ಮಂಗಳೂರು: ರಾಜ್ಯ ಆಂತರಿಕ ಭದ್ರತಾ ವಿಭಾಗ ಮತ್ತು ಮಂಗಳೂರು ಪೊಲೀಸರು ಕಾರ್ಯಾಚರಣೆ ನಡೆಸಿ ಮುಕ್ಕ ಗ್ರಾಮದಲ್ಲಿ ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾದೇಶದ ಪ್ರಜೆಯನ್ನು ಬಂಧಿಸಿದ್ದಾರೆ. ಬಾಂಗ್ಲಾದೇಶದ ರಾಜಶಾಹಿ ಜಿಲ್ಲೆಯ ನಿವಾಸಿ ಅನರುಲ್ ಶೇಖ್ (25)ನನ್ನು ಬಂಧಿಸಲಾಗಿದೆ.
ಅನರುಲ್ ಶೇಖ್ ಮೂರು ವರ್ಷಗಳ ಹಿಂದೆ ಅಂತಾರಾಷ್ಟ್ರಿಯ ಗಡಿರೇಖೆ ಲಾಲ್ಗೋಲ್ ಮೂಲಕ ಅಕ್ರಮವಾಗಿ ಭಾರತದೊಳಗೆ ಪ್ರವೇಶಿಸಿದ್ದನು. ಬಳಿಕ, ಪಶ್ಚಿಮ ಬಂಗಾಳದ ಮುರ್ಷಿದಾಬಾದ್ನಿಂದ ಉಡುಪಿಗೆ ಬಂದಿದ್ದನು. ಇಲ್ಲಿಂದ, ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ಹೊರವಲಯದ ಮುಕ್ಕ ಗ್ರಾಮದ ರೋಹನ್ ಎಸ್ಟೇಟ್ನಲ್ಲಿ ಅನರುಲ್ ಶೇಖ್ ಕಟ್ಟಡ ಕಾರ್ಮಿಕನಾಗಿ ಕೆಲಸ ಮಾಡುತ್ತಿದ್ದನು.
ಅನರುಲ್ ಶೇಖ್ ಬಗ್ಗೆ ಖಚಿತ ಮಾಹಿತಿ ಪಡೆದ ರಾಜ್ಯ ಆಂತರಿಕ ಭದ್ರತಾ ವಿಭಾಗ ಮತ್ತು ಮಂಗಳೂರು ಪೊಲೀಸರು ಕಾರ್ಯಾಚರಣೆ ನಡೆಸಿ, ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಅನರುಲ್ ಶೇಖ್ನನ್ನು ತೀವ್ರ ವಿಚಾರಣೆಗೆ ಒಳಪಡಿಸಿದ್ದಾರೆ.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…