Featured

ಮಂಗಳೂರು: ಕದ್ರಿ ಪಾರ್ಕ್‌ಗೆ ಬರಬೇಕಾದ್ರೆ ಕಟ್ಟಬೇಕು ಟೋಲ್ ; ಸ್ಮಾರ್ಟ್ ಸಿಟಿ ಯೋಜನೆ ವಿರುದ್ಧ ಸಾರ್ವಜನಿಕರ ಭಾರೀ ವಿರೋಧ – vishwanews24

ಮಂಗಳೂರು: ಕದ್ರಿ ಪಾರ್ಕ್‌ಗೆ ಬರಬೇಕಾದ್ರೆ ಕಟ್ಟಬೇಕು ಟೋಲ್ – ಸ್ಮಾರ್ಟ್ ಸಿಟಿ ಯೋಜನೆ ವಿರುದ್ಧ ಸಾರ್ವಜನಿಕರ ಭಾರೀ ವಿರೋಧ

ಮಂಗಳೂರು: ಮಂಗಳೂರಿನ ಕದ್ರಿ ಪಾರ್ಕ್, ಸ್ಮಾರ್ಟ್ ಸಿಟಿ ಯೋಜನೆಯಲ್ಲಿ ಅಭಿವೃದ್ಧಿಗೊಂಡು ಕಂಗೊಳಿಸುತ್ತಿದೆ. ಸಾವಿರಾರು ಮಂದಿ ಪ್ರತಿನಿತ್ಯ ಕದ್ರಿ ಪಾರ್ಕ್‌ಗೆ ಬಂದು ರಿಲ್ಯಾಕ್ಸ್ ಆಗುತ್ತಾರೆ. ಆದ್ರೆ ಪಾರ್ಕ್‌ನ ರಸ್ತೆಗೆ ಟೋಲ್ ಸಿಸ್ಟಮ್ ರೀತಿಯ ಪಾರ್ಕಿಂಗ್ ಶುಲ್ಕಕ್ಕೆ ಸ್ಮಾರ್ಟ್ ಸಿಟಿ ನಿರ್ಧರಿಸಿದೆ.

ಕದ್ರಿ ಪಾರ್ಕ್, ಕಡಲ ತಡಿ ಮಂಗಳೂರಿನ ಯುವಕ ಯುವತಿಯರ ಫೇವರೆಟ್ ಸ್ಪಾಟ್. ವಾಯು ವಿಹಾರಿಗಳ ನೆಚ್ಚಿನ ತಾಟ, ಸ್ಮಾರ್ಟ್ ಸಿಟಿ ಯೋಜನೆಯಲ್ಲಿ ಕೋಟ್ಯಂತರ ವೆಚ್ಚದಲ್ಲಿ ಅಭಿವೃದ್ಧಿಗೊಂಡು ಕದ್ರಿ ಪಾರ್ಕ್ ನಳನಳಿಸುತ್ತಿದೆ. ಪ್ರತಿನಿತ್ಯ ಸಾವಿರಾರು ಮಂದಿ, ಕದ್ರಿ ಪಾರ್ಕ್ಗೆ ಬರುತ್ತಾರೆ. ಆದ್ರೆ ಜನವರಿಯಿಂದ ಕದ್ರಿ ಪಾರ್ಕ್ಗೆ ಬರುವವರಿಗೆ ಟೋಲ್ ರೀತಿಯಲ್ಲೇ ಹಣ ಕಟ್ ಆಗುವ ಬಿಸಿ ತಟ್ಟಲಿದೆ.

