ಮಂಗಳೂರು: ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಅನಾಮಿಕ ವ್ಯಕ್ತಿಯೊಬ್ಬ ಕರೆ ಮಾಡಿ ಬಾಂಬ್ ಇಟ್ಟಿರುವುದಾಗಿ ಬೆದರಿಕೆ ಒಡ್ಡಿರುವ ಘಟನೆ ಇಂದು ನಡೆದಿದೆ.
ಮಂಗಳೂರಿನ ಬಜಪೆ ಬಳಿಯ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಮಧ್ಯಾಹ್ನದ ಸುಮಾರಿಗೆ ಅನಾಮಿಕ ವ್ಯಕ್ತಿಯೊಬ್ಬ ಏರ್ ಪೋರ್ಟ್ ಗೆ ಕರೆ ಮಾಡಿ ಬಾಂಬ್ ಇಟ್ಟಿರುವುದಾಗಿ ಬೆದರಿಕೆ ಹಾಕಿದ್ದ , ಈ ಹಿನ್ನಲೆ ಸಿಐಎಸ್ ಎಫ್ ಸಿಬ್ಬಂದಿ ಹಾಗೂ ಪೊಲೀಸರು ಸಂಪೂರ್ಣ ಏರ್ ಪೋರ್ಟ್ ನ್ನು ತಪಾಸಣೆ ನಡೆಸಿದ್ದು, ಯಾವುದೇ ಬಾಂಬ್ ಪತ್ತೆಯಾಗಿಲ್ಲ. ನಂತರ ಯಾರೋ ಕಿಡಿಗೇಡಿಗಳ ಹುಸಿಬಾಂಬ್ ಕರೆ ಇದಾಗಿದ್ದು ಎಂದು ತಿಳಿದು ಬಂದಿದೆ. ಈ ಘಟನೆ ಕುರಿತಂತೆ ಬಜಪೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕಳೆದ ಜನವರಿಯಲ್ಲಿ ಆದಿತ್ಯರಾವ್ ಎಂಬಾತ ಮಂಗಳೂರು ವಿಮಾನ ನಿಲ್ದಾಣದಲ್ಲಿ ಸಜೀವ ಬಾಂಬ್ ಇಟ್ಟಿದ್ದು, ಇಡೀ ದೇಶದ ಗಮನ ಸೆಳೆದಿತ್ತು. ತಪಾಸಣೆ ವೇಳೆ ಪತ್ತೆಯಾದ ಈ ಬಾಂಬ್ ನ್ನು ನಿಷ್ಕ್ರೀಯಗೊಳಿಸಲಾಗಿತ್ತು.
ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್‌ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…
ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…
ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…
ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…
ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…
ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…