Categories: ಉಡುಪಿ

ಮಂಗಳೂರು ಒಳ್ಳೆಯ ಸುದ್ದಿಗಳಿಂದ ಪ್ರಸಿದ್ಧವಾಗಬೇಕು ಹೊರತು ಕೆಟ್ಟ ಕಾರಣಗಳಿಗಾಗಿ ಅಲ್ಲ : ಮಿಥುನ್ ರೈ -Vishwanews24

ಮಂಗಳೂರು: ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬಾಂಬ್ ಪತ್ತೆ ಪ್ರಕರಣಕ್ಕೆ ಸಂಬಂಧಿಸಿ ಹೇಳಿಕೆ ನೀಡಿದ್ದ ಬಿಜೆಪಿ ಮುಖಂಡರಾದ ಪ್ರಹ್ಲಾದ್ ಜೋಶಿ, ರೇಣುಕಾಚಾರ್ಯ, ಈಶ್ವರಪ್ಪ ಮತ್ತು ಬಸವರಾಜ್ ಬೊಮ್ಮಯಿ ತಕ್ಷಣ ಜನತೆಯಲ್ಲಿ ಕ್ಷಮೆಯಾಚಿಸಬೇಕು ಎಂದು ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ಮಿಥುನ್ ರೈ ಒತ್ತಾಯಿಸಿದ್ದಾರೆ.

ಜ.25 ರ ಶನಿವಾರ ಮಾಧ್ಯಮಗಳನ್ನುದ್ದೇಶಿಸಿ ಮಾತನಾಡಿದ ಮಿಥುನ್ ರೈ, “ಬಿಜೆಪಿ ಮುಖಂಡರ ಹೇಳಿಕೆಗಳಿಂದಾಗಿ ಕೋಮು ದೌರ್ಜನ್ಯ, ಶಾಂತಿ ಮತ್ತು ಸೌಹಾರ್ದತೆಗೆ ಭಂಗ ಉಂಟಾಗುವ ಸಾಧ್ಯತೆ ಇತ್ತು, ಹೀಗಾಗಿ ತಮ್ಮ ಹೇಳಿಕೆಗೆ ಕ್ಷಮೆಯಾಚಿಸಬೇಕಾಗಿದೆ. “ಬಾಂಬ್ ಪತ್ತೆಯಾದ ವೇಳೆ ಎಲ್ಲರೂ ಒಂದು ನಿರ್ದಿಷ್ಟ ಸಮುದಾಯವನ್ನು ಗುರಿಯಾಗಿಸಿಕೊಂಡಿದ್ದರು. ಅಪರಾಧಿಗೆ ಯಾವುದೇ ಜಾತಿ ಧರ್ಮವಿಲ್ಲ. ಮಂಗಳೂರು ಒಳ್ಳೆಯ ಸುದ್ದಿಗಳಿಂದ ಪ್ರಸಿದ್ಧವಾಗಬೇಕು ಹೊರತು ಕೆಟ್ಟ ಕಾರಣಗಳಿಗಾಗಿ ಅಲ್ಲ ಎಂದು ಇದೇ ವೇಳೆ ಹೇಳಿದರು.

ಪೊಲೀಸರು ಮಾಧ್ಯಮ ವರದಿಗಳಿಗೆ ನೀಡಿದ ಪ್ರಕಾರ ಅದೊಂದು ಸಜೀವ ಬಾಂಬ್ ಆಗಿತ್ತು, ಬಾಂಬ್ ತಯಾರಿಕೆಗೆ ಬೇಕಾದ ಆರ್ಡಿಎಕ್ಸ್ ಎಲ್ಲಿಂದ ಬಂತು ಹಾಗೂ ಅದನ್ನು ನೀಡಿದರು ಯಾರು ? ಹಾಗೂ ಪ್ರಕರಣ ಹಿಂದೆ ಯಾರು ಶಾಮೀಲಾಗಿದ್ದಾರೆ ಎನ್ನುವುದರ ಕುರಿತು ಸಮಗ್ರ ತನಿಖೆಯಾಗಬೇಕು ಎಂದು ಒತ್ತಾಯಿಸಿದರು

 

