ಮಂಗಳೂರು,: ವೆನ್ಲಾಕ್ ಆಸ್ಪತ್ರೆಯ ಐಸಿಯು ವೈದ್ಯರು ಮತ್ತು ಸಿಬ್ಬಂದಿಗಳು ರೋಗಿಗಳಿಗೆ ಚಿಕಿತ್ಸೆ ನೀಡುವ ಬದಲು ತಮ್ಮ ಕಂಪ್ಯೂಟರ್‌ನಲ್ಲಿ ಆಟವಾಡುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ.
ವಗ್ಗದ ವಿಜಯ್ (40) ಎಂಬ ವ್ಯಕ್ತಿಗೆ ಅಧಿಕ ರಕ್ತದೊತ್ತಡದಿಂದ ಬಿದ್ದು ತಲೆಗೆ ಪೆಟ್ಟು ಬಿದ್ದಿದ್ದು, ಜನವರಿ 22 ರಂದು ತಕ್ಷಣ ಅವರನ್ನು ವೆನ್ಲಾಕ್ ಆಸ್ಪತ್ರೆಗೆ ಸ್ಥಳಾಂತರಿಸಲಾಯಿತು. ರೋಗಿಯು ಆಸ್ಪತ್ರೆಗೆ ತಲುಪಿದಾಗ ಆತನಿಗೆ ಚಿಕಿತ್ಸೆ ನೀಡುವ ಬದಲು, ಐಸಿಯು ವೈದ್ಯರು ಮತ್ತು ಇತರ ಸಿಬ್ಬಂದಿ, ತಮ್ಮ ಕಂಪ್ಯೂಟರ್‌ನಲ್ಲಿ ಆಟವಾಡುತ್ತಿದ್ದರು ಎಂದು ಹೇಳಲಾಗಿದೆ.
ರೋಗಿಯ ಆಪ್ತರು ವೈದ್ಯರು ಮತ್ತು ಸಿಬ್ಬಂದಿಗೆ ಕರೆ ಮಾಡಿ ರೋಗಿಗೆ ಚಿಕಿತ್ಸೆ ನೀಡುವಂತೆ ಮನವಿ ಮಾಡಿದರೂ ಸ್ಪಂದಿಸಲಿಲ್ಲ ಎನ್ನಲಾಗಿದೆ. ರೋಗಿಯನ್ನು ಯಾವುದಾದರೂ ಖಾಸಗಿ ಆಸ್ಪತ್ರೆಗೆ ಕರೆದುಕೊಂಡು ಹೋಗಬೇಕೆಂದು ವೈದ್ಯರು ಚಿಕಿತ್ಸೆ ನೀಡಿಲ್ಲ ಎಂದು ಕುಟುಂಬದವರು ಆರೋಪಿಸಿದ್ದಾರೆ. ರೋಗಿಯನ್ನು ಕೂಡಲೇ ಖಾಸಗಿ ಆಸ್ಪತ್ರೆಗೆ ರವಾನಿಸಲಾಯಿತು.
ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ ವಿಡಿಯೋದಲ್ಲಿ ಕರ್ತವ್ಯ ಲೋಪವೆಸಗಿರುವ ವೈದ್ಯರು ಹಾಗೂ ಸಿಬ್ಬಂದಿ ವಿರುದ್ಧ ಕ್ರಮ ಕೈಗೊಳ್ಳುವಂತೆ ರೋಗಿಯ ಸಂಬಂಧಿಕರು ಜಿಲ್ಲಾಡಳಿತವನ್ನು ಒತ್ತಾಯಿಸಿದ್ದಾರೆ.
ಬೆಂಗಳೂರು : ಮಟನ್ ಶಾಪ್‌ನಲ್ಲಿ ಎಂಡಿಎಂಎ ಮಾರಾಟ : ಇಬ್ಬರ ಬಂಧನ ಬೆಂಗಳೂರು: ಮಟನ್ ಶಾಪ್ ನಲ್ಲಿ ಎಂಡಿಎಂಎ ಮಾದಕ…
ಕಾರ್ಕಳ : ಮನೆ ವಿಚಾರದಲ್ಲಿ ಜಗಳ; ಮಗನ ಕೊಲೆಗೆ ಯತ್ನಿಸಿದ ತಂದೆ ಕಾರ್ಕಳ : ಮನೆ ವಿಚಾರದಲ್ಲಿ ತಂದೆಯೊಬ್ಬ ತನ್ನ…
ಮೈಸೂರು ದಸರಾ ಕಂಬಳ: ಹೆಸರು ನೋಂದಣಿಗೆ ಸೂಚನೆ ಮಂಗಳೂರು: ಮೈಸೂರು ದಸರಾ 2026ರ ಅಂಗವಾಗಿ ಮೊದಲ ಬಾರಿಗೆ ಅದ್ದೂರಿಯಾಗಿ ಆಯೋಜಿಸಲಾಗುತ್ತಿರುವ…
ಸೌಜನ್ಯಾ ಪ್ರಕರಣ: ಎಸ್‌ಐಟಿ ತಂಡದ ಬಗ್ಗೆ ಕಲ್ಲಡ್ಕ ಪ್ರಭಾಕರ ಭಟ್ ಅಸಮಾಧಾನ ಬಂಟ್ವಾಳ: ಸೌಜನ್ಯಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮರುತನಿಖೆಗೆ…
ನವರಾತ್ರಿ ವೇಳೆಗೆ ಗೃಹಲಕ್ಷ್ಮಿ ಯೋಜನೆಯ 33ನೇ ಕಂತಿನ ಹಣ ಫಲಾನುಭವಿಗಳ ಖಾತೆಗೆ ಬೆಂಗಳೂರು: ನವರಾತ್ರಿ ಹಬ್ಬದ ಸಂದರ್ಭದಲ್ಲಿ ರಾಜ್ಯದ ‘ಗೃಹಲಕ್ಷ್ಮಿ’…
ಬಂಟ್ವಾಳ: ಬೆಂಗಳೂರು–ಮಡಗಾಂವ್ ನಡುವೆ ವಿಶೇಷ ಎಕ್ಸ್‌ಪ್ರೆಸ್ ರೈಲು ಬಂಟ್ವಾಳ : ವಾರಾಂತ್ಯದ ರಜೆಯ ಹಿನ್ನೆಲೆಯಲ್ಲಿ ಪ್ರಯಾಣಿಕರ ಹೆಚ್ಚುವರಿ ದಟ್ಟಣೆ ನಿವಾರಿಸಲು…