Featured

ಮಂಗಳೂರು: ಕಟ್ಟಡದ 12ನೇ ಮಹಡಿಯಿಂದ ಜಿಗಿದು ವಿದ್ಯಾರ್ಥಿ ಆತ್ಮಹತ್ಯೆ – vishwanews24

ಮಂಗಳೂರು: ಕಟ್ಟಡದ 12ನೇ ಮಹಡಿಯಿಂದ ಜಿಗಿದು ವಿದ್ಯಾರ್ಥಿ ಆತ್ಮಹತ್ಯೆ

ಮಂಗಳೂರು: ನಗರದ ಅತ್ತಾವರದಲ್ಲಿರುವ ಕಾಸ ಗ್ರ್ಯಾಂಡ್ ಕಟ್ಟಡದಲ್ಲಿ 12ನೇ ಮಹಡಿಯಿಂದ ಜಿಗಿದು ವಿದ್ಯಾರ್ಥಿಯೊಬ್ಬ ಆತ್ಮಹತ್ಯೆ ಮಾಡಿಕೊಂಡ ಘಟನೆ ಸೋಮವಾರ ನಡೆದಿದೆ.

ಮಾಹಿತಿಯ ಪ್ರಕಾರ, ಖಾಸಗಿ ಕಾಲೇಜಿನ ವಿದ್ಯಾರ್ಥಿಯಾಗಿರುವ ಸಾರ್ಥಕ್ ಎಂಬಾತ ಅತ್ತಾವರದ ಕಾಸ ಗ್ರ್ಯಾಂಡ್ ಕಟ್ಟಡದಲ್ಲಿರುವ ತನ್ನ ಗೆಳೆಯನನ್ನು ಭೇಟಿಯಾಗಲು ಬಂದಿದ್ದಾನೆ. ಕಟ್ಟಡದ ಭದ್ರತಾ ಸಿಬ್ಬಂದಿಯ ಬಳಿ ಸಹಿ ಮಾಡಿ 12ನೇ ಮಹಡಿಗೆ ತೆರಳಿದ್ದಾನೆ ಎನ್ನಲಾಗಿದೆ.

ಅಲ್ಲಿಗೆ ತೆರಳಿದ ನಂತರ ತನ್ನ ಮೊಬೈಲ್ ಫೋನ್ ಅನ್ನು ಕೆಳಗೆ ಇಟ್ಟು, ಮೇಲ್ಮಹಡಿಯಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ತಿಳಿದುಬಂದಿದೆ.

ಘಟನೆಯ ಮಾಹಿತಿ ತಿಳಿದ ತಕ್ಷಣ ಪಾಂಡೇಶ್ವರ ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದ್ದಾರೆ. ಆತ್ಮಹತ್ಯೆಗೆ ನಿಖರ ಕಾರಣ ಇನ್ನಷ್ಟೇ ತಿಳಿದು ಬರಬೇಕಿದ್ದು, ಪ್ರಕರಣದ ಕುರಿತು ತನಿಖೆ ಮುಂದುವರಿದಿದೆ.

 

Vishwa News 24

Recent Posts

ಉಡುಪಿ: ಸಂತೆಕಟ್ಟೆ ಅಂಡರ್‌ಪಾಸ್‌ನ ಮೇಲ್ಸೇತುವೆ ವಾಹನ ಸಂಚಾರಕ್ಕೆ ಮುಕ್ತ ; ಶೀಘ್ರವೇ ಅಧಿಕೃತ ಉದ್ಘಾಟನೆ: ಸಂಸದ ಕೋಟ ಶ್ರೀನಿವಾಸ ಪೂಜಾರಿ – vishwanews24

ಉಡುಪಿ: ಸಂತೆಕಟ್ಟೆ ಅಂಡರ್‌ಪಾಸ್‌ನ ಮೇಲ್ಸೇತುವೆ ವಾಹನ ಸಂಚಾರಕ್ಕೆ ಮುಕ್ತ ; ಶೀಘ್ರವೇ ಅಧಿಕೃತ ಉದ್ಘಾಟನೆ: ಸಂಸದ ಕೋಟ ಶ್ರೀನಿವಾಸ ಪೂಜಾರಿ…

