Featured

ಮಂಗಳೂರು ಕಂಪೌಂಡ್ ಗೋಡೆಯೊಂದರಲ್ಲಿ  ಲಷ್ಕರ್ ಜಿಂದಾಬಾದ್ ಬರಹದ ಹಿನ್ನಲೆ : ದೇಶವಿರೋಧಿ ಗೋಡೆಬರಹ ಬರೆದವರ ಬಂಧನಕ್ಕೆ ಹಿಂದೂಪರ ಸಂಘಟನೆಗಳಿಂದ ಪ್ರತಿಭಟನೆ -Vishwanews24

ಮಂಗಳೂರು ಕಂಪೌಂಡ್ ಗೋಡೆಯೊಂದರಲ್ಲಿ  ಲಷ್ಕರ್ ‘ಜಿಂದಾಬಾದ್” ಬರಹದ ಹಿನ್ನಲೆ : ದೇಶವಿರೋಧಿ ಗೋಡೆಬರಹ ಬರೆದವರ ಬಂಧನಕ್ಕೆ ಹಿಂದೂಪರ ಸಂಘಟನೆಗಳಿಂದ ಪ್ರತಿಭಟನೆ -Vishwanews24

ಮಂಗಳೂರಿನಲ್ಲಿ ಸಂಘ-ಸಂಸ್ಥೆಗಳು ಗಟ್ಟಿಯಾಗಿದೆ ನಮ್ಮನ್ನು ಕೆಣಕಲು ಬರಬೇಡಿ..

ಉಗ್ರಗಾಮಿಗಳನ್ನು ಮಾತ್ರವಲ್ಲದೆ ಉಗ್ರರಿಗೆ ಬೆಂಬಲ ಕೊಡುವುವರನ್ನೂ ಬಂಧಿಸಬೇಕು..

ದಕ್ಷಿಣ ಕನ್ನಡ: ಮಂಗಳೂರಿನ ನಗರದ ಅಪಾರ್ಟ್ಮೆಂಟ್ ಕಂಪೌಂಡ್ ಗೋಡೆಯೊಂದರಲ್ಲಿ ಕಾಣಿಸಿಕೊಂಡ “ಲಷ್ಕರ್ ಜಿಂದಾಬಾದ್ ಬರಹದ ಹಿನ್ನಲೆ, ಇಂದು ಕದ್ರಿ ಮಲ್ಲಿಕಟ್ಟೆಯಲ್ಲಿ ಹಿಂದೂಪರ ಸಂಘಟನೆಗಳಿಂದ ಪ್ರತಿಭಟನೆ ನಡೆಯಿತು.

ವಿಶ್ವಹಿಂದೂ ಪರಿಷತ್, ಬಜರಂಗದಳದಿಂದ ಪ್ರತಿಭಟನೆ ನಡೆದಿದ್ದು, ದೇಶವಿರೋಧಿ ಗೋಡೆಬರಹ ಬರೆದವರ ಬಂಧನಕ್ಕೆ ಸಂಘಟನೆಯ ಪ್ರಮುಖರು ಈ ವೆಳೆ ಆಗ್ರಹಿಸಿದ್ದಾರೆ. ಮಂಗಳೂರಿನಲ್ಲಿ ಸಂಘ-ಸಂಸ್ಥೆಗಳು ಗಟ್ಟಿಯಾಗಿದೆ ನಮ್ಮನ್ನು ಕೆಣಕಲು ಬರಬೇಡಿ. ಮಂಗಳೂರಿನಲ್ಲಿ ಇಂತಹ ಆಟ ನಡೆಯೋದಿಲ್ಲ. ಉಗ್ರಗಾಮಿಗಳನ್ನು ಮಾತ್ರವಲ್ಲದೆ ಉಗ್ರರಿಗೆ ಬೆಂಬಲ ಕೊಡುವುವರನ್ನೂ ಬಂಧಿಸಬೇಕು. ಈ ದೇಶಕ್ಕಾಗಿ ಬಜರಂಗದಳ ಸಂಘಟನೆ ಪ್ರಾಣ ಕೊಡಲೂ ಸಿದ್ದವಾಗಿದೆ. ಪೋಲೀಸರು ತಕ್ಷಣ ಈ ರೀತಿ ಮಾಡಿದವರನ್ನು ಬಂಧಿಸಬೇಕು. ಇಲ್ಲವಾದಲ್ಲಿ ಪ್ರತಿ ತಾಲೂಕಿನಲ್ಲೂ ಪ್ರತಿಭಟನೆ ನಡೆಸುತ್ತೇವೆ ಎಂದು ಪ್ರತಿಭಟನಾಕಾರರು ಎಚ್ಚರಿಕೆಯನ್ನು ರವಾನಿಸಿದ್ದಾರೆ.

