Featured

ಮಂಗಳೂರು : ಎಸ್ ಸಿಡಿಸಿಸಿ ಬ್ಯಾಂಕ್ ನಲ್ಲಿ ಇನ್ನು ಮುಂದೆ ಯುಪಿಐ ಸೌಲಭ್ಯ  – vishwanews24

ಮಂಗಳೂರು : ಎಸ್ ಸಿಡಿಸಿಸಿ ಬ್ಯಾಂಕ್ ನಲ್ಲಿ ಇನ್ನು ಮುಂದೆ ಯುಪಿಐ ಸೌಲಭ್ಯ

ಮಂಗಳೂರು : ಎಸ್ ಸಿಡಿಸಿಸಿ ಬ್ಯಾಂಕ್ ನಲ್ಲಿ ಇನ್ನು ಮುಂದೆ ಯುಪಿಐ ಸೌಲಭ್ಯ ದೊರೆಯಲಿದ್ದು, ಇದರೊಂದಿಗೆ ಗೂಗಲ್ ಪೇ ಪೋನ್ ಪೇ ಯಲ್ಲೂ ಎಸ್ ಸಿಡಿಸಿಸಿ ಬ್ಯಾಂಕ್ ಅಕೌಂಟ್ ಲಿಂಕ್ ಮಾಡಿಕೊಂಡು ಯುಪಿಐ ಸೌಲಭ್ಯ ಪಡೆಯಬಹುದಾಗಿದೆ. ಎಸ್ ಸಿಡಿಸಿಸಿ ಬ್ಯಾಂಕ್ ನಿಂದ ಯುಪಿಐ, ಐಎಂಪಿಎಸ್‌ ಡಿಜಿಟಲ್ ಬ್ಯಾಂಕಿಂಗ್‌ ವಿಸ್ತರಿತ ಸೌಲಭ್ಯಕ್ಕೆ ಅಧಿಕೃತ ಚಾಲನೆ ದೊರೆಯಲಿದೆ.

ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕ್ (ಎಸ್ಸಿಡಿಸಿಸಿ ಬ್ಯಾಂಕ್) ಅತ್ಯಾಧುನಿಕ ತಂತ್ರಜ್ಞಾನದ ಬ್ಯಾಂಕಿಂಗ್‌ ಸೇವೆಗಳನ್ನು ಗ್ರಾಹಕರಿಗೆ ನೀಡುತ್ತಿದೆ. ಈ ನಿಟ್ಟಿನಲ್ಲಿ ಬ್ಯಾಂಕ್ ತಮ್ಮ ಗ್ರಾಹಕರಿಗೆ ಪ್ರಸಕ್ತ ಅವಶ್ಯಕತೆಗೆ ಅನುಗುಣವಾಗಿ ಡಿಜಿಟಲ್ ಬ್ಯಾಂಕಿಂಗ್ ಅನ್ನು ಕೂಡಾ ಅಳವಡಿಸಿಕೊಂಡಿದೆ .

ಇದನ್ನೂ ಓದಿ : 

