Featured

ಮಂಗಳೂರು ಕನ್ನಡ ರಾಜ್ಯೋತ್ಸವ : ಧ್ವಜಾರೋಹಣ ನೆರವೇರಿಸಿದ ಸಚಿವ ಅಂಗಾರ – Vishwanews24

ಮಂಗಳೂರು ಕನ್ನಡ ರಾಜ್ಯೋತ್ಸವ : ಧ್ವಜಾರೋಹಣ ನೆರವೇರಿಸಿದ ಸಚಿವ ಅಂಗಾರ – Vishwanews24

ಮಂಗಳೂರು : ಕರ್ನಾಟಕ ರಾಜ್ಯೋತ್ಸವದ ಅಂಗವಾಗಿ ಮೀನುಗಾರಿಕೆ, ಬಂದರು ಹಾಗೂ ಒಳನಾಡು ಜಲಸಾರಿಗೆ ಸಚಿವರಾದ ಎಸ್. ಅಂಗಾರ ಅವರು ನ.01ರ ಸೋಮವಾರ ಮಂಗಳೂರು ನಗರದ ನೆಹರೂ ಮೈದಾನದಲ್ಲಿ ರಾಷ್ಟ್ರ ಧ್ವಜಾರೋಹಣ ನೆರವೇರಿಸಿ, ಗೌರವ ವಂದನೆ ಸ್ವೀಕರಿಸಿದರು.

ಆ ಬಳಿಕ ಮಾತನಾಡಿದ ಸಚಿವರು, ಕನ್ನಡ ರಾಜ್ಯೋತ್ಸವ ಶುಭಾಷಯಗಳನ್ನು ತಿಳಿಸಿ, ಕೋವಿಡ್-19 ಸೋಂಕಿನ ಎರಡನೇ ಅಲೆ ನಿರ್ವಹಣೆಯಲ್ಲಿ ಜೀವದ ಹಂಗು ತೊರೆದು ತಮ್ಮನ್ನು ತೊಡಗಿಸಿಕೊಂಡಿರುವ ವೈದ್ಯರು, ಶುಶ್ರೂಷಕರು, ಇತರ ವೈದ್ಯಕೇತರ ಸಿಬ್ಬಂದಿ, ಪೊಲೀಸರು, ಜಿಲ್ಲಾ ಆಡಳಿತ, ವಿವಿಧ ಸರ್ಕಾರಿ ಇಲಾಖೆಗಳ ಅಧಿಕಾರಿಗಳು ಹಾಗೂ ಸಿಬ್ಬಂದಿಯವರನ್ನು ಕೃತಜ್ಞತಾ ಪೂರ್ವಕವಾಗಿ ನೆನೆದರು.

ಆರೋಗ್ಯ ಇಲಾಖೆಯೂ ಸಂಭಾವ್ಯ ಮೂರನೇ ಅಲೆಯನ್ನು ಸಮರ್ಥವಾಗಿ ನಿಭಾಯಿಸಲು ಜಿಲ್ಲೆಯಲ್ಲಿ ಈಗಾಗಲೇ 12 ವೈದ್ಯಕೀಯ ಆಮ್ಲಜನಕ ಉತ್ಪಾದನಾ ಘಟಕಗಳು ಹಾಗೂ ಎಲ್ಲಾ ತಾಲೂಕು ಆಸ್ಪತ್ರೆಗಳಲ್ಲಿ ತಲಾ 5 ಬೆಡ್‌ಗಳಿಗೆ ಐಸಿಯು ವೆಂಟಿಲೇಟರ್ ಸೌಲಭ್ಯವನ್ನು ಕಲ್ಪಿಸಲಾಗಿದೆ ಎಂದರು.

ಪ್ರವಾಸೋದ್ಯಮ ಇಲಾಖೆಯಿಂದ ಪಣಂಬೂರು, ತಣ್ಣೀರು ಬಾವಿ, ಸೊಮೇಶ್ವರ, ತಲಪಾಡಿ, ಸಸಿಹಿತ್ಲು, ಸುರತ್ಕಲ್, ಉಳ್ಳಾಲ ಹಾಗೂ ಮುಕ್ಕ ಕಡಲ ತೀರಗಳಲ್ಲಿ ಹಲವು ಅಭಿವೃದ್ಧಿ ಕಾಮಗಾರಿಗಳನ್ನು ಕೈಗೊಳ್ಳಲಾಗಿದೆ.

