ಮಂಗಳೂರು : “ಎಸ್.ಡಿ.ಪಿ.ಐ ಮತ್ತು ಪಿ.ಎಫ್.ಐ ಸಂಘಟನೆ ಇಂದು ಕರೆ ನೀಡಿರುವ ಪ್ರತಿಭಟನೆ ಹಾಗೂ ರ್‍ಯಾಲಿಯಲ್ಲಿ ಪ್ರತಿಭಟನೆಗೆ ಮಾತ್ರ ಮಂಗಳೂರು ತಾಲೂಕು ಕಚೇರಿ ಮುಂದೆ ಅವಕಾಶ ನೀಡಲಾಗಿದೆ. ಇದರ ಹೊರತಾಗಿ ಯಾವುದೇ ರ್‍ಯಾಲಿ ಅಥವಾ ಜಾಥಾ ನಡೆಸುವುದಕ್ಕೆ ಅವಕಾಶವಿಲ್ಲ” ಎಂದು ಮಂಗಳೂರು ನಗರ ಪೊಲೀಸ್ ಆಯುಕ್ತ ಶಶಿಕುಮಾರ್ ತಿಳಿಸಿದ್ದಾರೆ.
ಈ ಬಗ್ಗೆ ಶುಕ್ರವಾರ ನಗರದಲ್ಲಿ ಮಾಧ್ಯಮದೊಂದಿಗೆ ಮಾತನಾಡಿದ ಅವರು, “ಎಸ್ ಡಿ ಪಿ ಮತ್ತು ಪಿ ಎಫ್ ಐ ಸಂಘಟನೆ ರ್‍ಯಾಲಿಗೆ ಕರೆನೀಡಿದ್ದರು. ಆದರೆ ಪ್ರತಿಭಟನೆಗೆ ಅವಕಾಶ ಮಾತ್ರ ನೀಡಲಾಗಿದ್ದು ರ್ಯಾಲಿ ನಡೆಸಲು ಅವಕಾಶ ಇಲ್ಲ ಎಂದು ಆಯೋಜಕರಿಗೆ ಸ್ಪಷ್ಟವಾಗಿ ಹೇಳಿದ್ದೇವೆ. ಪ್ರತಿಭಟನೆ ಮಾಡುವ ಸಂದರ್ಭ ವೇಳೆ ಎಸ್ ಪಿ ಮನವಿ ಸ್ವೀಕರಿಸಬೇಕು ಎಂದು ಅವರು ಮನವಿ ಸಲ್ಲಿಸಿದ್ದಾರೆ” ಎಂದು ಹೇಳಿದರು.
“ಪ್ರತಿಭಟನೆಯಲ್ಲಿ ಭಾಗವಹಿಸುವ ಯಾರೂ ಕೂಡಾ ಕಾನೂನು ಉಲ್ಲಂಘಿಸುವಂತಿಲ್ಲ ಹಾಗೂ ಅತ್ಯಂತ ಶಾಂತಿಯುತವಾಗಿ ಪ್ರತಿಭಟನೆ ನಡೆಸುವುದರೊಂದಿಗೆ ಪೊಲೀಸ್ ಇಲಾಖೆಯ ಜೊತೆ ಸಹಕರಿಸುತ್ತಾರೆ ಎಂಬ ವಿಶ್ವಾಸ ಇದೆ” ಎಂದು ಶಶಿಕುಮಾರ್ ಹೇಳಿದ್ದಾರೆ.
ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…