ಡಿಜಿಟಲ್ ಬ್ಯಾಂಕಿಂಗ್‌ ಸೇವೆಗಳನ್ನು ಮತ್ತಷ್ಟು ವಿಸ್ತರಿಸುವ ಉದ್ದೇಶದಿಂದ ನಮ್ಮ ಬ್ಯಾಂಕ್ 2025ರ ಸೆ.16ರಿಂದ ಐಎಂಪಿಎಸ್‌ (IMPS – Immediate Payment Service) ಸೇವೆಯನ್ನು ಆರಂಭಿಸಿದೆ. ಬ್ಯಾಂಕ್ ಈಗಾಗಲೇ ಕೋರ್ ಬ್ಯಾಂಕಿಂಗ್ ಸೇವೆಯೊಂದಿಗೆ ಆರ್ ಟಿಜಿಎಸ್ / ನೆಫ್ಟ್, ಸಿಟಿಎಸ್, ಎಸ್‌ಎಂಎಸ್, ಎಟಿಎಂ, ಮೊಬೈಲ್ ಬ್ಯಾಂಕಿಂಗ್, ಪಿಒಎಸ್ (POS) ಸೌಲಭ್ಯ ಸೇರಿದಂತೆ ಹಲವಾರು ಡಿಜಿಟಲ್ ಸೇವೆಗಳನ್ನು ಯಶಸ್ವಿಯಾಗಿ ನೀಡುತ್ತಿದೆ. ಬ್ಯಾಂಕಿಂಗ್ ಕ್ಷೇತ್ರ ಇತ್ತೀಚಿನ ವರ್ಷಗಳಲ್ಲಿ ಪ್ರಮುಖ ಪರಿವರ್ತನೆಗೆ ಒಳಗಾಗಿದೆ, ಡಿಜಿಟಲ್ ಸೇವೆಗಳು ಸಾಂಪ್ರದಾಯಿಕ ಮಾದರಿಯನ್ನು ಬದಲಾಯಿಸಿವೆ. ಇಂದು, ಹೆಚ್ಚಿನ ಗ್ರಾಹಕರು ಇಂಟರ್ನೆಟ್ ಬ್ಯಾಂಕಿಂಗ್, ಮೊಬೈಲ್ ಅಪ್ಲಿಕೇಶನ್ಗಳು ಮತ್ತು ತ್ವರಿತ ಪಾವತಿ ವ್ಯವಸ್ಥೆಗಳ ಮೂಲಕ ತಮ್ಮ ಖಾತೆಗಳಿಗೆ ಸುಗಮ ಪ್ರವೇಶವನ್ನು ನಿರೀಕ್ಷಿಸುತ್ತಾರೆ. ಈ ನಿಟ್ಟಿನಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ತಮ್ಮ ಗ್ರಾಹಕರಿಗೆ ಪ್ರಸ್ತುತ ಅವಶ್ಯಕತೆಗೆ ಅನುಗುಣವಾಗಿ ಡಿಜಿಟಲ್ ಬ್ಯಾಂಕಿಂಗ್ ಅನ್ನು ಕೂಡಾ ಅಳವಡಿಸಿ ಕೊಂಡಿದೆ. ಡಿಜಿಟಲ್ ಬ್ಯಾಂಕಿಂಗ್ ಸೇವೆಗಳನ್ನು ಮತ್ತಷ್ಟು ವಿಸ್ತರಿಸುವ ಉದ್ದೇಶದಿಂದ  16 ಸೆಪ್ಟೆಂಬರ್ 2025 ರಿಂದ ಐಎಂಪಿಎಸ್ (IMPS – Immediate Payment Service) ಸೇವೆಯನ್ನು ಆರಂಭಿಸಿದೆ. ಈ ಸೇವೆಯ ಮೂಲಕ ಬ್ಯಾಂಕಿನ ಮೊಬೈಲ್ ಅಪ್ಲಿಕೇಶನ್ ಬಳಸಿ ಗ್ರಾಹಕರು ಕ್ಷಣಾರ್ಧದಲ್ಲಿ ಹಣ ವರ್ಗಾವಣೆ ಮಾಡುವ ಸೌಲಭ್ಯವನ್ನು ಪಡೆಯುತ್ತಿದ್ದಾರೆ. ಐಎಂಪಿಎಸ್ ಎಂಬುದು ನ್ಯಾಶನಲ್ ಪೇಮೆಂಟ್ಸ್ ಕಾರ್ಪೊರೇಷನ್ ಆಫ್‌ ಇಂಡಿಯಾ (NPCI) ಅಭಿವೃದ್ಧಿ ಪಡಿಸಿದ ತ್ವರಿತ ಹಣ ವರ್ಗಾವಣೆ ವ್ಯವಸ್ಥೆಯಾಗಿದ್ದು, ಇದು 24×7, ವಾರಾಂತ್ಯ ಮತ್ತು ಸಾರ್ವಜನಿಕ ರಜೆದಿನಗಳಲ್ಲಿಯೂ ಕಾರ್ಯನಿರ್ವಹಿಸುತ್ತದೆ. ಪರ್ಸ್ ನ್ ಟು ಅಕೌಂಟ್ (person to Account) ಮೂಲಕ ಖಾತೆ ಸಂಖ್ಯೆ ಮತ್ತು( IFSC )ಐಎಫ್ ಎಸ್ ಸಿ ಬಳಸಿ ಯಾವುದೇ ಬ್ಯಾಂಕ್ ಖಾತೆಗೆ ಹಣ ವರ್ಗಾವಣೆ ಮಾಡಬಹುದು .