ಕದ್ರಿ ಪಾರ್ಕ್ ರಸ್ತೆಯಲ್ಲಿ ನೂತನವಾಗಿ ನಿರ್ಮಿಸಲಾದ ಅಂಗಡಿಗಳನ್ನು ಖಾಸಗಿ ಸಂಸ್ಥೆ ಟೆಂಡರ್ ಮೂಲಕ ಪಡೆದುಕೊಂಡಿದೆ. ಇದೇ ಸಂಸ್ಥೆ ಕದ್ರಿ ಪಾರ್ಕ್ ಅಂಗಡಿ, ರಸ್ತೆ, ಫುಟ್‌ಪಾತ್, ಪಾರ್ಕಿಂಗ್ ಜಾಗವನ್ನು ನಿರ್ವಹಣೆ ಮಾಡಲಿದೆ. ಆದರೆ ಟೆಂಡರ್ ಪಡೆದ ಸಂಸ್ಥೆಗೆ ಇದರಿಂದ ನಿರೀಕ್ಷಿತ ಪ್ರಮಾಣದ ಆದಾಯ ಸಿಗುತ್ತಿಲ್ಲ. ಹೀಗಾಗಿ ಕದ್ರಿ ಪಾರ್ಕ್ ರಸ್ತೆಗೆ ಟೋಲ್‌ಗೇಟ್ ರೀತಿಯಲ್ಲೇ ಶುಲ್ಕ ವಿಧಿಸಲು ಸ್ಮಾರ್ಟ್ ಸಿಟಿ ನಿರ್ಧರಿಸಿದೆ.

ಅತ್ಯಾಧುನಿಕ ತಂತ್ರಜ್ಞಾನ ಬಳಸಿ, ವಾಹನದ ನಂಬರ್ ಪ್ಲೇಟ್ ಇಮೇಜ್ ಸೆರೆಹಿಡಿದು ವಾಹನದ ಫಾಸ್ಟ್ ಟ್ಯಾಗ್‌ಗೆ ಲಿಂಕ್ ಮಾಡಲಾಗುತ್ತದೆ. 5 ನಿಮಿಷದ ಒಳಗೆ ತೆರಳಿದ್ರೆ ಯಾವುದೇ ಶುಲ್ಕ ಕಟ್ ಆಗಲ್ಲ. ಹೆಚ್ಚಾದ್ರೆ, 50 ರೂ. ಹಣ ಕಟ್ ಆಗಲಿದೆ.

ಇನ್ನೂ, ಟೋಲ್ ರೀತಿಯ ಹಣ ಸಂಗ್ರಹಕ್ಕೆ ಮುಂದಾಗಲಿರುವ ಸ್ಮಾರ್ಟ್ ಸಿಟಿ ಕ್ರಮದ ವಿರುದ್ಧ ಸಾರ್ವಜನಿಕ ವಲಯದಲ್ಲಿ ಭಾರೀ ವಿರೋಧ ವ್ಯಕ್ತವಾಗಿದೆ. ಪಾರ್ಕ್ ರಸ್ತೆಗೆ ಟೋಲ್ ರೀತಿಯ ಶುಲ್ಕ ಮಾಡಿದ್ರೆ ಪಾರ್ಕ್ ಜನ ಬರೋದು ಹೇಗೆ? ಇದರಿಂದ ಸುಗಮ ವಾಹನ ಸಂಚಾರಕ್ಕೂ ತೊಡಕಾಗುತ್ತೆ. ಹೀಗಾಗಿ ಯಾವುದೇ ಕಾರಣಕ್ಕೂ ಹೆದ್ದಾರಿಯಂತೆ ಇಲ್ಲಿ ಟೋಲ್ ಬೇಡ ಅಂತ ಸಾರ್ವಜನಿಕರು ಆಕ್ರೋಶ ಹೊರಹಾಕಿದ್ದಾರೆ.

Vishwa News 24

Recent Posts

ಕಾಪು: ಫ್ಲ್ಯಾಟ್ ನಿರ್ಮಿಸಿ ಹಸ್ತಾಂತರಿಸುವುದಾಗಿ ಭರವಸೆ ನೀಡಿ 15 ಲಕ್ಷ ರೂ.ವಂಚನೆ – vishwanews24

ಕಾಪು: ಫ್ಲ್ಯಾಟ್ ನಿರ್ಮಿಸಿ ಹಸ್ತಾಂತರಿಸುವುದಾಗಿ ಭರವಸೆ ನೀಡಿ 15 ಲಕ್ಷ ರೂ.ವಂಚನೆ ಕಾಪು: ಫ್ಲ್ಯಾಟ್ ನಿರ್ಮಿಸಿ ಹಸ್ತಾಂತರಿಸುವುದಾಗಿ ಭರವಸೆ ನೀಡಿ…

