ಮಂಗಳೂರು ಏರ್ ಪೋರ್ಟ್ ವಿಶ್ವದಲ್ಲೇ ಅತ್ಯುತ್ತಮ ವಿಮಾನ ನಿಲ್ದಾಣ -Vishwanews24

ಮಂಗಳೂರು:ಏರ್‌ಪೋರ್ಟ್ಸ್‌ ಕೌನ್ಸಿಲ್‌ ಇಂಟರ್‌ನ್ಯಾಷನಲ್‌ (ಎಸಿಐ) ನಡೆಸಿದ ಸಮೀಕ್ಷೆಯಲ್ಲಿ ಬಜ್ಪೆಯ ಮಂಗಳೂರು ಅಂತರರಾಷ್ಟ್ರೀಯ ವಿಮಾನ ನಿಲ್ದಾಣವು ಜಗತ್ತಿನ ಅತ್ಯುತ್ತಮ ವಿಮಾನ ನಿಲ್ದಾಣ ಸ್ಥಾನವನ್ನು ಮುಡಿಗೇರಿಸಿಕೊಂಡಿದೆ.

ಮಂಗಳೂರು, ಚಂಢೀಗಡ, ತಿರುವನಂತಪುರ, ಹಾಗೂ ಲಕ್ನೋ ವಿಮಾನ ನಿಲ್ದಾಣಗಳು ವಿಶ್ವದ ಅತ್ಯುತ್ತಮ ನಿಲ್ದಾಣ ಪ್ರಶಸ್ತ್ರಿಗೆ ಪಾತ್ರವಾಗಿದೆ. ಎಸಿಐ ನಡೆಸಿದ ಏರ್‌ಪೋರ್ಟ್‌ ಸರ್ವಿಸ್‌ ಕ್ವಾಲಿಟಿ (ಎಎಸ್‌ಕ್ಯೂ) ಸಮೀಕ್ಷೆಯಲ್ಲಿಈ ನಾಲ್ಕು ವಿಮಾನ ನಿಲ್ದಾಣಗಳು ಜಗತ್ತಿನ ಅತ್ಯುತ್ತಮ ವಿಮಾನ ನಿಲ್ದಾಣಗಳೆಂಬ ರೇಟಿಂಗ್‌ ಪಡೆದಿವೆ.

ಈ ನಾಲ್ಕು ವಿಮಾನ ನಿಲ್ದಾಣಗಳೌ ಒಟ್ಟು ಹತ್ತು ವಿಭಾಗಗಳಲ್ಲಿ ಪ್ರಯಾಣಿಕರಿಗೆ ನೀಡಿದ ಉತ್ಕೃಷ್ಟ ಸೇವೆ , ವಿಶ್ವ ಗುಣಮಟ್ಟದ ಸೌಲಭ್ಯಗಳಿಗಾಗಿ ಈ ಪುರಸ್ಕಾರ ಪಡೆದುಕೊಂಡಿದೆ. ಜಗತ್ತಿನಾದ್ಯಂತ 356 ವಿಮಾನ ನಿಲ್ದಾಣಗಳು 2019ರಲ್ಲಿ ನಡೆದ ಈ ಸಮೀಕ್ಷೆಯ ಭಾಗವಾಗಿದ್ದವು ಎಂದು ಪ್ರಾಧಿಕಾರ ಮಾಹಿತಿ ನೀಡಿದೆ. ಸರ್ವೇ ತಂಡವು ವಿಮಾನ ನಿಲ್ದಾಣಗಳಿಗೆ ಆಗಮಿಸಿದ ಪ್ರಯಾಣಿಕರು ವ್ಯಕ್ತಪಡಿಸುವ ಅಭಿಪ್ರಾಯ ಹಾಗೂ ಪ್ರಯಾಣಿಕರ ಸೇವಾ ಸಂತೃಪ್ತಿಯನ್ನು ಆಧರಿಸಿ ಎಎಸ್ ಕ್ಯೂ ಅಂಕ ನೀಡಲಾಗುತ್ತದೆ.

