ಮಂಗಳೂರು : ದ.ಕ.ಜಿಲ್ಲೆಯ ಕಡಬದ ಕಾಲೇಜೊಂದರ ಆವರಣದಲ್ಲಿ ಮೂವರು ಕಾಲೇಜು ವಿದ್ಯಾರ್ಥಿನಿಯರ ಮೇಲೆ ಆಸಿಡ್ ದಾಳಿ ನಡೆಸಿದ ಪುಕರಣದ ಆರೋಪಿ ಕೇರಳ ಮೂಲದ ಮಲ್ಲಾಪುರದ ಅಬಿನ್‌ನ ಜಾಮೀನು ಅರ್ಜಿಯನ್ನು ಪುತ್ತೂರಿನ 5ನೇ ಹೆಚ್ಚುವರಿ ಜಿಲ್ಲಾ ಹಾಗೂ ಸತ್ರ ನ್ಯಾಯಾಲಯ ತಿರಸ್ಕರಿಸಿದೆ.
ಜಿಲ್ಲಾ ಹಾಗೂ ಸತ್ರ ನ್ಯಾಯಾಲಯಕ್ಕೆ ಆರೋಪಿ ಸಲ್ಲಿಸಿರುವ ಜಾಮೀನು ಅರ್ಜಿಯ ವಿಚಾರಣೆ ನಡೆದ ವೇಳೆ ಪ್ರಾಸಿಕ್ಯೂಷನ್ ಪರ ವಕೀಲರು ವಿದ್ಯಾರ್ಥಿನಿಯರ ವೈದ್ಯಕೀಯ ದೃಢಪತ್ರ ಸಲ್ಲಿಸಿದ್ದಾರೆ. ಈ ಮೂಲಕ ವಿದ್ಯಾರ್ಥಿನಿಯರು ಈಗಲೂ ಚಿಕಿತ್ಸೆ ಪಡೆದುಕೊಳ್ಳುತ್ತಿರುವುದು ಕಂಡುಬಂದಿದೆ. ಆದ್ದರಿಂದ ಆರೋಪಿಗೆ ಜಾಮೀನು ನೀಡಿದಲ್ಲಿ ಅವರಿಗೆ ತೊಂದರೆಯಾಗುವ ಸಾಧ್ಯತೆಯಿದೆ. ಪ್ರಕರಣದ ತೀವ್ರತೆಯನ್ನು ಗಮನಿಸಿ ಆರೋಪಿಯ ಜಾಮೀನು ಅರ್ಜಿಯನ್ನು ನ್ಯಾಯಾಲಯವು ವಜಾಗೊಳಿಸಿದೆ. ಅಭಿಯೋಜನೆಯ ಪರ ಪಬ್ಲಿಕ್ ಪ್ರಾಸಿಕ್ಯೂಟರ್ ಜಯಂತಿ ಕೆ. ಭಟ್ ವಾದಿಸಿದ್ದರು.
ಆರೋಪಿ ಅಬಿನ್ ಮಾ.4ರಂದು ಕಡಬದ ಸರಕಾರಿ ಪ.ಪೂ. ಕಾಲೇಜಿನ ಆವರಣದೊಳಗೆ ಬಂದು ಮೂವರು ವಿದ್ಯಾರ್ಥಿನಿಯರ ಮೇಲೆ ಆಸಿಡ್ ದಾಳಿ ನಡೆಸಿದ್ದ.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…