ಪ್ರಮುಖ ಧಾರ್ಮಿಕ ಕ್ಷೇತ್ರಗಳಾದ ಕಟೀಲು ದುರ್ಗಾಪರಮೇಶ್ವರಿ, ಕದ್ರಿ ಮಂಜುನಾಥ, ಉರ್ವಾ ಮಾರಿಯಮ್ಮ, ಮಂಗಳಾದೇವಿ, ಪೊಳಲಿ ರಾಜರಾಜೇಶ್ವರಿ, ಧರ್ಮಸ್ಥಳ, ಸೌತಡ್ಕ ಗಣಪತಿ, ಮರೋಳಿ ಸೂರ್ಯ ನಾರಾಯಣ ದೇವಸ್ಥಾನ ಸೇರಿದಂತೆ ಇತರೆ ಪ್ರವಾಸಿ ತಾಣಗಳಿಗೆ ಯಾತ್ರಿ ನಿವಾಸ, ರಸ್ತೆ, ಶೌಚಾಲಯಗಳು ಸೇರಿದಂತೆ 23.6 ಕೋಟಿ ರೂ.ಗಳ ವೆಚ್ಚದಲ್ಲಿ ಕೈಗೊಂಡ ವಿವಿಧ ಕಾಮಗಾರಿಗಳು ಪ್ರಗತಿಯಲ್ಲಿವೆ.

ಇನ್ನು ಈಗಾಗಲೇ ಪ್ಲಾಸ್ಟಿಕ್ ಪಾರ್ಕ್ ಸ್ಥಾಪನೆಗೆ ಕೇಂದ್ರ ಸರಕಾರದ ಅನುಮೋದನೆ ದೊರೆತಿದೆ. ಅದರಿಂದ ಪ್ಲಾಸ್ಟಿಕ್ ಆಧಾರಿತ ಆಧುನಿಕ ಉತ್ಫನ್ನಗಳನ್ನು ತಯಾರಿಸುವ ಕೈಗಾರಿಕೆಗಳ ಸ್ಥಾಪನೆಗೆ ಪೂರಕ ವಾತಾವರಣ ನಿರ್ಮಾಣವಾಗಲಿದ್ದು, ಸಾಕಷ್ಟು ಉದ್ಯೋಗಾವಕಾಶಗಳು ಸೃಷ್ಟಿಯಾಗಲಿವೆ ಎಂದು ಹೇಳಿದರು.

ಸರಕಾರಿ ಗೋಶಾಲೆ ನಿರ್ಮಿಸಲು ಕಡಬ ತಾಲೂಕಿನ ರಾಮಕುಂಜ ಗ್ರಾಮದಲ್ಲಿ 98.45 ಎಕರೆ ಪ್ರದೇಶವನ್ನು ಮೀಸಲಿಡಲಾಗಿದ್ದು, 24 ಲಕ್ಷ ರೂ,ಗಳ ಅನುದಾನ ಬಿಡುಗಡೆಯಾಗಿದೆ. ಮುಖ್ಯಮಂತ್ರಿಗಳ ಕೋವಿಡ್ ಪ್ಯಾಕೇಜ್-೨ ನಲ್ಲಿ ಘೋಷಿಸಿದಂತೆ ತಲಾ ಮೂರು ಸಾವಿರ ರೂ.ಗಳಂತೆ 1558 ಮೀನುಗಾರರಿಗೆ 46.74 ಲಕ್ಷ ರೂ. ಗಳನ್ನು ಪರಿಹಾರ ವಿತರಿಸಲಾಗಿದೆ.

ಆಳ ಸಮುದ್ರ ಮೀನುಗಾರಿಕೆಯ ಬಲವರ್ಧನೆಗೆ ಪ್ರೋತ್ಸಾಹ ನೀಡುತಿದ್ದು, 72 ಲಕ್ಷ ರೂ. ಗಳ ಸಹಾಯಧನವನ್ನು ಅರ್ಹ ಫಲಾನುಭವಿಗಳಿಗೆ ನೀಡಲಾಗಿದೆ ಎಂದು ಹೇಳಿದರು.

