ಮಂಗಳೂರು : ಓಮಿಕ್ರಾನ್ ಆತಂಕದ ಹಿನ್ನಲೆ ನಾಳೆಯಿಂದ ರಾಜ್ಯದಲ್ಲಿ ರಾತ್ರಿ ಕರ್ಪ್ಯೂ ಜಾರಿಗೊಳಿಸಿರುವ ರಾಜ್ಯ ಸರಕಾರದ ಆದೇಶ ಕರಾವಳಿಯಲ್ಲಿ ನಡೆಯುವ ಯಕ್ಷಗಾನ ಹಾಗೂ ಕಂಬಳಕ್ಕೂ ಅನ್ವಯಿಸಲಿದೆ ಎಂದು ದಕ್ಷಿಣಕನ್ನಡ ಜಿಲ್ಲಾಧಿಕಾರಿ ಸೂಚಿಸಿದ್ದಾರೆ.
ನೈಟ್ ಕರ್ಫ್ಯೂ ವಿಚಾರದಲ್ಲಿ ರಾಜ್ಯ ಸರ್ಕಾರದ ಆದೇಶವನ್ನು ಕಟ್ಟುನಿಟ್ಟಾಗಿ ಪಾಲನೆ ಮಾಡಲಾಗುವುದು. ಕಂಬಳ, ಯಕ್ಷಗಾನ ಸೇರಿದಂತೆ ರಾತ್ರಿ ನಡೆಯುವಂತಹ ಕಾರ್ಯಕ್ರಮಗಳನ್ನು 10 ಗಂಟೆಯೊಳಗೆ ಮುಗಿಸಬೇಕು, ಇದರಲ್ಲಿ ಯಾವುದೇ ರಿಯಾಯಿತಿ ಇರುವುದಿಲ್ಲ ಎಂದು ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ. ಸ್ಪಷ್ಟಪಡಿಸಿದ್ದಾರೆ.
ಸೋಮವಾರ ಈ ಕುರಿತು ಸಭೆ ನಡೆಸಿ ಆಯೋಜಕರ ಜತೆಗೆ ಚರ್ಚಿಸಲಾಗುವುದು. ನೈಟ್ ಕರ್ಫ್ಯೂ ಅವಧಿ ಆರಂಭಕ್ಕೂ ಮೊದಲೇ ಎಲ್ಲ ಕಾರ್ಯಕ್ರಮ ಮುಗಿಸುವಂತೆ ಸಮಬಂಧಪಟ್ಟವರಿಗೆ ಸೂಚನೆ ನೀಡಲಾಗುವುದು. ಓಮೈಕ್ರಾನ್ ಹೆಚ್ಚುತ್ತಿರುವ ಕಾರಣ ಸರ್ಕಾರವು ಕಟ್ಟೆಚ್ಚರದ ನಿಯಾಮಾವಳಿಗಳನ್ನು ಜಾರಿಗೆ ತಂದಿದ್ದು, ಯಾವುದೇ ಕಾರಣಕ್ಕೆ ನೈಟ್ ಕರ್ಫ್ಯೂ ಅವಧಿಯಲ್ಲಿ ನಿಯಮಗಳನ್ನು ಸಡಿಲಗೊಳಿಸಲು ಆಗುವುದಿಲ್ಲ ಎಂದು ತಿಳಿಸಿದ್ದಾರೆ.
ರಾತ್ರಿ ವೇಳೆ ನಡೆಯುವಂತಹ ಯಕ್ಷಗಾನ, ಕಂಬಳಗಳನ್ನು ಬೇಗನೆ ಆರಂಭಿಸಿ, ನೈಟ್ ಕರ್ಫ್ಯೂ ಅವಧಿ ಆರಂಭವಾಗುವುದರೊಳಗೆ ಮುಗಿಸಬೇಕು. ನೈಟ್ ಕರ್ಫ್ಯೂ ನಿಯಮಗಳು ಇಡೀ ರಾಜ್ಯಕ್ಕೆ ಅನ್ವಯ ಆಗುವುದರಿಂದ, ನಿಯಮ ಸಡಿಲಗೊಳಿಸುವ ನಿರ್ಧಾರವೂ ಸರ್ಕಾರದ ಮಟ್ಟದಲ್ಲಿಯೇ ಆಗಬೇಕಾಗುತ್ತದೆ’ ಎಂದು ಜಿಲ್ಲಾಧಿಕಾರಿ ತಿಳಿಸಿದರು.
ಮಂಗಳೂರಿನಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಅಧಿಕಾರಿಗಳ ಸಮಿತಿ ರಚನೆ: ಸಚಿವ ಯು.ಟಿ. ಖಾದರ್ ಮಂಗಳೂರು: ಮಂಗಳೂರಿನಲ್ಲಿ ಹೈಕೋರ್ಟ್ ಪೀಠ ಸ್ಥಾಪನೆ…
ಮಂಗಳೂರು: ದಸರಾ ರಜೆ ವೇಳೆ ಸೆಮಿಸ್ಟರ್ ಪರೀಕ್ಷೆ: ಖಾಸಗಿ ಕಾಲೇಜು ವಿರುದ್ಧ ವಿದ್ಯಾರ್ಥಿಗಳ ಪ್ರತಿಭಟನೆ ಮಂಗಳೂರು: ದಸರಾ ಸಂಭ್ರಮದ ನಡುವೆಯೇ…
ಮಂಗಳೂರು : ದಸರಾ ಉದ್ಘಾಟನೆಗೆ ಸಿಎಂ ಗೈರು ; ಕರಾವಳಿ ತೀವ್ರ ಜನರಲ್ಲಿ ಅಸಮಾಧಾನ : ಅಕ್ಷಿತ್ ಸುವರ್ಣ ಮಂಗಳೂರು:…
ಮಂಗಳೂರು: ಅಕ್ರಮ ಸಂಬಂಧದ ಶಂಕೆ ; ಪತ್ನಿಯನ್ನು ಚೂರಿಯಿಂದ ಇರಿದು ಕೊಂದ ಪತಿ ಮಂಗಳೂರು: ಅಕ್ರಮ ಸಂಬಂಧದ ಶಂಕೆಯ ಹಿನ್ನೆಲೆ…
ಮಂಗಳೂರು: ರಾಷ್ಟ್ರೀಯ ಹೆದ್ದಾರಿಗಳಲ್ಲಿ ಅಕ್ರಮ ಚಟುವಟಿಕೆ ನಿಯಂತ್ರಣಕ್ಕೆ ಜಿಲ್ಲಾಧಿಕಾರಿ ಸೂಚನೆ ಮಂಗಳೂರು: ರಾತ್ರಿ ವೇಳೆ ರಾಷ್ಟ್ರೀಯ ಹೆದ್ದಾರಿಗಳಲ್ಲಿ ಮಂಗಳಮುಖಿಯರು ಅಕ್ರಮ…
ಉಡುಪಿ ನಗರಸಭೆಯ ಕಾಮಗಾರಿಗಳಿಗೆ ಚುರುಕು ಮುಟ್ಟಿಸಲು ಜಿಲ್ಲಾಧಿಕಾರಿಗೆ ಬಿಜೆಪಿ ಮನವಿ ಉಡುಪಿ: ಉಡುಪಿ ನಗರಸಭೆಯಲ್ಲಿ ಬಾಕಿ ಉಳಿದಿರುವ ಕಾಮಗಾರಿಗಳನ್ನು ತಕ್ಷಣ…