ಮಂಗಳೂರಿನ ಸರ್ಕ್ಯೂಟ್ ಹೌಸ್ ರಸ್ತೆ ಬಳಿಯ ಖಾಸಗಿ ಅಪಾರ್ಟ್ಮೆಂಟ್ ಗೋಡೆಯೊಂದರಲ್ಲಿ, “ನಮ್ಮನ್ನು ವಿದ್ವಂಸಕ ಕೃತ್ಯ ನಡೆಸಲು ಉತ್ತೇಜಿಸಲು ಬರಬೇಡಿ ಲಷ್ಕರ್ ಇ ತೊಯಿಬಾ ಮತ್ತು ತಾಲಿಬಾನ್‌ಗಳಿಗೆ ಸಂಘಿಗಳನ್ನು ಯಾವ ರೀತಿ ನೋಡಿಕೊಳ್ಳಬೇಕು ಎನ್ನುವುದು ತಿಳಿದಿದೆ” ಎಂದು ಬರೆಯಲಾಗಿತ್ತು. ಈ ಬರಹಗಳನ್ನು ಸಮಾಜಘಾತುಕರು, ಮಧ್ಯರಾತ್ರಿ ಬರೆದಿರಬಹುದು ಎಂದು ಶಂಕಿಸಲಾಗಿದ್ದು, ಘಟನೆಯು ತೀರ್ವ ಸ್ವರೂಪ ಪಡೆಯುವದನ್ನು ತಪ್ಪಿಸಲು ಕದ್ರಿ ಪೊಲೀಸರು ಗೋಡೆ ಬರಹಗಳನ್ನು ಅಳಿಸಿ ಹಾಕಿ ತನಿಖೆ ನಡೆಸುತ್ತಿದ್ದಾರೆ ಎನ್ನಲಾಗಿದೆ.

Vishwa News 24

Recent Posts

ಅಡ್ಡಮತದಾನ ಮಾಡಿಲ್ಲವೆಂದು ಧರ್ಮಸ್ಥಳದಲ್ಲಿ ಬಿಜೆಪಿ ಹೆಚ್.ಕೆ ಸುರೇಶ್ ಆಣೆ ಪ್ರಮಾಣ -vishwanews24

ಅಡ್ಡಮತದಾನ ಮಾಡಿಲ್ಲವೆಂದು ಧರ್ಮಸ್ಥಳದಲ್ಲಿ ಬಿಜೆಪಿ ಹೆಚ್.ಕೆ ಸುರೇಶ್ ಆಣೆ ಪ್ರಮಾಣ.. ನಾನು ಯಾವುದೇ ತಪ್ಪು ಮಾಡಿಲ್ಲ, ಅಡ್ಡಮತದಾನದಲ್ಲಿ ಭಾಗಿಯಾಗಿಲ್ಲ.. ನಾನು…

15 hours ago

ಉಡುಪಿ ಜಿಲ್ಲೆಯ ನಗರ ಪೊಲೀಸ್ ಠಾಣೆಯ ಶಿವಕುಮಾರ್ ಹೆಚ್ ಎಂ ಅವರಿಗೆ 2026 ನೇ ಸಾಲಿನ ಡಿಜಿ ಪದಕ -vishwanews24

