ಮಂಗಳೂರು: ಮಂಗಳೂರಿನ ಕದ್ರಿ ಪಾರ್ಕ್‌ನಲ್ಲಿ ಶುಕ್ರವಾರ ಮತ್ತೊಂದು ‘ನೈತಿಕ ಪೊಲೀಸ್‌ಗಿರಿ’ ಪ್ರಕರಣ ವರದಿಯಾಗಿದ್ದು, ಅನ್ಯಕೋಮಿನ ಯುವಕ, ಯುವತಿ ಮೇಲೆ ಹಲ್ಲೆ ನಡೆಸಿದ ಆರೋಪದ ಮೇಲೆ ಅಪ್ರಾಪ್ತ ಬಾಲಕ ಸೇರಿದಂತೆ ಮೂವರನ್ನು ಶುಕ್ರವಾರ ಬಂಧಿಸಲಾಗಿದೆ.
ಪೊಲೀಸರ ಪ್ರಕಾರ, ಯೆನೆಪೊಯ ಕಾಲೇಜಿನಲ್ಲಿ (ಬಿಎಸ್‌ಸಿ ನರ್ಸಿಂಗ್) ಓದುತ್ತಿರುವ 20 ವರ್ಷದ ಯುವತಿ, ನಂತೂರಿನಲ್ಲಿರುವ ಜಿಎನ್‌ಎಂ ನರ್ಸಿಂಗ್ ಕಾಲೇಜಿನಲ್ಲಿ ಓದುತ್ತಿರುವ ತನ್ನ ಸ್ನೇಹಿತ 20 ವರ್ಷದ ಅಖಿಲ್ ಅವರೊಂದಿಗೆ ಬೆಳಗ್ಗೆ ಕದ್ರಿ ಪಾರ್ಕ್‌ಗೆ ಬಂದಿದ್ದರು.
ಈ ವೇಳೆ ಹಿಂದುತ್ವ ಸಂಘಟನೆಗಳಿಗೆ ಸೇರಿದವರು ಎನ್ನಲಾದ ಮೂವರು ಅವರ ಹೆಸರು ಮತ್ತು ಭೇಟಿಯ ಉದ್ದೇಶದ ಬಗ್ಗೆ ಪ್ರಶ್ನಿಸಿದ್ದಾರೆ. ಅಖಿಲ್ ಮುಸ್ಲಿಂ ಎಂದು ತಪ್ಪಾಗಿ ಭಾವಿಸಿ ಆತನ ಮೇಲೆ ಹಲ್ಲೆ ನಡೆಸಿ, ಅವಾಚ್ಯವಾಗಿ ನಿಂದಿಸಿದ್ದಾರೆ ಮತ್ತು ಅವರ ಫೋಟೋಗಳು, ವಿಡಿಯೋ ಮಾಡಿದ್ದಾರೆ.
ದೂರಿನ ಆಧಾರದ ಮೇಲೆ ಮಂಗಳೂರು ಪೂರ್ವ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಾಗಿದ್ದು, 18 ವರ್ಷ ವರ್ಷದ ನಿತಿನ್, 18 ವರ್ಷದ ಹರ್ಷ ಮತ್ತು 17 ವರ್ಷದ ಅಪ್ರಾಪ್ತ ಬಾಲಕ ಸೇರಿದಂತೆ ಮೂವರನ್ನೂ ಬಂಧಿಸಲಾಗಿದೆ.
ಧರ್ಮಸ್ಥಳ ಪ್ರಕರಣ : ವಿಠಲ್ ಗೌಡ ವಿರುದ್ಧ ಅರೆಸ್ಟ್ ವಾರಂಟ್: ಪೊಲೀಸರಿಂದ ಹುಡುಕಾಟ ಬೆಳ್ತಂಗಡಿ: ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ…
ಕನ್ನಡ ಸಿನಿಮಾ ನಿರ್ಮಾಪಕ ಬಾ.ಮಾ ಹರೀಶ್ ಪುತ್ರ ಹೃದಯಾಘಾತದಿಂದ ನಿಧನ ಬೆಂಗಳೂರು: ಕನ್ನಡ ಸಿನಿಮಾ ರಂಗದ ಖ್ಯಾತ ನಿರ್ಮಾಪಕ ಬಾ.ಮಾ.…
ರಾಮನ ಹೆಸರಿನಲ್ಲಿ ನಡೆದ ಪ್ರತಿಯೊಂದು ರೂಪಾಯಿಯ ಲೆಕ್ಕದಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ: ಬಿ.ಕೆ.ಹರಿಪ್ರಸಾದ್ ಬೆಂಗಳೂರು: ಶ್ರೀರಾಮನನ್ನು ರಾಜಕೀಯವಾಗಿ ಬಳಸಿಕೊಡವರು, ಶ್ರೀರಾಮನ ಹೆಸರಿನಲ್ಲಿ ಒಂದೊಂದು…
ಉಡುಪಿ: 36.29 ಲಕ್ಷ ರೂ. ಮೌಲ್ಯದ ಮಾದಕ ವಸ್ತುಗಳನ್ನ ನಾಶಪಡಿಸಿದ ಪೊಲೀಸರು ಉಡುಪಿ: ಕಠಿಣ ಕಾನೂನು ಕ್ರಮ ಮತ್ತು ಜಾಗೃತಿ…
ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಕೆ. ಭಾಗ್ಯರಾಜ್ ಹೃದಯಾಘಾತದಿಂದ ನಿಧನ ಚೆನ್ನೈ: ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ,…
ಅಯೋಧ್ಯೆ ರಾಮಮಂದಿರ ದೇಣಿಗೆ ಲೂಟಿ ಪ್ರಕರಣ ಎಚ್ಚರಿಕೆ ಗಂಟೆ: ಕೆ.ಎಸ್. ಈಶ್ವರಪ್ಪ ಶಿವಮೊಗ್ಗ: ಅಯೋಧ್ಯೆ ರಾಮಮಂದಿರದ ದೇಣಿಗೆ ಲೂಟಿ ಆಗಿರುವ…