಣಿಪಾಲ: ಕಂಪೆನಿ ಕ್ಯು ಆರ್‌ಕೋಡ್ ಬಳಸದೆ ಮರ್ಚೆಂಟ್…

2 hours ago