ಇದನ್ನೂ ಓದಿ :

Vishwa News 24

Recent Posts

ತುಳುನಾಡಿನ ಸಾಂಪ್ರದಾಯಿಕ ಆಚರಣೆಗಳಲ್ಲಿ ಒಂದಾದ ಪ್ರೇತ ಮದುವೆ : ಸತ್ತು 25 ವರ್ಷ ಆದ್ಮೇಲೆ ಒಂದಾದ ಜೋಡಿ – vishwanews24

ತುಳುನಾಡಿನ ಸಾಂಪ್ರದಾಯಿಕ ಆಚರಣೆಗಳಲ್ಲಿ ಒಂದಾದ ಪ್ರೇತ ಮದುವೆ : ಸತ್ತು 25 ವರ್ಷ ಆದ್ಮೇಲೆ ಒಂದಾದ ಜೋಡಿ ತುಳುನಾಡಿನ ಸಾಂಪ್ರದಾಯಿಕ…

7 hours ago

ಮಂಗಳೂರಿಗೆ ಆಗಮಿಸಿದ ಬಾಲಿವುಡ್ ನಟ ಶಾರುಖ್ ಖಾನ್ – vishwanews24

ಮಂಗಳೂರಿಗೆ ಆಗಮಿಸಿದ ಬಾಲಿವುಡ್ ನಟ ಶಾರುಖ್ ಖಾನ್ ಮಂಗಳೂರು: ನಗರದಲ್ಲಿ ಆಯೋಜಿಸಲಾಗಿರುವ ಕಾರ್ಯಕ್ರಮದಲ್ಲಿ ಭಾಗವಹಿಸಲು ಬಾಲಿವುಡ್ ನಟ ಶಾರುಖ್ ಖಾನ್…

8 hours ago

ರಾಜ್ಯದ 13 ಸಚಿವರಿಗೆ ಜಿಲ್ಲಾ ಉಸ್ತುವಾರಿ ಹಂಚಿಕೆ: ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗಳ ಉಸ್ತುವಾರಿಯಾಗಿ ಯು.ಟಿ ಖಾದರ್ – vishwanews24

ರಾಜ್ಯದ 13 ಸಚಿವರಿಗೆ ಜಿಲ್ಲಾ ಉಸ್ತುವಾರಿ ಹಂಚಿಕೆ.. ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ ಮತ್ತು ಕೊಡಗು ಜಿಲ್ಲೆಗಳ ಉಸ್ತುವಾರಿಯಾಗಿ…

8 hours ago

ಪಠ್ಯಪುಸ್ತಕ ವಿವಾದದ ಬೆನ್ನಲ್ಲೇ NCERT ಸ್ಪಷ್ಟನೆ – vishwanews24

ಪಠ್ಯಪುಸ್ತಕ ವಿವಾದದ ಬೆನ್ನಲ್ಲೇ NCERT ಸ್ಪಷ್ಟನೆ ನವದೆಹಲಿ: 6ನೇ ತರಗತಿಯ ಕನ್ನಡ ಪಠ್ಯಪುಸ್ತಕ ‘ಕೃಷ್ಣ’ ಕುರಿತು ಎದ್ದಿರುವ ವಿವಾದಕ್ಕೆ NCERT(ರಾಷ್ಟ್ರೀಯ…

8 hours ago

ಮುಲ್ಕಿ : ಗಾಂಜಾ ಮಾರಾಟ ಹಾಗೂ ಸಾಗಾಟ ಮಾಡುತ್ತಿದ್ದ ಆರೋಪಿಯ ಬಂಧನ ; 4 ಕೆ.ಜಿ ಗಾಂಜಾ ವಶ – vishwanews24

ಮುಲ್ಕಿ : ಗಾಂಜಾ ಮಾರಾಟ ಹಾಗೂ ಸಾಗಾಟ ಮಾಡುತ್ತಿದ್ದ ಆರೋಪಿಯ ಬಂಧನ ; 4 ಕೆ.ಜಿ ಗಾಂಜಾ ವಶ ಮುಲ್ಕಿ:…

8 hours ago

ಎನ್‌ಸಿಇಆರ್‌ಟಿ ಬಿಡುಗಡೆ ಮಾಡಿದ ಕನ್ನಡ ಪಠ್ಯಪುಸ್ತಕಕ್ಕೆ ಮಧು ಬಂಗಾರಪ್ಪ ವಿರೋಧ – vishwanews24

ಎನ್‌ಸಿಇಆರ್‌ಟಿ ಬಿಡುಗಡೆ ಮಾಡಿದ ಕನ್ನಡ ಪಠ್ಯಪುಸ್ತಕಕ್ಕೆ ಮಧು ಬಂಗಾರಪ್ಪ ವಿರೋಧ ಬೆಂಗಳೂರು: 6ನೇ ತರಗತಿಗಾಗಿ ಎನ್‌ಸಿಇಆರ್‌ಟಿ (ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ…

9 hours ago