ಮಂಗಳೂರು: ಏ. 26 ರಂದು ಖಾಸಗಿ ಕಂಪೆನಿಗಳ ನೇರ ಸಂದರ್ಶನ – Vishwnaews24

Featured, ದಕ್ಷಿಣ ಕನ್ನಡ

ಮಂಗಳೂರು: ಏ.26 ರಂದು ಖಾಸಗಿ ಕಂಪೆನಿಗಳ ನೇರ ಸಂದರ್ಶನ

ಮಂಗಳೂರು: ನಗರದ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ವತಿಯಿಂದ ಖಾಸಗಿ ಕಂಪೆನಿಗಳ ನೇರ ಸಂದರ್ಶನವನ್ನು ಇದೇ ಏ.26ರ ಮಂಗಳವಾರ ಬೆಳಿಗ್ಗೆ 10 ಗಂಟೆಯಿಂದ ಆಯೋಜಿಸಲಾಗಿದೆ.
JOB ಪಿ.ಯು.ಸಿ, ಐ.ಟಿ.ಐ, ಡಿಪ್ಲೊಮಾ ಹಾಗೂ ಯಾವುದೇ ಪದವಿ ತೇರ್ಗಡೆಯಾದ (ಬಿ.ಇ ಮತ್ತು ಬಿ.ಸಿ.ಎ ಹೊರತುಪಡಿಸಿ) ಆಸಕ್ತ ಅಭ್ಯರ್ಥಿಗಳು ಸ್ವ ವಿವರವುಳ್ಳ ಬಯೋಡೇಟಾದೊಂದಿಗೆ ನಗರದ ಲಾಲ್‌ಬಾಗ್‌ನಲ್ಲಿರುವ ಮಂಗಳೂರು ಮಹಾನಗರ ಪಾಲಿಕೆ ಕಟ್ಟಡದಲ್ಲಿರುವ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯಲ್ಲಿ ಹಮ್ಮಿಕೊಂಡಿರುವ ನೇರ ಸಂದರ್ಶನದಲ್ಲಿ ಭಾಗವಹಿಸಬಹುದು.
ವಿವರ : ಜಯಲಕ್ಷ್ಮಿ ಸಿಲ್ಕ್, ಗರೋಡಿ ಸ್ಮಿಲ್ಸ್, ಮಡ್ ಫೈಸ್‌, ಪೈ ಇಂಟರಾಷನಲ್, ಬ್ರೆಟ್ ಫೈಲ್ಸ್ ಇಂಟಲ್ಯಾಷನಲ್ ಪ್ರೈವೇಟ್ ಲಿಮಿಟೆಡ್, ಸಾಯಿ ರಾಧಾ ಟಿ.ವಿ.ಎಸ್. ಕಂಪೆನಿಗಳು ಭಾಗವಹಿಸಲಿದೆ.
ಹೆಚ್ಚಿನ ಮಾಹಿತಿಗಾಗಿ ದೂ.ಸಂಖ್ಯೆ:0824-2457139ಯನ್ನು ಸಂಪರ್ಕಿಸಬಹುದು ಎಂದು ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯ ಪ್ರಕಟಣೆ ತಿಳಿಸಿದೆ.

Leave a Reply