Featured

ಮಂಗಳೂರು: ಏಕ ಬಳಕೆಯ ಪ್ಲಾಸ್ಟಿಕ್ ನಿಷೇಧ ಕಟ್ಟುನಿಟ್ಟಾಗಿ ಜಾರಿಗೆ : ಜಿಲ್ಲಾಧಿಕಾರಿ ಸೂಚನೆ – Vishwanews24

ಮಂಗಳೂರು: ಏಕ ಬಳಕೆಯ ಪ್ಲಾಸ್ಟಿಕ್ ನಿಷೇಧ ಕಟ್ಟುನಿಟ್ಟಾಗಿ ಜಾರಿಗೆ : ಜಿಲ್ಲಾಧಿಕಾರಿ ಸೂಚನೆ

ಮಂಗಳೂರು: ಏಕ-ಬಳಕೆಯ ಪ್ಲಾಸ್ಟಿಕ್ ವಸ್ತುಗಳ ಬಳಕೆ ಮತ್ತು ಎಸೆಯುವಿಕೆ ನಿಷೇಧಕ್ಕೆ ಸಂಬಂಧಿಸಿದಂತೆ 2016ರಲ್ಲಿ ರಾಜ್ಯ ಸರಕಾರ ಹೊರಡಿಸಿದ ಅಧಿಸೂಚನೆ ಹಾಗೂ 2021ರ ಕೇಂದ್ರ ಸರಕಾರದ ಮಾರ್ಗಸೂಚಿಗಳನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸುವಂತೆ ಜಿಲ್ಲಾಧಿಕಾರಿ (ಡಿಸಿ) ಡಾ.ಕೆ.ವಿ.ರಾಜೇಂದ್ರ ಅವರು ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

ನಗರದ ಜಿಲ್ಲಾಧಿಕಾರಿಯವರ ಕಚೇರಿ ಸಭಾಂಗಣದಲ್ಲಿ ಈ ಕುರಿತು ಹಮ್ಮಿಕೊಂಡಿದ್ದ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಪ್ಲಾಸ್ಟಿಕ್ ತ್ಯಾಜ್ಯ ನಿರ್ವಹಣೆ ನಿಯಮಗಳು 2016ರಂತೆ ಪ್ಲಾಸ್ಟಿಕ್ ಧ್ವಜಗಳು, ಕ್ಯಾಂಡಿಸ್ಟಿಕ್‍ಗಳು, ಐಸ್‍ಕ್ರೀಮ್ ಸ್ಟಿಕ್‍ಗಳು, ಪ್ಲೇಟ್‍ಗಳು, ಕಪ್‍ಗಳು, ಚಮಚಗಳು, ಫೋರ್ಕ್‍ಗಳು, ಟ್ರೇಗಳು, ಸ್ವೀಟ್ ಬಾಕ್ಸ್, ಸಿಗರೇಟ್ ಪ್ಯಾಕ್‍ಗಳು ಸೇರಿದಂತೆ ಇತ್ಯಾದಿಗಳನ್ನು ಅವುಗಳ ತಯಾರಿಕೆ, ಆಮದು, ಸಂಗ್ರಹಣೆ, ವಿತರಣೆ, ಮಾರಾಟ ಹಾಗೂ ಬಳಕೆಯನ್ನು 2022ರ ಜುಲೈ 1 ರಿಂದ ಜಾರಿಗೆ ಬರುವಂತೆ ನಿಷೇಧಿಸಲಾಗಿದೆ ಎಂದು ತಿಳಿಸಿದರು.

ಇದನ್ನೂ ಓದಿ :ಉಡುಪಿ : ಅಂಗನವಾಡಿ ಕಾರ್ಯಕರ್ತೆ, ಸಹಾಯಕಿಯರ ಹುದ್ದೆಗೆ ಅರ್ಜಿ ಆಹ್ವಾನ – Vishwanews24 

ಜಿಲ್ಲೆಯ ಎಲ್ಲಾ ಗ್ರಾಮ ಪಂಚಾಯತ್‍ಗಳು ಹಾಗೂ ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ಪ್ಲಾಸ್ಟಿಕ್ ವಸ್ತುಗಳ ಬಳಕೆಯ ದುಷ್ಪರಿಣಾಮಗಳ ಕುರಿತು ಜಾಗೃತಿ ಮೂಡಿಸುವ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಬೇಕು ಹಾಗೂ ನಿಷೇಧಿತ ವಸ್ತುಗಳು ಕಂಡುಬಂದರೆ ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ನಗರ ಸ್ಥಳೀಯ ಸಂಸ್ಥೆಗಳ ಅಧಿಕಾರಿಗಳು ಹಾಗೂ ಗ್ರಾಮ ಪಂಚಾಯತ್ ಅಧಿಕಾರಿಗಳಿಗೆ ಸೂಚಿಸಿದರು.

ಶಾಸಕರಾದ ವೇದವ್ಯಾಸ್ ಕಾಮತ್ ಹಾಗೂ ಡಾ.ಭರತ್ ಶೆಟ್ಟಿ ಮಾತನಾಡಿದರು. ಮೇಯರ್ ಪ್ರೇಮಾನಂದ ಶೆಟ್ಟಿ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಡಾ.ಕುಮಾರ್, ಮಂಗಳೂರು ಮಹಾನಗರ ಪಾಲಿಕೆಯ ಆಯುಕ್ತ ಅಕ್ಷಯ್ ಶ್ರೀಧರ್, ಪರಿಸರ ಇಲಾಖೆ ಅಧಿಕಾರಿ ಕೀರ್ತಿ ಕುಮಾರ್, ಸೇರಿದಂತೆ ಸಂಬಂಧಿಸಿದ ಅಧಿಕಾರಿಗಳು, ಮಾರಾಟಗಾರರಾದ ಸಂದೀಪ್ ಶೆಣೈ, ವಚನ್ ಶೆಟ್ಟಿ ಹಾಗೂ ಇತರರು ಸಭೆಯಲ್ಲಿದ್ದರು.

