ಮಂಗಳೂರು: ಕಂಬಳದ ಗದ್ದೆಯಲ್ಲಿ ಉಸೇನ್ ಬೋಲ್ಟ್ ದಾಖಲೆ ಮುರಿದ ಮೂಡಬಿದಿರೆಯ ಮೀಯಾರಿನ ಯುವಕ ಶ್ರೀನಿವಾಸಗೌಡ ಅವರಿಗೆ ಮಹೀಂದ್ರಾ ಗ್ರೂಪ್ ಅಧ್ಯಕ್ಷ ಆನಂದ್ ಮಹೀಂದ್ರಾ ತಮ್ಮ ಟ್ವೀಟ್ಟರ್ ಖಾತೆಯಲ್ಲಿ ಮೆಚ್ಚುಗೆಯನ್ನು ವ್ಯಕ್ತಪಡಿಸಿದ್ದಾರೆ.
ಈ ಕುರಿತು ಔಟ್ ಲುಕ್ ನಲ್ಲಿ ಪ್ರಕಟವಾದ ಶ್ರೀನಿವಾಸ ಗೌಡರ ಸಾಧನೆ ಕುರಿತ ಲೇಖನವನ್ನು ಟ್ವೀಟ್ಟರ್ ನಲ್ಲಿ ಹಂಚಿಕೊಂಡ ಆನಂದ್ ಮಹೀಂದ್ರಾ, ಒಮ್ಮೆ ಈ ವ್ಯಕ್ತಿಯ ಮೈಕಟ್ಟನ್ನು ಗಮನಿಸಿ, ಈತ ಅಸಾಧರಣ ಸಾಹಸ ಮಾಡಲು ಸಮರ್ಥನಾಗಿದ್ದಾನೆ.
ಈತನಿಗೆ ಕೇಂದ್ರ ಕ್ರೀಡಾ ಸಚಿವರಾದ ಕಿರಿಣ್ ರಿಜಿಜು 100 ಮೀ ಓಟಗಾರನಾಗಲು ಸಮರ್ಥ ತರಬೇತಿಯನ್ನು ನೀಡಲು ಅನುಕೂಲ ಕಲ್ಪಿಸಬೇಕು ಅಥವಾ ಓಲಂಪಿಕ್‌ನಲ್ಲಿ ಕಂಬಳವನ್ನು ಸೇರಿಸಬೇಕು. ಏನೇ ಆಗಲಿ ಶ್ರೀನಿವಾಸ ಗೌಡ ಅವರಿಗೆ ಚಿನ್ನದ ಪದಕಸಿಗಬೇಕು ಎಂದು ಟ್ವೀಟ್ ಮಾಡಿದ್ದರು.
ಫೆ. 1ರಂದು ಮಂಗಳೂರು ಸಮೀಪದ ಐಕಳ ಎಂಬಲ್ಲಿ ನಡೆದ ಕಂಬಳ ಕ್ರೀಡೆಯಲ್ಲಿ ಶ್ರೀನಿವಾಸ ಗೌಡ ಅವರು 142.50 ಮೀಟರ್ ನ ಕಂಬಳ ಕೋಣಗಳ ಟ್ರ್ಯಾಕ್ ನಲ್ಲಿ ಕೇವಲ 13.62 ಸೆಕೆಂಡ್ ಗಳಲ್ಲಿ ಕ್ರಮಿಸಿದ್ದಾರೆ. ಇದು ಕಂಬಳ ಕ್ರೀಡೆಯಲ್ಲಿ ಇದುವರೆಗಿನ ಅತ್ಯಂತ ವೇಗದ ದಾಖಲೆಯಾಗಿದ್ದು ಶ್ರೀನಿವಾಸ್ ಗೌಡ ಅವರನ್ನು ಉಸೇನ್ ಬೋಲ್ಟ್ ಜೊತೆಗೆ ಹೋಲಿಸಲಾಗಿದೆ.
ಈ ಬಾರಿ ದಸರಾ ಮಹೋತ್ಸವದಲ್ಲಿ ಅಂಬಾರಿ ಹೊತ್ತು ಸಾಗಲಿರುವ ದುಬಾರೆ ವೀರ ಪ್ರಶಾಂತ ಆನೆ ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು…
ಬೆಳ್ತಂಗಡಿ: ನಾವೂರಿನ ಆರೋಗ್ಯ ಕ್ಲಿನಿಕ್ಗೆ ಬೆಂಕಿ ಹಚ್ಚಿದ ಪ್ರಕರಣ; ಓರ್ವನ ಬಂಧನ, ಇಬ್ಬರು ವಶಕ್ಕೆ ಬೆಳ್ತಂಗಡಿ: ನಾವೂರು ಗ್ರಾಮದ ಸ್ವಾತಿ…
ಮಂಗಳೂರು: ನಿಯಮಬಾಹಿರವಾಗಿ ಶಾಲಾ ಮಕ್ಕಳ ಸಾಗಾಟ ; 30 ವಾಹನಗಳ ಮೇಲೆ ಕೇಸು ದಾಖಲು ಮಂಗಳೂರು: ಮಂಗಳೂರು ಪ್ರಾದೇಶಿಕ ಸಾರಿಗೆ…
ಕಾಪು: ಇಂದು ಉಚ್ಚಿಲ ಮಹಾಲಕ್ಷ್ಮಿ ದೇವಸ್ಥಾನಕ್ಕೆ ಡಿ.ಕೆ.ಶಿವಕುಮಾರ್ ಭೇಟಿ ಉಡುಪಿ: ಐದನೇ ವರ್ಷದ ಉಚ್ಚಿಲ ದಸರಾ ಲಲಿತ ಪಂಚಮಿಯ ಸಂಭ್ರಮ…
ಉಡುಪಿ ಉಚ್ಚಿಲ ದಸರಾ: ಅ.17ರಂದು ಮಹಾಲಕ್ಷ್ಮೀ ಬ್ಯಾಂಕ್ ವತಿಯಿಂದ ಚಿತ್ರಕಲೆ ಸ್ಪರ್ಧೆ : ಯಶ್ಪಾಲ್ ಸುವರ್ಣ ಉಡುಪಿ: ಉಚ್ಚಿಲ ಮಹಾಲಕ್ಷ್ಮೀ…
ಕೋಳಿಮರಿ ವಿತರಣೆ: ಉಡುಪಿ ತಾಲೂಕಿನ ಗ್ರಾಮೀಣ ರೈತ ಮಹಿಳೆಯರಿಗೆ ಅರ್ಜಿ ಆಹ್ವಾನ ಉಡುಪಿ: ಕರ್ನಾಟಕ ಸಹಕಾರ ಕುಕ್ಕುಟ ಮಹಾಮಂಡಳ ನಿಯಮಿತ…