ಮಂಗಳೂರು ವಿಮಾನ ನಿಲ್ದಾಣದಲ್ಲಿ ಪ್ರಯಾಣಿಕರ ಬಳಕೆಗಾಗಿ ಎರಡು ಹೊಸ ಕಟ್ಟಡಗಳನ್ನು ನಿರ್ಮಿಸಲಾಗಿದೆ. ಟರ್ಮಿನಲ್‌ ಕಟ್ಟಡವನ್ನು ಮೇಲ್ದರ್ಜೆಗೇರಿಸಲಾಗಿದೆ. ತಂತ್ರಾಂಶ ಆಧಾರಿತ ಕ್ಯಾಬ್‌ ಸೌಲಭ್ಯ ಕಲ್ಪಿಸಲಾಗಿದೆ. ಪ್ರಯಾಣಿಕರ ಆಗಮನ ಹಾಗೂ ವಿದೇಶಿ ಪ್ರಯಾಣಿಕರ ನಿರ್ಗಮನ ದ್ವಾರಗಳಲ್ಲಿ ಎಲೆಕ್ಟ್ರಾನಿಕ್‌ ಸ್ವಯಂಚಾಲಿಕ ನಿಯಂತ್ರಣ ವ್ಯವಸ್ಥೆ ಹಾಗೂ ಇ– ಗೇಟ್‌ಗಳನ್ನು ಅಳವಡಿಸಲಾಗಿದೆ. 500 ಹೊಸ ಟ್ರಾಲಿಗಳನ್ನು ಒದಗಿಸಲಾಗಿದೆ. ಎಟಿಎಂ ಕೇಂದ್ರಗಳನ್ನು ತೆರೆಯಲಾಗಿದೆ. ಇವೆಲ್ಲವೂ ರ‍್ಯಾಂಕಿಂಗ್‌ನಲ್ಲಿ ಮೇಲಕ್ಕೇರಲು ಕಾರಣ ಎಂದು ಪ್ರಾಧಿಕಾರ ತಿಳಿಸಿದೆ.

ಮಂಗಳೂರು ವಿಮಾನ ನಿಲ್ದಾಣದಲ್ಲಿ ನಗದುರಹಿತ ವಹಿವಾಟಿಗೆ ಆದ್ಯತೆ ನೀಡಲಾಗಿದೆ. ಪರಿಸರ ಸ್ನೇಹಿ ನಿಲ್ದಾಣವನ್ನಾಗಿ ಬದಲಾಯಿಸಲಾಗಿದೆ. ಸ್ಥಳೀಯ ಕಲೆ ಮತ್ತು ಸಂಸ್ಕೃತಿಯನ್ನು ಪ್ರತಿಬಿಂಬಿಸುವ ಕಲಾಕೃತಿಗಳನ್ನು ಪ್ರದರ್ಶಿಸಿರುವುದರಿಂದ ಪ್ರಯಾಣಿಕರು ಇದನ್ನು ಮೆಚ್ಚಿಕೊಂಡಿದ್ದು ಈ ಸ್ಥಾನ ದೊರಕಲು ಕಾರಣ’ ಎಂದು ಪ್ರಾಧಿಕಾರದ ಕಾರ್ಪೋರೇಟ್‌ ಸಂವಹನ ವಿಭಾಗದ ಪ್ರಕಟಣೆ ತಿಳಿಸಿದೆ.

Vishwa News 24

Recent Posts

ಮಂಗಳೂರು : ಅ.2ರಂದು ಜಿಲ್ಲಾ ಯುವ ಕಾಂಗ್ರೆಸ್‌ನಿಂದ ‘ಸದ್ಭಾವನಾ ನಡಿಗೆ’ -vishwanews24

ಮಂಗಳೂರು : ಅ.2ರಂದು ಜಿಲ್ಲಾ ಯುವ ಕಾಂಗ್ರೆಸ್‌ನಿಂದ ‘ಸದ್ಭಾವನಾ ನಡಿಗೆ’ ಮಂಗಳೂರು: ಗಾಂಧಿ ಜಯಂತಿ ಪ್ರಯುಕ್ತ ದ.ಕ.ಜಿಲ್ಲಾ ಯುವ ಕಾಂಗ್ರೆಸ್…

