ಮಂಗಳೂರು : ನಗರದ ಐಟಿ ಕಚೇರಿಯನ್ನು ಗೋವಾಕ್ಕೆ ಸ್ಥಳಾಂತರಿಸುವ ವಿಷಯಕ್ಕೆ ಸಂಬಂಧಪಟ್ಟಂತೆ ಕೇಂದ್ರ ಹಾಗೂ ರಾಜ್ಯ ಸರ್ಕಾರದ ನಿರ್ಧಾರವನ್ನು ವಿರೋಧಿಸಿ ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಸಮಿತಿಯಿಂದ ನಗರದ ಮಿನಿ ವಿಧಾನಸೌಧದ ಎದುರು ಪ್ರತಿಭಟನೆ ಕೈಗೊಂಡಿದ್ದಾರೆ.
ಈ ಸಂದರ್ಭದಲ್ಲಿ ಮಾತನಾಡಿದ ಶಾಸಕ ಯು.ಟಿ ಖಾದರ್ ಬಿಜೆಪಿ ಸರ್ಕಾರ ಅಧಿಕಾರಿಗಳ ವರ್ಗಾವಣೆಯಲ್ಲಿ ಸಮಯ ದೂಡುತ್ತಿದೆ. ಕೇವಲ ಒಂದು ಯೋಜನೆಗಳನ್ನು ಜಿಲ್ಲೆಗೆ ನೀಡುತ್ತಿಲ್ಲ. ಈಗಿರುವ ಕಚೇರಿ ಸೇರಿದಂತೆ ಸಾರ್ವಜನಿಕರಿಗೆ ಒದಗುವ ಸೌಲಭ್ಯಗಳ ಸ್ಥಳಾಂತರ, ಖಾಸಗೀಕರಣ ಮಾಡುವಲ್ಲಿ ತೊಡಗಿದೆ. ಭಾವನಾತ್ಮಕ ಆಲೋಚನೆಗಳಿಂದ ಜನರನ್ನು ಸೆಳೆಯುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಜಿಎಸ್ ಟಿ, ನೋಟು ಅಪಮೌಲ್ಯೀಕರಣದಿಂದ ಈಗಾಗಲೇ ಜನರಿಗೆ ಅನ್ಯಾಯ ಆಗಿದ್ದು ಸದ್ಯ ಇರುವ ಐಟಿ ಕಚೇರಿ ಸ್ಥಳಾಂತರದ ನಿರ್ಧಾರ ನಾಲ್ಕು ಲಕ್ಷ ತೆರಿಗೆದಾರರಿಗೆ ಆಘಾತ ನೀಡಲಿದೆ. ಸಂಸದರು ತಾವು ನಂಬರ್ ಒನ್ ಆದರೆ ತನ್ನ ಸ್ವಂತ ನೆಲದಲ್ಲಿರುವ ಕಚೇರಿ ಸ್ಥಳಾಂತರವಾಗುತ್ತಿದ್ದರೂ ಧ್ವನಿ ಎತ್ತದೆ ಸುಮ್ಮನಿದ್ದಾರೆ ಸಂಸದರು ರಾಜೀನಾಮೆ ನೀಡಿ ಐಟಿ ಕಚೇರಿ ಸ್ಥಳಾಂತರವನ್ನು ತತ್ ಕ್ಷಣ ಹಿಂಪಡೆಯಬೇಕು ಎಂದು ದ.ಕ. ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹರೀಶ್ ಕುಮಾರ್ ಒತ್ತಾಯಿಸುತ್ತಿದ್ದಾರೆ.
ಪ್ರತಿಭಟನೆಯಲ್ಲಿ ಮಾಜಿ ಶಾಸಕರಾದ ಐವನ್ ಡಿಸೋಜ, ಜೆ ಅರ್ ಲೋಬೊ, ಮಾಜಿ ಸಚಿವ ಅಭಯಚಂದ್ರ ಜೈನ್, ಹಾಗೂ ಜಿಲ್ಲೆಯ ಕಾಂಗ್ರೆಸ್ ಮುಖಂಡರು ಹಾಗೂ ಕಾರ್ಯಕರ್ತರು ಪಾಲ್ಗೊಂಡಿದ್ದರು.
ಈ ಬಾರಿ ದಸರಾ ಮಹೋತ್ಸವದಲ್ಲಿ ಅಂಬಾರಿ ಹೊತ್ತು ಸಾಗಲಿರುವ ದುಬಾರೆ ವೀರ ಪ್ರಶಾಂತ ಆನೆ ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು…
ಬೆಳ್ತಂಗಡಿ: ನಾವೂರಿನ ಆರೋಗ್ಯ ಕ್ಲಿನಿಕ್ಗೆ ಬೆಂಕಿ ಹಚ್ಚಿದ ಪ್ರಕರಣ; ಓರ್ವನ ಬಂಧನ, ಇಬ್ಬರು ವಶಕ್ಕೆ ಬೆಳ್ತಂಗಡಿ: ನಾವೂರು ಗ್ರಾಮದ ಸ್ವಾತಿ…
ಮಂಗಳೂರು: ನಿಯಮಬಾಹಿರವಾಗಿ ಶಾಲಾ ಮಕ್ಕಳ ಸಾಗಾಟ ; 30 ವಾಹನಗಳ ಮೇಲೆ ಕೇಸು ದಾಖಲು ಮಂಗಳೂರು: ಮಂಗಳೂರು ಪ್ರಾದೇಶಿಕ ಸಾರಿಗೆ…
ಕಾಪು: ಇಂದು ಉಚ್ಚಿಲ ಮಹಾಲಕ್ಷ್ಮಿ ದೇವಸ್ಥಾನಕ್ಕೆ ಡಿ.ಕೆ.ಶಿವಕುಮಾರ್ ಭೇಟಿ ಉಡುಪಿ: ಐದನೇ ವರ್ಷದ ಉಚ್ಚಿಲ ದಸರಾ ಲಲಿತ ಪಂಚಮಿಯ ಸಂಭ್ರಮ…
ಉಡುಪಿ ಉಚ್ಚಿಲ ದಸರಾ: ಅ.17ರಂದು ಮಹಾಲಕ್ಷ್ಮೀ ಬ್ಯಾಂಕ್ ವತಿಯಿಂದ ಚಿತ್ರಕಲೆ ಸ್ಪರ್ಧೆ : ಯಶ್ಪಾಲ್ ಸುವರ್ಣ ಉಡುಪಿ: ಉಚ್ಚಿಲ ಮಹಾಲಕ್ಷ್ಮೀ…
ಕೋಳಿಮರಿ ವಿತರಣೆ: ಉಡುಪಿ ತಾಲೂಕಿನ ಗ್ರಾಮೀಣ ರೈತ ಮಹಿಳೆಯರಿಗೆ ಅರ್ಜಿ ಆಹ್ವಾನ ಉಡುಪಿ: ಕರ್ನಾಟಕ ಸಹಕಾರ ಕುಕ್ಕುಟ ಮಹಾಮಂಡಳ ನಿಯಮಿತ…