Featured

ಮಂಗಳೂರು : ಕಂಬಳ ಯಕ್ಷಗಾನಕ್ಕೂ ನೈಟ್‌ ಕರ್ಫ್ಯೂ ಅನ್ವಯ :  ಜಿಲ್ಲಾಧಿಕಾರಿ – Vishwanews24

ಮಂಗಳೂರು : ಕಂಬಳ ಯಕ್ಷಗಾನಕ್ಕೂ ನೈಟ್‌ ಕರ್ಫ್ಯೂ ಅನ್ವಯ ..

ರಾತ್ರಿ ನಡೆಯುವಂತಹ ಕಾರ್ಯಕ್ರಮಗಳನ್ನು 10 ಗಂಟೆಯೊಳಗೆ ಮುಗಿಸಬೇಕು..

ಇದರಲ್ಲಿ ಯಾವುದೇ ರಿಯಾಯಿತಿ ಇರುವುದಿಲ್ಲ..

ಜಿಲ್ಲಾಧಿಕಾರಿ ಸೂಚನೆ – Vishwanews24

ಮಂಗಳೂರು : ಓಮಿಕ್ರಾನ್ ಆತಂಕದ ಹಿನ್ನಲೆ ನಾಳೆಯಿಂದ ರಾಜ್ಯದಲ್ಲಿ ರಾತ್ರಿ ಕರ್ಪ್ಯೂ ಜಾರಿಗೊಳಿಸಿರುವ ರಾಜ್ಯ ಸರಕಾರದ ಆದೇಶ ಕರಾವಳಿಯಲ್ಲಿ ನಡೆಯುವ ಯಕ್ಷಗಾನ ಹಾಗೂ ಕಂಬಳಕ್ಕೂ ಅನ್ವಯಿಸಲಿದೆ ಎಂದು ದಕ್ಷಿಣಕನ್ನಡ ಜಿಲ್ಲಾಧಿಕಾರಿ ಸೂಚಿಸಿದ್ದಾರೆ.

ನೈಟ್‌ ಕರ್ಫ್ಯೂ ವಿಚಾರದಲ್ಲಿ ರಾಜ್ಯ ಸರ್ಕಾರದ ಆದೇಶವನ್ನು ಕಟ್ಟುನಿಟ್ಟಾಗಿ ಪಾಲನೆ ಮಾಡಲಾಗುವುದು. ಕಂಬಳ, ಯಕ್ಷಗಾನ ಸೇರಿದಂತೆ ರಾತ್ರಿ ನಡೆಯುವಂತಹ ಕಾರ್ಯಕ್ರಮಗಳನ್ನು 10 ಗಂಟೆಯೊಳಗೆ ಮುಗಿಸಬೇಕು, ಇದರಲ್ಲಿ ಯಾವುದೇ ರಿಯಾಯಿತಿ ಇರುವುದಿಲ್ಲ ಎಂದು ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ. ಸ್ಪಷ್ಟಪಡಿಸಿದ್ದಾರೆ.

ಸೋಮವಾರ ಈ ಕುರಿತು ಸಭೆ ನಡೆಸಿ ಆಯೋಜಕರ ಜತೆಗೆ ಚರ್ಚಿಸಲಾಗುವುದು. ನೈಟ್‌ ಕರ್ಫ್ಯೂ ಅವಧಿ ಆರಂಭಕ್ಕೂ ಮೊದಲೇ ಎಲ್ಲ ಕಾರ್ಯಕ್ರಮ ಮುಗಿಸುವಂತೆ ಸಮಬಂಧಪಟ್ಟವರಿಗೆ ಸೂಚನೆ ನೀಡಲಾಗುವುದು. ಓಮೈಕ್ರಾನ್‌ ಹೆಚ್ಚುತ್ತಿರುವ ಕಾರಣ ಸರ್ಕಾರವು ಕಟ್ಟೆಚ್ಚರದ ನಿಯಾಮಾವಳಿಗಳನ್ನು ಜಾರಿಗೆ ತಂದಿದ್ದು, ಯಾವುದೇ ಕಾರಣಕ್ಕೆ ನೈಟ್‌ ಕರ್ಫ್ಯೂ ಅವಧಿಯಲ್ಲಿ ನಿಯಮಗಳನ್ನು ಸಡಿಲಗೊಳಿಸಲು ಆಗುವುದಿಲ್ಲ ಎಂದು ತಿಳಿಸಿದ್ದಾರೆ.