ಗೋಲಿಬಾರ್ ಮತ್ತು ಬಾಂಬ್ ಪತ್ತೆ ಘಟನೆಯಿಂದಾಗಿ ಜಿಲ್ಲೆಯ ಅಭಿವೃದ್ಧಿಯಲ್ಲಿ ಕುಂಠಿತವಾಗುತ್ತಿದ್ದು ನಾವು 10 ವರ್ಷಗಳ ಹಿಂದಕ್ಕೆ ಹೋಗುತ್ತಿದ್ದೇವೆ. ಮಂಗಳೂರು ಕೋಮು ದೌರ್ಜನ್ಯದ ಪ್ರಯೋಗಾಲಯವಾಗುತ್ತಿದ್ದು, ಬಹುರಾಷ್ಟ್ರೀಯ ಕಂಪನಿಗಳು ಮಂಗಳೂರಿನಲ್ಲಿ ಹೂಡಿಕೆ ಮಾಡಲು ತಯಾರಿಲ್ಲ. ಹೀಗಾಗಿ ಇಂತಹ ಘಟನೆಗಳನ್ನು ಜಿಲ್ಲಾ ಯುವ ಕಾಂಗ್ರೆಸ್ ಸಹಿಸುವುದಿಲ್ಲ ಎಂದು ಮಿಥುನ್ ರೈ ಹೇಳಿದರು.

ಯುಪಿ ಅಥವಾ ಬಿಹಾರದಲ್ಲಿ ಮಾತ್ರ ನಡೆಯುವ ಗೋಲಿಬಾರ್, ಬಾಂಬ್ ಬೆದರಿಕೆ ಹಾಗೂ ಇತ್ತೀಚಿನ ಆಸಿಡ್ ದಾಳಿ ಮಂಗಳೂರಿಗೆ ಹೊಸದು. ಕರಾವಳಿಯ ನಗರ ಬೆಂಗಳೂರು ಮತ್ತು ಮುಂಬೈನಂತಹ ಮಹಾನಗರಗಳೊಂದಿಗೆ ಸ್ಪರ್ಧಿಸಬೇಕು ಹೊರತು ಯುಪಿ ಮತ್ತು ಬಿಹಾರದೊಂದಿಗೆ ಸ್ಪರ್ಧಿಸಬಾರದು. ಒಂದು ವೇಳೆ ಬಾಂಬರ್ ಆದಿತ್ಯ ರಾವ್ ಬದಲಾಗಿ ಹೆಸರು ಬೇರೆ ಯಾವುದಾದರೂ ಇರುತ್ತಿದ್ದರೆ ಯಾವ ಪರಿಸ್ಥಿತಿ ಜಿಲ್ಲೆಯಲ್ಲಿ ಇರುತ್ತಿತ್ತು ಎಂದು ಮಿಥುನ್ ರೈ ಪ್ರಶ್ನಿಸಿದರು .

ಕಾರ್ಪೋರೇಟರ್ ಎ ಸಿ ವಿನಯರಾಜ್, ಪ್ರವೀಣ್ ಚಂದ್ರ ಅಳ್ವಾ ಮತ್ತು ಇತರರು ಉಪಸ್ಥಿತರಿದ್ದರು.

 

ಇಲ್ಲಿಯವರೆಗೂ ಏಷ್ಟೋ ದೈವ ದೇವರು ಜ್ಯೋತಿಷ್ಯರಲ್ಲಿ ಕೇಳಿ ಸರಿಯಾದ ಪರಿಹಾರ ಸಿಗದೆ ನೊಂದಿದ್ದರೆ.ಅಂತಃಹ ಯಾವುದೇ ಕಠಿಣ ಸಮಸ್ಯೆ ಗಳಿದ್ದರು ಉತ್ತಮ ಸಲಹೆ ಹಾಗೂ ಶಾಶ್ವತ ಪರಿಹಾರ ತಿಳಿಸುತ್ತಾರೆ.

ಇಂದೇ ಸಂಪರ್ಕಿಸಿ ಪಂಡಿತ್ ವೈದಿಕ ಶ್ರೀ ಗಣಪತಿ ಭಟ್

8088827292

 

Vishwa News 24

Recent Posts

ಹೆಬ್ರಿ: ಕೆಲಸ ಮಾಡುತ್ತಿದ್ದಾಗ ಆಕಸ್ಮಿಕವಾಗಿ ಏಣಿಯಿಂದ ಬಿದ್ದು ದ್ವಿತೀಯ ಪಿಯುಸಿ ವಿದ್ಯಾರ್ಥಿ ಸಾವು – vishwanews24

ಹೆಬ್ರಿ: ಕೆಲಸ ಮಾಡುತ್ತಿದ್ದಾಗ ಆಕಸ್ಮಿಕವಾಗಿ ಏಣಿಯಿಂದ ಬಿದ್ದು ದ್ವಿತೀಯ ಪಿಯುಸಿ ವಿದ್ಯಾರ್ಥಿ ಸಾವು ಹೆಬ್ರಿ: ಕೆಲಸ ಮಾಡುತ್ತಿದ್ದಾಗ ಆಕಸ್ಮಿಕವಾಗಿ ಏಣಿಯಿಂದ…

