ಮಂಗಳೂರು: ಅಕ್ರಮವಾಗಿ ಚಿನ್ನ ಸಾಗಾಟ ಮಾಡುತ್ತಿದ್ದ ಇಬ್ಬರು ಪ್ರಯಾಣಿಕರನ್ನು ಮಂಗಳೂರು ಏರ್ ಕಸ್ಟಮ್ಸ್ ಅಧಿಕಾರಿಗಳು ಬಂಧಿಸಿದ್ದಾರೆ.
ದುಬೈನಿಂದ ಬಂದ ಸ್ಪೈಸ್ ಜೆಟ್ ಹಾಗೂ ಏರ್ ಇಂಡಿಯಾ ವಿಮಾನದಿಂದ ಇಳಿದು ಬಂದ ಕಾಸರಗೋಡು ನಿವಾಸಿ ಸುಕ್ಕುರ್ ಮೊಯಿದ್ದೀನ್ ಕುನ್ಹಿ (48) ಹಾಗೂ ಭಟ್ಕಳದ ಮಿಸ್ರಿ ನಸೀಮುಲ್ ಗನಿ (44) ಎಂಬವರು ವಿಶೇಷವಾಗಿ ವಿನ್ಯಾಸದ ಪಾದರಕ್ಷೆಯ ಒಳಗೆ ಚಿನ್ನವನ್ನಿಟ್ಟು ಸಾಗಾಟ ಮಾಡುತ್ತಿದ್ದರು.
ಆರೋಪಿಗಳಿಂದ 18.75 ಲಕ್ಷ ರೂ ಮೌಲ್ಯದ 405 ಗ್ರಾಂ ಚಿನ್ನವನ್ನು ವಶಪಡಿಸಿಕೊಳ್ಳಲಾಗಿದ್ದು, ತನಿಖೆ ಪ್ರಗತಿಯಲ್ಲಿದೆ.
ಕಾರ್ಯಾಚರಣೆಯಲ್ಲಿ ಕಸ್ಟಮ್ಸ್ ವಿಭಾಗದ ಅಧಿಕಾರಿಗಳಾದ ಡಾ. ಕಪಿಲ್ ಗಡೆ, ರಾಕೇಶ್ ಕುಮಾರ್, ಸಂದೀಪ್ ಎಂ.ಎಸ್, ಚಂದ್ರಮೋಹನ್ ಮೀನಾ ಪಾಲ್ಗೊಂಡಿದ್ದರು
ಅ.15ರಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ದ.ಕ. ಮತ್ತು ಉಡುಪಿ ಪ್ರವಾಸ ಮಂಗಳೂರು ಉಚ್ಚಿಲ ದಸರಾ ನವರಾತ್ರಿ ಮಹೋತ್ಸವ ದಲ್ಲಿ ಭಾಗಿ…
ಉಡುಪಿ ಉಚ್ಚಿಲ ದಸರಾ -2026 ರಾಜ್ಯ ಮಟ್ಟದ ನೃತ್ಯ ಸ್ಪರ್ಧೆ ; ಟ್ರೋಫಿ ಗೆದ್ದುಕೊಂಡ ಉಡುಪಿಯ ಎಕ್ಸ್ಟ್ರಿಮ್ ಡ್ಯಾನ್ಸ್ ಅಕಾಡೆಮಿ…
ಉಡುಪಿ: ‘ಭಾರತ್ ಮಾತಾ ಕೀ ಜೈ’ ಘೋಷಣೆ ಕೂಗಿದ ವಿದ್ಯಾರ್ಥಿಗಳ ಮೇಲೆ ಹಲ್ಲೆ ಆರೋಪ; ಪೊಲೀಸ್ ಅಧಿಕಾರಿಯ ವಿರುದ್ಧ ಕಠಿಣ…
ದಸರಾ ರಜೆ ವೇಳೆ ಪರೀಕ್ಷೆ ವಿವಾದ: ಅ.19 ಮತ್ತು 22ರ ಪರೀಕ್ಷೆ ಮುಂದೂಡಿದ ಸೈಂಟ್ ಆಗ್ನೆಸ್ ಕಾಲೇಜು ಮಂಗಳೂರು: ದಸರಾ…
`ಬ್ರೇಕಿಂಗ್ ಬ್ಯಾಡ್' ಖ್ಯಾತಿಯ ಹಾಲಿವುಡ್ ನಟ ಆರ್ಜೆ ಮಿಟ್ಟೆ ನಿಧನ ಅಮೆರಿಕದ ಜನಪ್ರಿಯ ಟಿವಿ ಸರಣಿ `ಬ್ರೇಕಿಂಗ್ ಬ್ಯಾಡ್’ನಲ್ಲಿ ವಾಲ್ಟರ್…
ಮಂಗಳೂರಿನಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಅಧಿಕಾರಿಗಳ ಸಮಿತಿ ರಚನೆ: ಸಚಿವ ಯು.ಟಿ. ಖಾದರ್ ಮಂಗಳೂರು: ಮಂಗಳೂರಿನಲ್ಲಿ ಹೈಕೋರ್ಟ್ ಪೀಠ ಸ್ಥಾಪನೆ…