ರಾತ್ರಿ ವೇಳೆ ನಡೆಯುವಂತಹ ಯಕ್ಷಗಾನ, ಕಂಬಳಗಳನ್ನು ಬೇಗನೆ ಆರಂಭಿಸಿ, ನೈಟ್‌ ಕರ್ಫ್ಯೂ ಅವಧಿ ಆರಂಭವಾಗುವುದರೊಳಗೆ ಮುಗಿಸಬೇಕು. ನೈಟ್‌ ಕರ್ಫ್ಯೂ ನಿಯಮಗಳು ಇಡೀ ರಾಜ್ಯಕ್ಕೆ ಅನ್ವಯ ಆಗುವುದರಿಂದ, ನಿಯಮ ಸಡಿಲಗೊಳಿಸುವ ನಿರ್ಧಾರವೂ ಸರ್ಕಾರದ ಮಟ್ಟದಲ್ಲಿಯೇ ಆಗಬೇಕಾಗುತ್ತದೆ’ ಎಂದು ಜಿಲ್ಲಾಧಿಕಾರಿ ತಿಳಿಸಿದರು.

 

Vishwa News 24

Recent Posts

ಮಳೆಯ ಅಬ್ಬರ : ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಜು.8 (ನಾಳೆ ) ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ -vishwanews24

ಮಳೆಯ ಅಬ್ಬರ : ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಜು.8 (ನಾಳೆ ) ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಮಂಗಳೂರು: ಕರಾವಳಿ ಜಿಲ್ಲೆ…

5 hours ago

ಕುಂದಾಪುರ : ತ್ರಾಸಿಯಲ್ಲಿ ರಸ್ತೆ ಅಪಘಾತ: ಮತ್ತೊಬ್ಬ ಸವಾರ ಚಿಕಿತ್ಸೆ ಫಲಕಾರಿಯಾಗದೇ ಮೃತ್ಯು – vishwanews24

ಕುಂದಾಪುರ : ತ್ರಾಸಿಯಲ್ಲಿ ರಸ್ತೆ ಅಪಘಾತ: ಮತ್ತೊಬ್ಬ ಸವಾರ ಚಿಕಿತ್ಸೆ ಫಲಕಾರಿಯಾಗದೇ ಮೃತ್ಯು ಕುಂದಾಪುರ: ಎರಡು ದ್ವಿಚಕ್ರ ವಾಹನಗಳ ನಡುವೆ ಸೋಮವಾರ…

11 hours ago

ಕೃಷಿ ಸಾಲ‌ ಮನ್ನಾ ಮಾಡುವ ಬಗ್ಗೆ ಪರಿಶೀಲನೆ ಮಾಡುವೆ : ಸಿಎಂ ಡಿಕೆಶಿ – vishwanews24

ಕೃಷಿ ಸಾಲ‌ ಮನ್ನಾ ಮಾಡುವ ಬಗ್ಗೆ ಪರಿಶೀಲನೆ ಮಾಡುವೆ : ಸಿಎಂ ಡಿಕೆಶಿ ಕಲಬುರಗಿ: ಕೃಷಿ ಸಾಲ ಮನ್ನಾ ಮಾಡುವ…

13 hours ago

ಮಂಗಳೂರು: ಯುವತಿ ನಾಪತ್ತೆ ; ಪೋಲಿಸರಿಂದ ಪತ್ತೆಗೆ ಮನವಿ – vishwanews24

ಮಂಗಳೂರು: ಯುವತಿ ನಾಪತ್ತೆ: ಪೋಲಿಸರಿಂದ ಪತ್ತೆಗೆ ಮನವಿ ಮಂಗಳೂರು: ಉರ್ವ ಅಶೋಕ ನಗರದ ಮೆಡ್ ಕ್ವಿಸ್ಟ್ ಲ್ಯಾಬ್ನಲ್ಲಿ ಲ್ಯಾಬ್ ಟೆಕ್ನಿಷಿಯನ್…

13 hours ago

ಕಟಪಾಡಿಯಿಂದ ಕಳವಾದ ಆಟೋರಿಕ್ಷಾ ಬೆಳ್ತಂಗಡಿಯಲ್ಲಿ ಪತ್ತೆ – vishwanews24

ಕಟಪಾಡಿಯಿಂದ ಕಳವಾದ ಆಟೋರಿಕ್ಷಾ ಬೆಳ್ತಂಗಡಿಯಲ್ಲಿ ಪತ್ತೆ ಬೆಳ್ತಂಗಡಿ : ಕಟಪಾಡಿಯಿಂದ ಕಳವಾದ ಆಟೋರಿಕ್ಷಾವೊಂದು ಸೋಮವಾರ ಬೆಳ್ತಂಗಡಿ ಪಟ್ಟಣದ ಮೂರು ಮಾರ್ಗದಲ್ಲಿ…

13 hours ago

ಮುಂಬೈ : ಭಾರೀ ಮಳೆ – ಸಂಪೂರ್ಣ ಅಸ್ತವ್ಯಸ್ತ ; 43 ರೈಲು ಸಂಚಾರ ರದ್ದು – vishwanews24

ಮುಂಬೈ : ಭಾರೀ ಮಳೆ - ಸಂಪೂರ್ಣ ಅಸ್ತವ್ಯಸ್ತ ; 43 ರೈಲು ಸಂಚಾರ ರದ್ದು ಮುಂಬೈ: ಕಳೆದ ಮೂರು…

13 hours ago