32 minutes ago

ರಾಜ್ಯದಲ್ಲಿ ಏ.1ರವರೆಗೆ ಆಲಿಕಲ್ಲು ಮಳೆ ಸಾಧ್ಯತೆ ; ಕರಾವಳಿ ಜಿಲ್ಲೆಗೆ ಆರೆಂಜ್ ಅಲರ್ಟ್  ಘೋಷಣೆ – vishwanews24

ರಾಜ್ಯದಲ್ಲಿ ಏ.1ರವರೆಗೆ ಆಲಿಕಲ್ಲು ಮಳೆ ಸಾಧ್ಯತೆ ; ಕರಾವಳಿ ಜಿಲ್ಲೆಗೆ ಆರೆಂಜ್ ಅಲರ್ಟ್  ಘೋಷಣೆ ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ…

42 minutes ago

ಮೇ 16ರಂದು ಇತಿಹಾಸ ಪ್ರಸಿದ್ದ ಕಾಪು “ಪಿಲಿಕೋಲ” – vishwanews24

ಮೇ 16ರಂದು ಇತಿಹಾಸ ಪ್ರಸಿದ್ದ ಕಾಪು "ಪಿಲಿಕೋಲ" ಕಾಪು: ತನ್ನದೇ ಆದ ವಿಶಿಷ್ಟ- ವೈಶಿಷ್ಟ್ಯತೆಗಳಿಂ­ದಾಗಿ ಕರಾ­ವಳಿ ಜಿಲ್ಲೆ­ಗಳು ಮಾತ್ರವಲ್ಲದೇ ದೇಶ-ವಿದೇ­ಶ­ಗ­ಳ­ಲ್ಲಿಯೂ…

2 hours ago

ಕಾಪು ಅಕ್ರಮ ಮೀನುಗಾರಿಕೆ ನಡೆಸುತ್ತಿದ್ದ ದೋಣಿ ಸ್ಥಳೀಯ ನಾಡದೋಣಿ ಗೆ ಡಿಕ್ಕಿ ಪ್ರಕರಣ: SDPI ಖಂಡನೆ -vishwanews24

ಕಾಪು ಅಕ್ರಮ ಮೀನುಗಾರಿಕೆ ನಡೆಸುತ್ತಿದ್ದ ದೋಣಿ ಸ್ಥಳೀಯ ನಾಡದೋಣಿ ಗೆ ಡಿಕ್ಕಿ ಪ್ರಕರಣ: ಎಸ್‌ ಡಿ ಪಿ ಐ ಖಂಡನೆ…

3 hours ago

ಕಾರ್ಕಳ : ಮಹಾಮಸ್ತಕಾಭಿಷೇಕಕ್ಕೆ 1.59 ಕೋಟಿ ರೂ. ಅನುದಾನ: ರಾಜ್ಯ ಸರ್ಕಾರಕ್ಕೆ ಉದಯ ಶೆಟ್ಟಿ ಮುನಿಯಾಲು ಧನ್ಯವಾದ ಸಲ್ಲಿಕೆ – vishwanews24

ಕಾರ್ಕಳ : ಮಹಾಮಸ್ತಕಾಭಿಷೇಕಕ್ಕೆ 1.59 ಕೋಟಿ ರೂಪಾಯಿ ಅನುದಾನ: ರಾಜ್ಯ ಸರ್ಕಾರಕ್ಕೆ ಉದಯ ಶೆಟ್ಟಿ ಮುನಿಯಾಲು ಧನ್ಯವಾದ ಸಲ್ಲಿಕೆ ಕಾರ್ಕಳದಲ್ಲಿ…

3 hours ago

ಉಡುಪಿ: ಮೀನುಗಾರಿಕ ದೋಣಿಗಳಿಗೆ ಅಗತ್ಯ ಪ್ರಮಾಣದ ಡೀಸೆಲ್ ಪೂರೈಕೆಗೆ  ಕೇಂದ್ರ ಸಚಿವರಿಗೆ ಮನವಿ – vishwanews24

ಉಡುಪಿ: ಮೀನುಗಾರಿಕ ದೋಣಿಗಳಿಗೆ ಅಗತ್ಯ ಪ್ರಮಾಣದ ಡೀಸೆಲ್ ಪೂರೈಕೆಗೆ  ಕೇಂದ್ರ ಸಚಿವರಿಗೆ ಮನವಿ ಉಡುಪಿ: ಮೀನುಗಾರಿಕ ದೋಣಿಗಳಿಗೆ ಅಗತ್ಯ ಪ್ರಮಾಣದ…

3 hours ago