ಮಂಗಳೂರು: ಇದೇ ಏ.22ರಿಂದ ಮೇ.18ರ ವರೆಗೆ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ ನಡೆಯುತ್ತಿದ್ದು, ಈ ಸಂದರ್ಭದಲ್ಲಿ ಯಾವುದೇ ರೀತಿಯ ಅಹಿತಕರ ಘಟನೆ ಹಾಗೂ ಅನುಮಾಗಳಿಗೆ ಆಸ್ಪದವಿಲ್ಲದೇ ಪರೀಕ್ಷೆಯನ್ನು ಸುಲಲಿತವಾಗಿ ನಡೆಸಲು ಮಂಗಳೂರು ನಗರ ಪೊಲೀಸ್ ಕಮೀಷನರೇಟ್ ಘಟಕದ ವ್ಯಾಪ್ತಿಯಲ್ಲಿರುವ ಸಂಬಂಧಿತ ಪರೀಕ್ಷಾ ಕೇಂದ್ರಗಳ ಸುತ್ತಮುತ್ತಲಿನ 200 ಮೀಟರ್ ವ್ಯಾಪ್ತಿಯ ಪ್ರದೇಶದಲ್ಲಿ ಕಲಂ 144ರ ಸಿಆರ್‍ಪಿಸಿ ಪ್ರಕಾರ ನಿಷೇಧಾಜ್ಞೆ ಜಾರಿಗೊಳಿಸಿ ಹೆಚ್ಚುವರಿ ಜಿಲ್ಲಾ ದಂಡಾಧಿಕಾರಿಗಳೂ ಆಗಿರುವ ನಗರ ಪೊಲೀಸ್ ಆಯುಕ್ತರಾದ ಎನ್. ಶಶಿಕುಮಾರ್ ಅವರು ಆದೇಶ ಹೊರಡಿಸಿದ್ದಾರೆ.
ಈ ಅವಧಿಯಲ್ಲಿ ನಿಷೇಧಿತ ಪ್ರದೇಶದಲ್ಲಿ ಪರೀಕ್ಷೆಗೆ ಸಂಬಂಧಿಸಿದ ಅಭ್ಯರ್ಥಿಗಳನ್ನು ಹೊರತು ಪಡಿಸಿ ಸಾರ್ವಜನಿಕರು 5 ಅಥವಾ ಅದಕ್ಕೂ ಹೆಚ್ಚಿನ ಸಂಖ್ಯೆಯಲ್ಲಿ ಗುಂಪು ಸೇರುವುದು ಅಥವಾ ತಿರುಗಾಡುವುದನ್ನು ನಿಷೇಧಿಸಲಾಗಿದೆ. ಯಾವುದೇ ರೀತಿಯಲ್ಲಿ ಪರೀಕ್ಷೆಯಲ್ಲಿ ನಕಲು ಮಾಡಲು ಸಹಕರಿಸುವುದು, ಚೀಟಿ ಅಥವಾ ಇನ್ನೀತರ ರೀತಿಯಲ್ಲಿ ಉತ್ತರ ಬರೆದು ಹಂಚುವುದು, ರವಾನಿಸುವುದು ಇತ್ಯಾದಿ ಚಟುವಟಿಕೆಗಳನ್ನು ನಿಷೇಧಿಸಲಾಗಿದೆ, ಪರೀಕ್ಷೆ ಪ್ರಾರಂಭವಾಗುವ ಅರ್ಧಗಂಟೆ ಮುಂಚಿತವಾಗಿ ಹಾಗೂ ಪರೀಕ್ಷೆ ಅವಧಿಯವರೆಗೆ ಪರೀಕ್ಷಾ ಕೇಂದ್ರಗಳ ಸುತ್ತಮುತ್ತಲಿನ 200 ಮೀಟರ್ ಪ್ರದೇಶದಲ್ಲಿ ಜರಾಕ್ಸ್ ಅಂಗಡಿಗಳು ಕಾರ್ಯನಿರ್ವಹಿಸುವುದನ್ನು ನಿಷೇಧಿಸಲಾಗಿದೆ, ಮೊಬೈಲ್, ದೂರವಾಣಿ, ಪೇಜರ್ ಇತ್ಯಾದಿ ಎಲೆಕ್ಟ್ರಾನಿಕ್ ಸಂಪರ್ಕ ಉಪಕರಣಗಳ ಬಳಕೆ ನಿಷೇಧಿಸಲಾಗಿದೆ ಎಂದು ಅವರು ಆದೇಶದಲ್ಲಿ ತಿಳಿಸಿದ್ದಾರೆ.
ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಅರ್ಜಿ ವಿಚಾರಣೆಗೆ ಅರ್ಹವಲ್ಲ: ಮತ್ತೊಮ್ಮೆ ಜಾಮೀನು ತಿರಸ್ಕರಿಸಿದ ಸುಪ್ರೀಂ ನಟ ದರ್ಶನ್ ರೇಣುಕಾ…
ಗೃಹ ಜ್ಯೋತಿ ಪರಿಶೀಲನೆ: ಪ್ರವರ್ಗ ಮಾಹಿತಿ (ಜಾತಿ ಪ್ರಮಾಣಪತ್ರ) ಕಡ್ಡಾಯವಲ್ಲ ಬೆಂಗಳೂರು: ರಾಜ್ಯಾದ್ಯಂತ ಜುಲೈ 1 ರಿಂದ ಆರಂಭಗೊಂಡಿರುವ ಗೃಹ ಜ್ಯೋತಿ…
ಎಸ್‌ಐಆರ್ ಪ್ರಕ್ರಿಯೆಯಲ್ಲಿ ಭಾರೀ ಅಕ್ರಮ : ಸಮಗ್ರ ತನಿಖೆಗೆ ಪ್ರಲ್ಹಾದ ಜೋಶಿ ಆಗ್ರಹ ನವದೆಹಲಿ: ರಾಮನಗರ ಜಿಲ್ಲೆಯಲ್ಲಿ ನಡೆದ ಮತದಾರರ…
ಅಕ್ರಮ ಎಸ್‌ಐಆರ್ ಪ್ರಕ್ರಿಯೆ : 2028ರ ಚುನಾವಣೆ ಗೆಲ್ಲಲು ಬಾಂಗ್ಲಾದೇಶಿಯರ ಸಕ್ರಮಕ್ಕೆ ಕಾಂಗ್ರೆಸ್ ಸಂಚು : ಶೋಭಾ ಕರಂದ್ಲಾಜೆ ಗಂಭೀರ…
ಮೂಲ ನೆಲದಿಂದ ಬೇರ್ಪಡಿಸಿ ಕರಾವಳಿಯ ಮಣ್ಣಿನ ಸಂಸ್ಕೃತಿಯ ಪಾವಿತ್ರ್ಯಕ್ಕೆ ಧಕ್ಕೆ ತರಬೇಡಿ .. ಕರಾವಳಿ ಕಂಬಳವು ತನ್ನದೇ ಆದ ಆಳವಾದ ಸಾಂಪ್ರದಾಯಿಕ…
ಮಂಗಳೂರು:ಸಾಮಾಜಿಕ ಜಾಲತಾಣಗಳಲ್ಲಿ ಸೆಲಿನಾ ಟ್ರಾವೆಲ್ಸ್ ವಿರುದ್ಧ ಹರಿದಾಡಿದ ಕರಪತ್ರ : ಪೊಲೀಸ್ ಇಲಾಖೆ ಸ್ಪಷ್ಟನೆ ಮಂಗಳೂರು: ಖಾಸಗಿ ಸಾರಿಗೆ ಸಂಸ್ಥೆಯಾದ…