2 hours ago

ಹಾಸನ : ಡೆತ್ ನೋಟ್ ಬರೆದಿಟ್ಟು ಪ್ಯಾರಾಮೆಡಿಕಲ್ ವಿದ್ಯಾರ್ಥಿ ಆತ್ಮಹತ್ಯೆ – vishwanews24

ಹಾಸನ : ಡೆತ್ ನೋಟ್ ಬರೆದಿಟ್ಟು ಪ್ಯಾರಾಮೆಡಿಕಲ್ ವಿದ್ಯಾರ್ಥಿ ಆತ್ಮಹತ್ಯೆ ಹಾಸನ: ಡೆತ್ ನೋಟ್ ಬರೆದಿಟ್ಟು 21 ವರ್ಷದ ಪ್ಯಾರಾಮೆಡಿಕಲ್ ವಿದ್ಯಾರ್ಥಿಯೋರ್ವ…

2 hours ago

ಮೂಳೂರು ಹಾಲು ಉತ್ಪಾದಕರ ಸಹಕಾರ ಸಂಘದ ವಾರ್ಷಿಕ ಸಾಮಾನ್ಯ ಸಭೆ – vishwanews24

ಮೂಳೂರು ಹಾಲು ಉತ್ಪಾದಕರ ಸಹಕಾರ ಸಂಘ ಸಭೆ ೨೦೨೩-೨೦೨೪ ಮೂಳೂರು ಹಾಲು ಉತ್ಪಾದಕರ ಸಹಕಾರ ಸಂಘದ ವಾರ್ಷಿಕ ಸಾಮಾನ್ಯ ಸಭೆ…

3 hours ago

ಆನ್‌ಲೈನ್‌ನಲ್ಲಿ ಮಾರಾಟ ಮಾಡುವ ತರಕಾರಿಗಳಿಗೆ ಕೆಮಿಕಲ್‌ ಸ್ಪ್ರೇ ಬಗ್ಗೆ ಕ್ರಮ : ಖಾದರ್‌ – vishwanews24

ಆನ್‌ಲೈನ್‌ನಲ್ಲಿ ಮಾರಾಟ ಮಾಡೋ ತರಕಾರಿಗೆ ಕೆಮಿಕಲ್‌ ಸ್ಪ್ರೇ ಮಾಡುವ ಬಗ್ಗೆ ದೂರು ಬಂದಿದೆ.. ಪರಿಶೀಲನೆ ಮಾಡ್ತಿದ್ದೇವೆ, ಮುಂದಿನ ದಿನಗಳಲ್ಲಿ ಕ್ರಮ…

4 hours ago

ಕಾಸರಗೋಡು : ನಿಯಂತ್ರಣ ತಪ್ಪಿ ಡಿವೈಡರ್‌ಗೆ ಢಿಕ್ಕಿ ಹೊಡೆದ ಆ್ಯಂಬುಲೆನ್ಸ್ ; ರೋಗಿ ಮೃತ್ಯು, ನಾಲ್ವರಿಗೆ ಗಾಯ – vishwanews24

ಕಾಸರಗೋಡು : ನಿಯಂತ್ರಣ ತಪ್ಪಿ ಡಿವೈಡರ್‌ಗೆ ಢಿಕ್ಕಿ ಹೊಡೆದ ಆ್ಯಂಬುಲೆನ್ಸ್ ; ರೋಗಿ ಮೃತ್ಯು, ನಾಲ್ವರಿಗೆ ಗಾಯ ಕಾಸರಗೋಡು :…

4 hours ago

ಇನ್ನು ಮುಂದೆ ರಾಜ್ಯ ಸರ್ಕಾರದ ಯಾವುದೇ ಕಾರ್ಯಕ್ರಮಗಳಲ್ಲಿ ವಂದೇ ಮಾತರಂನ ಎರಡು ಚರಣ ಮಾತ್ರ ಬಳಕೆ:  CM ಡಿ.ಕೆ. ಶಿ ಸ್ಪಷ್ಟನೆ – vishwanews24

ರಾಜ್ಯ ಸರ್ಕಾರದ ಯಾವುದೇ ಕಾರ್ಯಕ್ರಮಗಳಲ್ಲಿ ಇನ್ನು ಮುಂದೆ ವಂದೇ ಮಾತರಂನ ಎರಡು ಚರಣ ಮಾತ್ರ ಬಳಕೆ:  ಡಿ.ಕೆ. ಶಿ ಸ್ಪಷ್ಟನೆ…

4 hours ago