14 minutes ago

ಈಸ್ಟರ್ ಪ್ರಯುಕ್ತ ಯಶವಂತಪುರ-ಮಡಗಾಂವ್ ಮಧ್ಯೆ ವಿಶೇಷ ರೈಲು – vishwanews24

ಈಸ್ಟರ್ ಪ್ರಯುಕ್ತ ಯಶವಂತಪುರ-ಮಡಗಾಂವ್ ಮಧ್ಯೆ ವಿಶೇಷ ರೈಲು ಉಡುಪಿ: ಮುಂಬರುವ ಗುಡ್‌ಫ್ರೈಡೇ ಹಾಗೂ ಈಸ್ಟರ್ ಪ್ರಯುಕ್ತ ಜನರ ವಿಶೇಷ ಒತ್ತಡವನ್ನು…

33 minutes ago

ಉಡುಪಿ: ಏ.1ರಂದು ಪಿಂಕ್​ ಸೂಪರ್​ ಮೂನ್​ ವೀಕ್ಷಣೆಗೆ ಅವಕಾಶ – vishwanews24

ಉಡುಪಿ: ಏ.1ರಂದು ಪಿಂಕ್​ ಸೂಪರ್​ ಮೂನ್​ ವೀಕ್ಷಣೆಗೆ ಅವಕಾಶ ಉಡುಪಿ: ಆಕಾಶಕಾಯದಲ್ಲಿ ದಿನವೂ ಬೆಳ್ಳಗೆ ಗೋಚರಿಸುವ ಚಂದ್ರ ಏ.1ರಂದು ಸಂಜೆ…

48 minutes ago

ಜನಗಣತಿ: ಆನ್ ಲೈನ್ ನಲ್ಲಿ ಮನೆ ಲಿಂಕ್ ಮಾಡಲು ತಹಸೀಲ್ದಾರ್ ಕರೆ – vishwanews24

ಜನಗಣತಿ: ಆನ್ ಲೈನ್ ನಲ್ಲಿ ಮನೆ ಲಿಂಕ್ ಮಾಡಲು ತಹಸೀಲ್ದಾರ್ ಕರೆ ಮಂಗಳೂರು: ಭಾರತದ ರಿಜಿಸ್ಟ್ರಾರ್ ಮತ್ತು ಜನಗಣತಿ ಆಯುಕ್ತರ…

53 minutes ago

ಮಂಗಳೂರು :  2025ನೇ ಸಾಲಿನ ಕೊಂಕಣಿ ಸಾಹಿತ್ಯ ಅಕಾಡೆಮಿ ಗೌರವ ಪ್ರಶಸ್ತಿ ಹಾಗೂ ಪುಸ್ತಕ ಪುರಸ್ಕಾರ – vishwanews24

ಮಂಗಳೂರು :  2025ನೇ ಸಾಲಿನ ಕೊಂಕಣಿ ಸಾಹಿತ್ಯ ಅಕಾಡೆಮಿ ಗೌರವ ಪ್ರಶಸ್ತಿ ಹಾಗೂ ಪುಸ್ತಕ ಪುರಸ್ಕಾರ ಮಂಗಳೂರು : ಕರ್ನಾಟಕ…

60 minutes ago

ಮಹಿಳೆಯರನ್ನು ಸಬಲೀಕರಣ ಮಾಡುವ ಕೆಲಸವನ್ನ ನಮ್ಮ ಸರಕಾರ ಪ್ರಾಮಾಣಿಕವಾಗಿ ಮಾಡುತ್ತಿದೆ : ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ – vishwanews24

ಗ್ಯಾರಂಟಿ ಯೋಜನೆಗಳಿಂದ ಮಹಿಳಾ ಸಬಲೀಕರಣ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಬೆಂಗಳೂರು: ಮಹಿಳೆಯರನ್ನು ಸಬಲೀಕರಣ ಮಾಡುವ ಕೆಲಸವನ್ನು ನಮ್ಮ ಸರಕಾರ ಪ್ರಾಮಾಣಿಕವಾಗಿ…

21 hours ago