ಮಂಗಳೂರು: ಏಕ-ಬಳಕೆಯ ಪ್ಲಾಸ್ಟಿಕ್ ವಸ್ತುಗಳ ಬಳಕೆ ಮತ್ತು ಎಸೆಯುವಿಕೆ ನಿಷೇಧಕ್ಕೆ ಸಂಬಂಧಿಸಿದಂತೆ 2016ರಲ್ಲಿ ರಾಜ್ಯ ಸರಕಾರ ಹೊರಡಿಸಿದ ಅಧಿಸೂಚನೆ ಹಾಗೂ 2021ರ ಕೇಂದ್ರ ಸರಕಾರದ ಮಾರ್ಗಸೂಚಿಗಳನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸುವಂತೆ ಜಿಲ್ಲಾಧಿಕಾರಿ (ಡಿಸಿ) ಡಾ.ಕೆ.ವಿ.ರಾಜೇಂದ್ರ ಅವರು ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.
ನಗರದ ಜಿಲ್ಲಾಧಿಕಾರಿಯವರ ಕಚೇರಿ ಸಭಾಂಗಣದಲ್ಲಿ ಈ ಕುರಿತು ಹಮ್ಮಿಕೊಂಡಿದ್ದ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಪ್ಲಾಸ್ಟಿಕ್ ತ್ಯಾಜ್ಯ ನಿರ್ವಹಣೆ ನಿಯಮಗಳು 2016ರಂತೆ ಪ್ಲಾಸ್ಟಿಕ್ ಧ್ವಜಗಳು, ಕ್ಯಾಂಡಿಸ್ಟಿಕ್‍ಗಳು, ಐಸ್‍ಕ್ರೀಮ್ ಸ್ಟಿಕ್‍ಗಳು, ಪ್ಲೇಟ್‍ಗಳು, ಕಪ್‍ಗಳು, ಚಮಚಗಳು, ಫೋರ್ಕ್‍ಗಳು, ಟ್ರೇಗಳು, ಸ್ವೀಟ್ ಬಾಕ್ಸ್, ಸಿಗರೇಟ್ ಪ್ಯಾಕ್‍ಗಳು ಸೇರಿದಂತೆ ಇತ್ಯಾದಿಗಳನ್ನು ಅವುಗಳ ತಯಾರಿಕೆ, ಆಮದು, ಸಂಗ್ರಹಣೆ, ವಿತರಣೆ, ಮಾರಾಟ ಹಾಗೂ ಬಳಕೆಯನ್ನು 2022ರ ಜುಲೈ 1 ರಿಂದ ಜಾರಿಗೆ ಬರುವಂತೆ ನಿಷೇಧಿಸಲಾಗಿದೆ ಎಂದು ತಿಳಿಸಿದರು.
ಇದನ್ನೂ ಓದಿ :ಉಡುಪಿ : ಅಂಗನವಾಡಿ ಕಾರ್ಯಕರ್ತೆ, ಸಹಾಯಕಿಯರ ಹುದ್ದೆಗೆ ಅರ್ಜಿ ಆಹ್ವಾನ – Vishwanews24
ಜಿಲ್ಲೆಯ ಎಲ್ಲಾ ಗ್ರಾಮ ಪಂಚಾಯತ್‍ಗಳು ಹಾಗೂ ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ಪ್ಲಾಸ್ಟಿಕ್ ವಸ್ತುಗಳ ಬಳಕೆಯ ದುಷ್ಪರಿಣಾಮಗಳ ಕುರಿತು ಜಾಗೃತಿ ಮೂಡಿಸುವ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಬೇಕು ಹಾಗೂ ನಿಷೇಧಿತ ವಸ್ತುಗಳು ಕಂಡುಬಂದರೆ ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ನಗರ ಸ್ಥಳೀಯ ಸಂಸ್ಥೆಗಳ ಅಧಿಕಾರಿಗಳು ಹಾಗೂ ಗ್ರಾಮ ಪಂಚಾಯತ್ ಅಧಿಕಾರಿಗಳಿಗೆ ಸೂಚಿಸಿದರು.
