ಮಂಗಳೂರು : ನಾಲ್ವರು ವ್ಯಕ್ತಿಗಳಿಗೆ ನೀಡಲಾಗಿದ್ದ ಗನ್‌ಮ್ಯಾನ್ ಭದ್ರತೆಯನ್ನು ವಾಪಸ್ ಪಡೆದುಕೊಳ್ಳಲಾಗಿದೆ ಎಂದು ಮಂಗಳೂರು ಪೊಲೀಸ್ ಆಯುಕ್ತ ಕುಲದೀಪ್ ಕುಮಾರ್ ಆರ್.ಜೈನ್ ಮಾಹಿತಿ ನೀಡಿದ್ದಾರೆ.
ನಗರ ಪೊಲೀಸ್ ಆಯುಕ್ತಾಲಯ ವ್ಯಾಪ್ತಿಯಲ್ಲಿ ಒಟ್ಟು 5 ಮಂದಿಗೆ ಗನ್‌ಮ್ಯಾನ್ ಭದ್ರತೆ ಒದಗಿಸಲಾಗಿತ್ತು. ಆ ಪೈಕಿ ಓರ್ವರು ಈ ಹಿಂದೆ ಅವರಾಗಿಯೇ ವಾಪಸ್ ನೀಡಿದ್ದರು. ಇನ್ನುಳಿದ ನಾಲ್ವರಿಗೆ ಇರಬಹುದಾದ ಬೆದರಿಕೆ, ಭದ್ರತೆಯ ಆತಂಕದ ಕುರಿತು ಪರಿಶೀಲನೆ ನಡೆಸಿ ಅನಂತರ ಗನ್‌ಮ್ಯಾನ್‌ನ್ನು ವಾಪಸ್ ಪಡೆದುಕೊಳ್ಳಲಾಗಿದೆ ಎಂದು ಕಮಿಷನರ್ ಮಾಹಿತಿ ನೀಡಿದ್ದಾರೆ.
ಯಾವುದೇ ವ್ಯಕ್ತಿಗೆ ಇರುವ ಭದ್ರತಾ ಆತಂಕವನ್ನು ಕಾಲ ಕಾಲಕ್ಕೆ ಪರಿಶೀಲಿಸಿ ಗನ್‌ಮ್ಯಾನ್ ಭದ್ರತೆ ನೀಡುವ ನಿರ್ಧಾರ ತೆಗೆದುಕೊಳ್ಳಲಾಗುತ್ತದೆ. ಇದು ನಿರಂತರವಾಗಿ ನಡೆಯುವ ಪ್ರಕ್ರಿಯೆಯಾಗಿದೆ. ಇತ್ತೀಚಿನ ಪರಿಶೀಲನೆ ಯನ್ನು ಮಾರ್ಚ್‌ಗೆ ನಡೆಸಲಾಗಿತ್ತು. ಆದಾಗ್ಯೂ ಗನ್‌ಮ್ಯಾನ್ ಭದ್ರತೆ ಅಗತ್ಯವಿದ್ದರೆ ಇಲಾಖೆಗೆ ಹಣ ಪಾವತಿಸಿ ಪಡೆದುಕೊಳ್ಳಲು ಅವಕಾಶವಿದೆ ಎಂದು ಪೊಲೀಸ್ ಆಯುಕ್ತರು ತಿಳಿಸಿದ್ದಾರೆ.
ದುರಸ್ತಿ ಕಾಮಗಾರಿ: ಅ.7ರಂದು ಹಂದಾಡಿ ರೈಲ್ವೆ ಗೇಟ್ ಬಂದ್ ಕುಂದಾಪುರ : ರೈಲ್ವೆ ಲೆವೆಲ್ ಕ್ರಾಸಿಂಗ್ ಗೇಟ್‌ನಲ್ಲಿ ಅಗತ್ಯ ದುರಸ್ತಿ…
ಕಾರ್ಕಳ: ಜನವಿರೋಧಿ ನೀತಿ ಖಂಡಿಸಿ ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಬೃಹತ್ ಪ್ರತಿಭಟನೆ ಕಾರ್ಕಳ: ರಾಜ್ಯ ಕಾಂಗ್ರೆಸ್ ಸರ್ಕಾರದ ಜನವಿರೋಧಿ…
ಎಂಆರ್‌ಪಿಎಲ್ ದುರಂತ: ಮೃತರ ಕುಟುಂಬಕ್ಕೆ ₹1.20 ಕೋಟಿ ಪರಿಹಾರ, ಸದಸ್ಯರೊಬ್ಬರಿಗೆ ಉದ್ಯೋಗ : ಸಂಸದ ಕ್ಯಾ. ಬ್ರಿಜೇಶ್ ಚೌಟ ಮಂಗಳೂರು:…
ಉಡುಪಿ: ಜೈಲು ವಾರ್ಡನ್‌ಗೆ ಕೊಲೆ ಬೆದರಿಕೆ, ಹಲ್ಲೆ ಪ್ರಕರಣ :ಆರೋಪಿಗೆ 5 ವರ್ಷ ಕಠಿಣ ಜೈಲು ಶಿಕ್ಷೆ ಉಡುಪಿ: ಸುಮಾರು…
ಉಡುಪಿ: ಚಲಿಸುತ್ತಿದ್ದ ರೈಲಿನಿಂದ ಜಿಗಿದು ಪ್ರಯಾಣಿಕ ಸಾವು ಉಡುಪಿ: ಚಲಿಸುತ್ತಿದ್ದ ರೈಲಿನಿಂದ ಜಿಗಿದು ಪ್ರಯಾಣಿಕರೊಬ್ಬರು ಮೃತಪಟ್ಟ ಘಟನೆ ಸೋಮವಾರ ಬೆಳಗ್ಗೆ…
ದ. ಕ, ಉಡುಪಿಯಲ್ಲಿ ಅ. 11 ರವರೆಗೆ ಮಳೆಯಾಗುವ ನಿರೀಕ್ಷೆ: ಹವಾಮಾನ ಇಲಾಖೆ ಮುನ್ಸೂಚನೆ ಮಂಗಳೂರು/ಉಡುಪಿ: ದಕ್ಷಿಣ ಕನ್ನಡ (ದ.ಕ)…