Vishwa News 24

Recent Posts

ಮಂಗಳೂರು: ರಾಷ್ಟ್ರೀಯ ಹೆದ್ದಾರಿಗಳಲ್ಲಿ ಅಕ್ರಮ ಚಟುವಟಿಕೆ ನಿಯಂತ್ರಣಕ್ಕೆ ಜಿಲ್ಲಾಧಿಕಾರಿ ಸೂಚನೆ – vishwanews24

ಮಂಗಳೂರು: ರಾಷ್ಟ್ರೀಯ ಹೆದ್ದಾರಿಗಳಲ್ಲಿ ಅಕ್ರಮ ಚಟುವಟಿಕೆ ನಿಯಂತ್ರಣಕ್ಕೆ ಜಿಲ್ಲಾಧಿಕಾರಿ ಸೂಚನೆ ಮಂಗಳೂರು: ರಾತ್ರಿ ವೇಳೆ ರಾಷ್ಟ್ರೀಯ ಹೆದ್ದಾರಿಗಳಲ್ಲಿ ಮಂಗಳಮುಖಿಯರು ಅಕ್ರಮ…

11 hours ago

ಉಡುಪಿ ನಗರಸಭೆ ಬಾಕಿ ಕಾಮಗಾರಿ ಶೀಘ್ರ ಆರಂಭಕ್ಕೆ ಜಿಲ್ಲಾಧಿಕಾರಿಗೆ ಬಿಜೆಪಿ ಮನವಿ – vishwanews24

ಉಡುಪಿ ನಗರಸಭೆಯ ಕಾಮಗಾರಿಗಳಿಗೆ ಚುರುಕು ಮುಟ್ಟಿಸಲು ಜಿಲ್ಲಾಧಿಕಾರಿಗೆ ಬಿಜೆಪಿ ಮನವಿ ಉಡುಪಿ: ಉಡುಪಿ ನಗರಸಭೆಯಲ್ಲಿ ಬಾಕಿ ಉಳಿದಿರುವ ಕಾಮಗಾರಿಗಳನ್ನು ತಕ್ಷಣ…

11 hours ago

ಬಂಟ್ವಾಳ: ಮಾದಕ ದ್ರವ್ಯ ಮಾರಾಟ ಶಂಕೆ; ಓರ್ವನ ಬಂಧನ – vishwanews24

ಬಂಟ್ವಾಳ: ಮಾದಕ ದ್ರವ್ಯ ಮಾರಾಟ ಶಂಕೆ; ಓರ್ವನ ಬಂಧನ, 1.93 ಲಕ್ಷ ರೂ. ಮೌಲ್ಯದ ಸೊತ್ತು ವಶ ಬಂಟ್ವಾಳ: ಮಾದಕ…

11 hours ago

ಮಂಡ್ಯ : ಅನಾರೋಗ್ಯದಿಂದ ಎಎಸ್‌ಪಿ ಸಿ.ಇ. ತಿಮ್ಮಯ್ಯ ನಿಧನ – vishwanews24

ಮಂಡ್ಯ : ಅನಾರೋಗ್ಯದಿಂದ ಎಎಸ್‌ಪಿ ಸಿ.ಇ. ತಿಮ್ಮಯ್ಯ ನಿಧನ ಮಂಡ್ಯ: ಅನಾರೋಗ್ಯದಿಂದ ಜಿಲ್ಲಾ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಸಿ.ಇ.ತಿಮ್ಮಯ್ಯ (57)…

11 hours ago

ಕಾಪು : ಇಂದು ಸಂಜೆ ಉಚ್ಚಿಲ ದಸರಾದ ದೀಪಾಲಂಕಾರ ಉದ್ಘಾಟನೆ – vishwanews24

ಕಾಪು : ಇಂದು ಸಂಜೆ ಉಚ್ಚಿಲ ದಸರಾದ ದೀಪಾಲಂಕಾರ ಉದ್ಘಾಟನೆ ಕಾಪು: ದ.ಕ. ಮೊಗವೀರ ಮಹಾಜನ ಸಂಘದ ಆಡಳಿತಕ್ಕೊಳಪಟ್ಟಿರುವ ಶ್ರೀ…

12 hours ago

ನೋಯ್ಡಾ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ‘ನರೇಂದ್ರ ಮೋದಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ’ ಎಂದು ಮರುನಾಮಕರಣ: ಯೋಗಿ ಆದಿತ್ಯನಾಥ್ ಘೋಷಣೆ – vishwanews24

ನೊಯ್ಡಾ ವಿಮಾನ ನಿಲ್ದಾಣಕ್ಕೆ ನರೇಂದ್ರ ಮೋದಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಎಂದು ಮರುನಾಮಕರಣ ನವದೆಹಲಿ: ಉತ್ತರ ಪ್ರದೇಶದ ಜೆವಾರ್‌ನಲ್ಲಿರುವ ನೋಯ್ಡಾ…

1 day ago