ಶಾಸಕರಾದ ವೇದವ್ಯಾಸ್ ಕಾಮತ್ ಹಾಗೂ ಡಾ.ಭರತ್ ಶೆಟ್ಟಿ ಮಾತನಾಡಿದರು. ಮೇಯರ್ ಪ್ರೇಮಾನಂದ ಶೆಟ್ಟಿ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಡಾ.ಕುಮಾರ್, ಮಂಗಳೂರು ಮಹಾನಗರ ಪಾಲಿಕೆಯ ಆಯುಕ್ತ ಅಕ್ಷಯ್ ಶ್ರೀಧರ್, ಪರಿಸರ ಇಲಾಖೆ ಅಧಿಕಾರಿ ಕೀರ್ತಿ ಕುಮಾರ್, ಸೇರಿದಂತೆ ಸಂಬಂಧಿಸಿದ ಅಧಿಕಾರಿಗಳು, ಮಾರಾಟಗಾರರಾದ ಸಂದೀಪ್ ಶೆಣೈ, ವಚನ್ ಶೆಟ್ಟಿ ಹಾಗೂ ಇತರರು ಸಭೆಯಲ್ಲಿದ್ದರು.
ಅರೆಂಜ್ ಅಲರ್ಟ್ ಹಿನ್ನೆಲೆ : ದ.ಕ ಜಿಲ್ಲೆಯಲ್ಲಿ ನಾಳೆ ( ಜು.3) ಶಾಲಾ ಕಾಲೇಜಿಗೆ ರಜೆ ಘೋಷಣೆ ಮಂಗಳೂರು :…
ಜುಲೈ ತಿಂಗಳಲ್ಲಿ ಮೀಟರ್ ರೀಡಿಂಗ್ ಇರುವುದಿಲ್ಲ: ಬೆಸ್ಕಾಂ ಕಳೆದ 3 ತಿಂಗಳ ಸರಾಸರಿ ವಿದ್ಯುತ್ ಬಳಕೆಯ ಆಧಾರದ ಮೇಲೆ ಜುಲೈ…
ಶಿರ್ವ : ಕಾರಿಗೆ ಡೀಸೆಲ್ ತುಂಬಿಸಿಕೊಂಡು ಹಣ ಪಾವತಿಸದೆ ಪರಾರಿ ; ಮೂವರು ಆರೋಪಿಗಳ ಬಂಧನ ಉಡುಪಿ: ಕಾರಿಗೆ ಫುಲ್…
ಬಿಜೆಪಿ ರೈತ ಮೋರ್ಚಾ ರಾಜ್ಯ ಪ್ರಧಾನ ಕಾರ್ಯದರ್ಶಿ ಸತೀಶ್ ಕಡತನಮಲೆ 6 ವರ್ಷ ಪಕ್ಷದಿಂದ ಉಚ್ಛಾಟನೆ ಬೆಂಗಳೂರು: ರಾಜ್ಯ ರೈತ…
ಕ್ವಾರಿ ದುರಂತ : ಅಧಿಕೃತ ವರದಿ ಪಡೆದ ಬಳಿಕ ಅಗತ್ಯ ಕ್ರಮಗಳ ಬಗ್ಗೆ ತೀರ್ಮಾನ: ಸಿಎಂ ಡಿ.ಕೆ.ಶಿವಕುಮಾರ್ ಬೆಂಗಳೂರು: “ಮಾಗಡಿ…
ಅಬುಧಾಬಿಯಲ್ಲಿ ಲೋಕೋ ಪೈಲಟ್ ಆಗಿ ಕೊಡಗಿನ ರಿಯಾಝ್ ಮಡಿಕೇರಿ : ಯುನೈಟೆಡ್ ಅರಬ್ ಎಮಿರೇಟ್ಸ್‌ನಲ್ಲಿ ಆರಂಭವಾದ 'ಇತ್ತಿಹಾದ್' ರೈಲು ಸೇವೆಯ…