ಉಡುಪಿ ಜಿಲ್ಲೆಯ ನಗರ ಪೊಲೀಸ್ ಠಾಣೆಯ ಶಿವಕುಮಾರ್ ಹೆಚ್ ಎಂ ಅವರಿಗೆ 2026 ನೇ ಸಾಲಿನ ಡಿಜಿ ಪದಕ ಉಡುಪಿ:…

15 hours ago

ಜುಲೈ 1 ರಿಂದ ಕಮರ್ಶಿಯಲ್, ಇಂಡಸ್ಟ್ರಿಯಲ್ ಗ್ಯಾಸ್ ಸಿಲಿಂಡರ್ ದರ ಏರಿಕೆ -vishwanews24

ಜುಲೈ 1 ರಿಂದ ಕಮರ್ಶಿಯಲ್, ಇಂಡಸ್ಟ್ರಿಯಲ್ ಗ್ಯಾಸ್ ಸಿಲಿಂಡರ್ ದರ ಏರಿಕೆ ನವದೆಹಲಿ: ಜುಲೈ 1 ರಿಂದ ಕಮರ್ಶಿಯಲ್ ಹಾಗೂ…

16 hours ago

ರಾಮ ಮಂದಿರ ದೇಣಿಗೆ ಹಗರಣ ಮುಚ್ಚಿ ಹಾಕಲು ಬಿಜೆಪಿ ಪ್ರಯತ್ನ: ಪ್ರಿಯಾಂಕ್ ಖರ್ಗೆ ಆರೋಪ -vishwanews24

ರಾಮ ಮಂದಿರ ದೇಣಿಗೆ ಹಗರಣ ಮುಚ್ಚಿ ಹಾಕಲು ಬಿಜೆಪಿ ಪ್ರಯತ್ನ: ಪ್ರಿಯಾಂಕ್ ಖರ್ಗೆ ಆರೋಪ ಬೆಂಗಳೂರು: ರಾಮ ಮಂದಿರ ದೇಣಿಗೆ…

16 hours ago

ನಂದಿನಿ ಮಿಲ್ಕ್ ಪಾರ್ಲರ್‌ನಲ್ಲಿ  ಅಗ್ನಿ ಅವಘಡ : ಶಾಕ್‌ನಿಂದ ಮಾಲೀಕ ಹೃದಯಾಘಾತಕ್ಕೆ ಬಲಿ -vishwanews24

ನಂದಿನಿ ಮಿಲ್ಕ್ ಪಾರ್ಲರ್‌ನಲ್ಲಿ  ಅಗ್ನಿ ಅವಘಡ : ಶಾಕ್‌ನಿಂದ ಮಾಲೀಕ ಹೃದಯಾಘಾತಕ್ಕೆ ಬಲಿ ಚಿಕ್ಕಬಳ್ಳಾಪುರ: ನಗರದ ಪಶುವೈದ್ಯ ಇಲಾಖೆ ಕಚೇರಿ ಸಮೀಪ…

16 hours ago

ಮಂಗಳೂರು: ಮೀನುಗಾರಿಕಾ ಬೋಟ್ ಮುಳುಗಡೆ; ಆರು ಮಂದಿ ಮೀನುಗಾರರ ರಕ್ಷಣೆ -vishwanews24

ಮಂಗಳೂರು: ಮೀನುಗಾರಿಕಾ ಬೋಟ್ ಮುಳುಗಡೆ; ಆರು ಮಂದಿ ಮೀನುಗಾರರ ರಕ್ಷಣೆ ಮಂಗಳೂರು : ಮಂಗಳೂರಿನ ಬಳಿ ಅರಬ್ಬಿ ಸಮುದ್ರದಲ್ಲಿ ಪ್ರಕ್ಷುಬ್ಧ…

16 hours ago