Featured

ಮಂಗಳೂರು: ಕದ್ರಿ ಸಂಗೀತ ಸೌರಭ 2022 : ಜೀವಮಾನ ಶ್ರೇಷ್ಠ ರಾಷ್ಟ್ರ ಪ್ರಶಸ್ತಿಗೆ ಸಂಗೀತ ವಿದ್ವಾನ್ ಎಂ.ನಾರಾಯಣ ಆಯ್ಕೆ – Vishwanews24

ಮಂಗಳೂರು: ಕದ್ರಿ ಸಂಗೀತ ಸೌರಭ 2022 : ಜೀವಮಾನ ಶ್ರೇಷ್ಠ ರಾಷ್ಟ್ರ ಪ್ರಶಸ್ತಿಗೆ ಸಂಗೀತ ವಿದ್ವಾನ್ ಎಂ.ನಾರಾಯಣ ಆಯ್ಕೆ

ಮಂಗಳೂರು: ಡಾ.ಕದ್ರಿ ಗೋಪಾಲನಾಥ್ ಅಕಾಡೆಮಿ ಫಾರ್ ಆರ್ಟ್ಸ್‌ (ರಿ) ಆಶ್ರಯದಲ್ಲಿ ಡಿ. 6 ಇಂದು ಪದ್ಮಶ್ರೀ ಡಾ. ಕದ್ರಿ ಗೋಪಾಲನಾಥ್ ಅವರ 73ನೇ ಜನ್ಮ ಜಯಂತಿಯ ಪ್ರಯುಕ್ತ ಕದ್ರಿ ಸಂಗೀತ ಸೌರಭ 2022 ಹಮ್ಮಿಕೊಳ್ಳಲಾಗಿದೆ. ಈ ಬಾರಿಯ ಕದ್ರಿ ಸಂಗೀತ ಸೌರಭ ಜೀವಮಾನ ಶ್ರೇಷ್ಠ ರಾಷ್ಟ್ರ ಪ್ರಶಸ್ತಿಗೆ ಸಂಗೀತ ವಿದ್ವಾನ್ ಎಂ.ನಾರಾಯಣ ಅವರನ್ನು ಆಯ್ಕೆ ಮಾಡಲಾಗಿದೆ.

ಮೂಡಬಿದ್ರೆಯಲ್ಲಿ ಜನಿಸಿದ ಎಂ.ನಾರಾಯಣ ಅವರು ಒಬ್ಬ ಅಪ್ರತಿಮ ಕಲಾವಿದರು. ಪ್ರಸ್ತುತ ಸುರತ್ಕಲ್ ನ ಶ್ರೀಗಣೇಶ್ ಸಂಗೀತ ಮತ್ತು ನೃತ್ಯ ಕಲಾಶಾಲೆಯಲ್ಲಿ ಕಳೆದ 25 ವರ್ಷಗಳಿಂದ ಸಂಗೀತ ಪ್ರಾಧ್ಯಾಪಕರಾಗಿ ಸಾವಿರಾರು ವಿದ್ಯಾರ್ಥಿಗಳಿಗೆ ಸಂಗೀತ ಶಿಕ್ಷಣವನ್ನು ನೀಡುತ್ತಿದ್ದಾರೆ. ಓರ್ವ ಖ್ಯಾತ ಸಂಗೀತ ರಚನಕಾರರಾಗಿರುವ ಇವರು ನಾರಾಯಣದಾಸ ನಾಮಾಂಕಿತದಲ್ಲಿ ಈವರೆಗೆ ವಿವಿಧ ರಾಗ ತಾಳಗಳಲ್ಲಿ 25 ಜತಿ ಸ್ವರಗಳು, 75 ತಾಣ ವರ್ಣಗಳು, 4 ಸ್ವರ ಜತಿಗಳು, 200 ಕೃತಿಗಳು ಹಾಗೂ 15 ತಿಲ್ಲಾನಗಳನ್ನು ಕನ್ನಡ, ತೆಲುಗು ಹಾಗೂ ಸಂಸ್ಕೃತದಲ್ಲಿ ರಚಿಸಿದ್ದಾರೆ.

