ಮಂಗಳೂರು: ನಗರದ ಕಂಕನಾಡಿ ಸಮೀಪದಲ್ಲಿ ಆಟೋದಲ್ಲಿ ಕುಕ್ಕರ್ ಬಾಂಬ್ ಸ್ಫೋಟ ಪ್ರಕರಣದ ತನಿಖೆ ವಿವಿಧ ಆಯಾಮಗಳಲ್ಲಿ ಮುನ್ನಡೆಸಲಾಗಿದೆ. ಇದೀಗ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಪೋಸ್ಟ್ ವೊಂದು ವೈರಲ್ ಆಗುತ್ತಿದೆ. ವೈರಲ್ ಆಗುತ್ತಿರುವ ಪೋಸ್ಟ್ ಗೆ ಸಂಬಂಧಿಸಿದಂತೆ ಎಡಿಜಿಪಿ ಅಲೋಕ್ ಕುಮಾರ್ ಪ್ರತಿಕ್ರಿಯೆ ನೀಡಿದ್ದಾರೆ.
ಇನ್ಸ್ಟಾಗ್ರಾಂನಲ್ಲಿ ಒಂದು ಸಂಘಟನೆ ಏಕಾಏಕಿ ಪೋಸ್ಟ್ ಹಾಕಿಕೊಂಡಿದ್ದು ಸ್ವತಃ ಈ ಕೃತ್ಯದ ಹೊಣೆ ಹೆಗಲೇರಿಸಿಕೊಂಡಿದೆ. ವೈರಲ್ ಆಗುತ್ತಿರುವ ಪೋಸ್ಟ್‌ಗೆ ಪ್ರತಿಕ್ರಿಯೆ ನೀಡಿರುವ ಅವರು ‘ನಾವು ಸಂಘಟನೆ ಮತ್ತು ಆ ಪೋಸ್ಟ್ ಕುರಿತ ಸತ್ಯಾಸತ್ಯತೆ ಬಗ್ಗೆ ಪರಿಶೀಲಿಸುತ್ತಿದ್ದೇವೆ. ಪರಿಶೀಲನೆಯ ನಂತರ ತನಿಖೆಯ ಫಲಿತಾಂಶವನ್ನು ಬಯಲು ಮಾಡುತ್ತೇವೆ’ ಎಂದು ಹೇಳಿದ್ದಾರೆ.
ಸಾಮಾಜಿಕ ಜಾಲತಾಣದಲ್ಲಿ ಹಾಕಿರುವ ಪೋಸ್ಟ್‌ನಲ್ಲಿ ‘ನಮ್ಮ ಗುರಿ ಇದ್ದದ್ದು ಕದ್ರಿ ದೇವಸ್ಥಾನ. ಆದರೆ ನಿರ್ದಿಷ್ಟ ಸಮಯಕ್ಕೆ ಗುರಿ ತಲುಪಲು ಸಾಧ್ಯವಾಗಲಿಲ್ಲ ಎಂದು ಉಲ್ಲೇಖವಿದೆ ಎನ್ನಲಾಗಿದೆ.
ಇವತ್ತು ನಮ್ಮ ಸಹೋದರನ ಪರಿಸ್ಥಿತಿ ನೊಡಿ ಸಂಭ್ರಮಿಸುತ್ತಿರುವ ಅದರಲ್ಲೂ ವಿಶೇಷವಾಗಿ ಎಡಿಜಿಪಿ ಅಲೋಕ್ ಕುಮಾರ್ ಅವರ ಸಂತೋಷವು ಅಲ್ಪಕಾಲದ್ದಾಗಿದೆ. ನೀವು ಕೂಡಾ ನಮ್ಮ ಟಾರ್ಗೆಟ್ ಲೀಸ್ಟ್‌ನಲ್ಲಿ ಇದ್ದೀರಿ’ ಎಂದು ಉಲ್ಲೇಖ ಮಾಡಲಾಗಿತ್ತು.
ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…