Featured

ಮಂಗಳೂರು : ಕಡಬ ವಿದ್ಯಾರ್ಥಿನಿಯರ ಮೇಲೆ ಆ್ಯಸಿಡ್ ದಾಳಿ ಪ್ರಕರಣ ;  ಆರೋಪಿಯ ಜಾಮೀನು ಅರ್ಜಿ ವಜಾ – vishwanews24

ಮಂಗಳೂರು : ಕಡಬ ವಿದ್ಯಾರ್ಥಿನಿಯರ ಮೇಲೆ ಆ್ಯಸಿಡ್ ದಾಳಿ ಪ್ರಕರಣ ;  ಆರೋಪಿಯ ಜಾಮೀನು ಅರ್ಜಿ ವಜಾ

ಮಂಗಳೂರು : ದ.ಕ.ಜಿಲ್ಲೆಯ ಕಡಬದ ಕಾಲೇಜೊಂದರ ಆವರಣದಲ್ಲಿ ಮೂವರು ಕಾಲೇಜು ವಿದ್ಯಾರ್ಥಿನಿಯರ ಮೇಲೆ ಆಸಿಡ್‌ ದಾಳಿ ನಡೆಸಿದ ಪುಕರಣದ ಆರೋಪಿ ಕೇರಳ ಮೂಲದ ಮಲ್ಲಾಪುರದ ಅಬಿನ್‌ನ ಜಾಮೀನು ಅರ್ಜಿಯನ್ನು ಪುತ್ತೂರಿನ 5ನೇ ಹೆಚ್ಚುವರಿ ಜಿಲ್ಲಾ ಹಾಗೂ ಸತ್ರ ನ್ಯಾಯಾಲಯ ತಿರಸ್ಕರಿಸಿದೆ.

ಜಿಲ್ಲಾ ಹಾಗೂ ಸತ್ರ ನ್ಯಾಯಾಲಯಕ್ಕೆ ಆರೋಪಿ ಸಲ್ಲಿಸಿರುವ ಜಾಮೀನು ಅರ್ಜಿಯ ವಿಚಾರಣೆ ನಡೆದ ವೇಳೆ ಪ್ರಾಸಿಕ್ಯೂಷನ್ ಪರ ವಕೀಲರು ವಿದ್ಯಾರ್ಥಿನಿಯರ ವೈದ್ಯಕೀಯ ದೃಢಪತ್ರ ಸಲ್ಲಿಸಿದ್ದಾರೆ. ಈ ಮೂಲಕ ವಿದ್ಯಾರ್ಥಿನಿಯರು ಈಗಲೂ ಚಿಕಿತ್ಸೆ ಪಡೆದುಕೊಳ್ಳುತ್ತಿರುವುದು ಕಂಡುಬಂದಿದೆ. ಆದ್ದರಿಂದ ಆರೋಪಿಗೆ ಜಾಮೀನು ನೀಡಿದಲ್ಲಿ ಅವರಿಗೆ ತೊಂದರೆಯಾಗುವ ಸಾಧ್ಯತೆಯಿದೆ. ಪ್ರಕರಣದ ತೀವ್ರತೆಯನ್ನು ಗಮನಿಸಿ ಆರೋಪಿಯ ಜಾಮೀನು ಅರ್ಜಿಯನ್ನು ನ್ಯಾಯಾಲಯವು ವಜಾಗೊಳಿಸಿದೆ. ಅಭಿಯೋಜನೆಯ ಪರ ಪಬ್ಲಿಕ್ ಪ್ರಾಸಿಕ್ಯೂಟರ್ ಜಯಂತಿ ಕೆ. ಭಟ್ ವಾದಿಸಿದ್ದರು.

 

ಆರೋಪಿ ಅಬಿನ್ ಮಾ.4ರಂದು ಕಡಬದ ಸರಕಾರಿ ಪ.ಪೂ. ಕಾಲೇಜಿನ ಆವರಣದೊಳಗೆ ಬಂದು ಮೂವರು ವಿದ್ಯಾರ್ಥಿನಿಯರ ಮೇಲೆ ಆಸಿಡ್ ದಾಳಿ ನಡೆಸಿದ್ದ.

Vishwa News 24

Recent Posts

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ -vishwanews24

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…

2 days ago

ದೋಣಿ ಮುಗುಚಿ ಇಬ್ಬರು ಯುವಕರು ನೀರುಪಾಲು : ಓರ್ವನ ಮೃತದೇಹ ಪತ್ತೆ, ಇನ್ನೋರ್ವನಿಗಾಗಿ ಶೋಧ – vishwanews24

ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು  ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…

3 days ago

ಬಿಜೆಪಿ ಬೆಂಬಲಿಸುವವರೂ ನಮ್ಮ ಗ್ಯಾರಂಟಿಗಳ ಫಲಾನುಭವಿಗಳು : ಸಿದ್ದರಾಮಯ್ಯ – vishwanews24

 ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…

3 days ago

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ – vishwanews24

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…

3 days ago

ರೈಲು ಪ್ರಯಾಣಿಕರ ಗಮನಕ್ಕೆ: ಇಂದಿನಿಂದ ಬುಕ್ಕಿಂಗ್ ಮತ್ತು ರದ್ದತಿ  ನಿಯಮದಲ್ಲಿ ಭಾರಿ ಬದಲಾವಣೆ ; ಇಲ್ಲಿದೆ ಪೂರ್ಣ ಮಾಹಿತಿ – vishwanews24

ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…

3 days ago

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ – vishwanews24

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…

3 days ago