2 hours ago

ಕಾಪು : ಶಂಕರಪುರ ದ್ವಾರಕಾಮಾಯಿ ಮಠದಲ್ಲಿ ‘ಪಂಚಾಶತ್ ಜನ್ಮ ವೈಭವ’ -vishwanews24

ಶಂಕರಪುರ ದ್ವಾರಕಾಮಾಯಿ ಮಠದಲ್ಲಿ ‘ಪಂಚಾಶತ್ ಜನ್ಮ ವೈಭವ’ ಅ.3ರಿಂದ ಧಾರ್ಮಿಕ ಕಾರ್ಯಕ್ರಮಗಳ ಚಾಲನೆ.. ವರ್ಷಪೂರ್ತಿ ಗೋಸೇವೆ, ಅನ್ನದಾನ, ಆರೋಗ್ಯ–ಶಿಕ್ಷಣ ಸೇವೆ…

2 hours ago

ಸೌಜನ್ಯಾ ಪ್ರಕರಣದ ಮರುತನಿಖೆ: ಮಂಗಳೂರಿಗೆ ಆಗಮಿಸಿದ ನೂತನ ಎಸ್ಐಟಿ ತಂಡ  -vishwanews24

ಸೌಜನ್ಯಾ ಪ್ರಕರಣದ ಮರುತನಿಖೆ: ಮಂಗಳೂರಿಗೆ ಆಗಮಿಸಿದ ನೂತನ ಎಸ್ಐಟಿ ತಂಡ  ಮಂಗಳೂರು : ಸೌಜನ್ಯಾ ಅತ್ಯಾಚಾರ, ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ…

3 hours ago

ಪರಪ್ಪನ ಆಗ್ರಹಾರ ಕಾರಾಗೃಹದಲ್ಲಿ ಮತ್ತೆ ಮೊಬೈಲ್ ಫೋನ್, ಸಿಮ್ಕಾರ್ಡ್ ಗಳು ಪತ್ತೆ -vishwanews24

ಪರಪ್ಪನ ಆಗ್ರಹಾರ ಕಾರಾಗೃಹದಲ್ಲಿ ಮತ್ತೆ ಮೊಬೈಲ್ ಫೋನ್, ಸಿಮ್ಕಾರ್ಡ್ ಗಳು ಪತ್ತೆ ಬೆಂಗಳೂರು: ಪರಪ್ಪನ ಆಗ್ರಹಾರ ಕೇಂದ್ರ ಕಾರಾಗೃಹದಲ್ಲಿ ಮೊಬೈಲ್…

5 hours ago

ಎಂಆರ್‌ಪಿಎಲ್ ಕಾರ್ಮಿಕರ ಮುಷ್ಕರ: ಮೃತ ಮನೀಶ್ ಕಾರ್ಕಡಗೆ ಶ್ರದ್ಧಾಂಜಲಿ, ಪರಿಹಾರಕ್ಕೆ ಆಗ್ರಹ -vishwanews24

ಎಂಆರ್‌ಪಿಎಲ್ ಕಾರ್ಮಿಕರ ಮುಷ್ಕರ: ಮೃತ ಮನೀಶ್ ಕಾರ್ಕಡಗೆ ಶ್ರದ್ಧಾಂಜಲಿ, ಪರಿಹಾರಕ್ಕೆ ಆಗ್ರಹ ಮಂಗಳೂರು: ಎಂಆರ್‌ಪಿಎಲ್‌ನಲ್ಲಿ ನಿನ್ನೆ (ಸೆ.30ರ ಬುಧವಾರ) ನಡೆದ…

5 hours ago

ಎಂಆರ್‌ಪಿಎಲ್‌ ಸ್ಫೋಟ ಪ್ರಕರಣ: ಮೃತರ ಕುಟುಂಬಕ್ಕೆ ಗರಿಷ್ಠ ಪರಿಹಾರ : ಭರತ್‌ ಶೆಟ್ಟಿ ಆಗ್ರಹ -vishwanews24

ಎಂಆರ್‌ಪಿಎಲ್‌ ಸ್ಫೋಟ ಪ್ರಕರಣ: ಮೃತರ ಕುಟುಂಬಕ್ಕೆ ಗರಿಷ್ಠ ಪರಿಹಾರ : ಭರತ್‌ ಶೆಟ್ಟಿ ಆಗ್ರಹ ಮಂಗಳೂರು: ಸ್ಫೋಟದ ನಿಖರ ಕಾರಣ…

5 hours ago