72 ಮೇಳಕರ್ತ ರಾಗಗಳಲ್ಲೂ ಕೂಡ ಕೃತಿ ರಚನೆ ಮಾಡಿರುವ ಕರ್ನಾಟಕದ ಕೆಲವೇ ಕೆಲವು ರಚನಕಾರರಲ್ಲಿ ಇವರು ಒಬ್ಬರು. ಎಂ.ನಾರಾಯಣ ಶ್ರೀಮಹಾಗಣಪತಿಯ ಮೇಲೆ 47 ಕೃತಿಗಳ ರಚನೆ ಮಾಡಿದ್ದಾರೆ. ಇದೀಗ ನಾರಾಯಣ ಅವರ ಅಪರಿಮಿತ ಸಾಧನೆಯನ್ನು ಗುರುತಿಸಿ ಡಾ.ಕದ್ರಿ ಗೋಪಾಲನಾಥ್ ಅಕಾಡೆಮಿ ಫಾರ್ ಆರ್ಟ್ಸ್‌ ವತಿಯಿಂದ ಕದ್ರಿ ಸಂಗೀತ ಸೌರಭ 2022ರ ಜೀವಮಾನ ಶ್ರೇಷ್ಠ ರಾಷ್ಟ್ರೀಯ ಪ್ರಶಸ್ತಿಯನ್ನು ನೀಡಲಾಗುತ್ತಿದೆ. ಪ್ರಶಸ್ತಿಯು 50,000 ನಗದು ಹಾಗೂ ಬೆಳ್ಳಿಯ ಫಲಕ ಹೊಂದಿದೆ. 2022ರ ಡಿಸೆಂಬರ್ 6 ಇಂದು ಸಂಜೆ 5:30ಕ್ಕೆ ಮಂಗಳೂರು ಉರ್ವಸ್ಟೋರ್ ಬಳಿಯ ಇರುವ ಡಾ.ಬಿ.ಆರ್ ಅಂಬೇಡ್ಕರ್ ಭವನದಲ್ಲಿ ಪ್ರಶಸ್ತಿ ಪ್ರಧಾನ ಸಮಾರಂಭ ನಡೆಯಲಿದೆ ಎಂದು ಡಾ.ಕದ್ರಿ ಗೋಪಾಲನಾಥ್ ಅಕಾಡೆಮಿ ಫಾರ್ ಆರ್ಟ್ಸ್‌(ರಿ)ನ ಪ್ರಧಾನ ಕಾರ್ಯದರ್ಶಿ ಕದ್ರಿ ಮಣಿಕಾಂತ್ ತಿಳಿಸಿದ್ದಾರೆ.

Vishwa News 24

Recent Posts

ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಅರ್ಜಿ ವಿಚಾರಣೆಗೆ ಅರ್ಹವಲ್ಲ: ಮತ್ತೊಮ್ಮೆ ಜಾಮೀನು ತಿರಸ್ಕರಿಸಿದ ಸುಪ್ರೀಂ – vishwanews24

 ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಅರ್ಜಿ ವಿಚಾರಣೆಗೆ ಅರ್ಹವಲ್ಲ: ಮತ್ತೊಮ್ಮೆ ಜಾಮೀನು ತಿರಸ್ಕರಿಸಿದ ಸುಪ್ರೀಂ ನಟ ದರ್ಶನ್ ರೇಣುಕಾ…

2 days ago

ಗೃಹ ಜ್ಯೋತಿ ಪರಿಶೀಲನೆ: ಪ್ರವರ್ಗ ಮಾಹಿತಿ (ಜಾತಿ ಪ್ರಮಾಣಪತ್ರ) ಕಡ್ಡಾಯವಲ್ಲ : ಬೆಸ್ಕಾಂ ಸ್ಪಷ್ಟನೆ – vishwanews24

ಗೃಹ ಜ್ಯೋತಿ ಪರಿಶೀಲನೆ: ಪ್ರವರ್ಗ ಮಾಹಿತಿ (ಜಾತಿ ಪ್ರಮಾಣಪತ್ರ) ಕಡ್ಡಾಯವಲ್ಲ ಬೆಂಗಳೂರು: ರಾಜ್ಯಾದ್ಯಂತ ಜುಲೈ 1 ರಿಂದ ಆರಂಭಗೊಂಡಿರುವ ಗೃಹ ಜ್ಯೋತಿ…

2 days ago

ಎಸ್‌ಐಆರ್ ಪ್ರಕ್ರಿಯೆಯಲ್ಲಿ ಭಾರೀ ಅಕ್ರಮ : ಸಮಗ್ರ ತನಿಖೆಗೆ ಪ್ರಲ್ಹಾದ ಜೋಶಿ ಆಗ್ರಹ – vishwanews24

ಎಸ್‌ಐಆರ್ ಪ್ರಕ್ರಿಯೆಯಲ್ಲಿ ಭಾರೀ ಅಕ್ರಮ : ಸಮಗ್ರ ತನಿಖೆಗೆ ಪ್ರಲ್ಹಾದ ಜೋಶಿ ಆಗ್ರಹ ನವದೆಹಲಿ: ರಾಮನಗರ ಜಿಲ್ಲೆಯಲ್ಲಿ ನಡೆದ ಮತದಾರರ…

2 days ago

ಅಕ್ರಮ ಎಸ್‌ಐಆರ್‌ ಪ್ರಕ್ರಿಯೆ : 2028ರ ಚುನಾವಣೆ ಗೆಲ್ಲಲು ಬಾಂಗ್ಲಾದೇಶಿಯರ ಸಕ್ರಮಕ್ಕೆ ಕಾಂಗ್ರೆಸ್‌ ಸಂಚು : ಶೋಭಾ ಕರಂದ್ಲಾಜೆ ಆರೋಪ – vishwanews24

ಅಕ್ರಮ ಎಸ್‌ಐಆರ್‌ ಪ್ರಕ್ರಿಯೆ : 2028ರ ಚುನಾವಣೆ ಗೆಲ್ಲಲು ಬಾಂಗ್ಲಾದೇಶಿಯರ ಸಕ್ರಮಕ್ಕೆ ಕಾಂಗ್ರೆಸ್‌ ಸಂಚು : ಶೋಭಾ ಕರಂದ್ಲಾಜೆ ಗಂಭೀರ…

2 days ago

ಮೈಸೂರು ದಸರಾದಲ್ಲಿ ಕಂಬಳ ಆಯೋಜನೆ: ಸಂಸದ ಯದುವೀರ್ ಒಡೆಯರ್ ಆಕ್ಷೇಪ – vishwanews24

ಮೂಲ ನೆಲದಿಂದ ಬೇರ್ಪಡಿಸಿ ಕರಾವಳಿಯ ಮಣ್ಣಿನ ಸಂಸ್ಕೃತಿಯ ಪಾವಿತ್ರ್ಯಕ್ಕೆ ಧಕ್ಕೆ ತರಬೇಡಿ .. ಕರಾವಳಿ ಕಂಬಳವು ತನ್ನದೇ ಆದ ಆಳವಾದ ಸಾಂಪ್ರದಾಯಿಕ…

2 days ago

ಮಂಗಳೂರು:ಸಾಮಾಜಿಕ ಜಾಲತಾಣಗಳಲ್ಲಿ ಸೆಲಿನಾ ಟ್ರಾವೆಲ್ಸ್ ವಿರುದ್ಧ ಹರಿದಾಡಿದ ಕರಪತ್ರ : ಪೊಲೀಸ್ ಇಲಾಖೆ ಸ್ಪಷ್ಟನೆ – vishwanews24

ಮಂಗಳೂರು:ಸಾಮಾಜಿಕ ಜಾಲತಾಣಗಳಲ್ಲಿ ಸೆಲಿನಾ ಟ್ರಾವೆಲ್ಸ್ ವಿರುದ್ಧ ಹರಿದಾಡಿದ ಕರಪತ್ರ : ಪೊಲೀಸ್ ಇಲಾಖೆ ಸ್ಪಷ್ಟನೆ ಮಂಗಳೂರು: ಖಾಸಗಿ ಸಾರಿಗೆ ಸಂಸ್ಥೆಯಾದ…

2 days ago