ಈ ಸಂದರ್ಭದಲ್ಲಿ ಸಂಸದ ನಳಿನ್ ಕುಮಾರ್ ಕಟೀಲ್, ಶಾಸಕರಾದ ವೇದವ್ಯಾಸ ಕಾಮತ್, ಮೇಯರ್ ಪ್ರೇಮಾನಂದ ಶೆಟ್ಟಿ, ವಿವಿಧ ನಿಗಮ ಮಂಡಳಿಗಳ ಅಧ್ಯಕ್ಷರು, ಜಿಲ್ಲಾಧಿಕಾರಿ ಡಾ. ರಾಜೇಂದ್ರ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ಕುಮಾರ್, ಮಂಗಳೂರು ನಗರ ಪೊಲೀಸ್ ಆಯುಕ್ತ ಶಶಿಕುಮಾರ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಋಷಿಕೇಶ್ ಭಗವಾನ್ ಸೋನಾವಣೆ, ಮಂಗಳೂರು ಮಹಾನಗರಪಾಲಿಕೆ ಆಯುಕ್ತ ಅಕ್ಷಯ್ ಶ್ರೀಧರ್ ಸೇರಿದಂತೆ ಅಧಿಕಾರಿಗಳು ಹಾಗೂ ಕನ್ನಡ ಅಭಿಮಾನಿಗಳು ಉಪಸ್ಥಿತರಿದ್ದರು.

Vishwa News 24

Recent Posts

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ – vishwanews24

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…

2 minutes ago

ಮಂಗಳೂರು: ವಿದೇಶಿ ಉದ್ಯೋಗದ ಆಮಿಷಕ್ಕೆ ವಂಚಕರ ಬಲೆಗೆ ಬೀಳದಂತೆ ಯುವಜನತೆಗೆ ಪೊಲೀಸ್‌ ಆಯುಕ್ತರ ಎಚ್ಚರಿಕೆ – vishwanews24

ಮಂಗಳೂರು: ವಿದೇಶಿ ಉದ್ಯೋಗದ ಆಕಾಂಕ್ಷಿಗಳು ಯಾವುದೇ ಏಜೆನ್ಸಿಯನ್ನು ನಂಬುವ ಮುನ್ನಎಚ್ಚರ : ಸುಧೀರ್ ಕುಮಾರ್ ರೆಡ್ಡಿ ಮನವಿ ಮಂಗಳೂರು: ವಿದೇಶದಲ್ಲಿ…

13 minutes ago

ಅಟ್ಟಿಕಾ ಗೋಲ್ಡ್ ಕಂಪನಿಗೆ ಡಬಲ್ ಶಾಕ್ : ED ದಾಳಿ ಬೆನ್ನಲ್ಲೇ IT ಇಲಾಖೆ ಅಧಿಕಾರಿಗಳಿಂದ ದಾಳಿ – vishwanews24

ಅಟ್ಟಿಕಾ ಗೋಲ್ಡ್ ಕಂಪನಿಗೆ ಡಬಲ್ ಶಾಕ್ : ED ದಾಳಿ ಬೆನ್ನಲ್ಲೇ, IT ಇಲಾಖೆ ಅಧಿಕಾರಿಗಳಿಂದ ದಾಳಿ ಬೆಂಗಳೂರು: ಅಟ್ಟಿಕಾ…

34 minutes ago

ಕಾನ್ಪುರದ ಉದ್ಯಮಿ ಹತ್ಯೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ : ಆಸ್ತಿ ಕೈತಪ್ಪುವ ಭೀತಿಯಿಂದ ತಂದೆಯನ್ನೇ ಮುಗಿಸಿದ ಮಗ – vishwanews24

ಕಾನ್ಪುರದ ಉದ್ಯಮಿ ಹತ್ಯೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ : ಆಸ್ತಿ ಬೇರೆ ಮಹಿಳೆಯ ಪಾಲಾಗಬಹುದೆಂಬ ಭೀತಿಯಿಂದ ತಂದೆಯನ್ನೇ ಮುಗಿಸಿದ ಮಗ …

1 hour ago

ಕುಂದಾಪುರ : ಹುಟ್ಟೂರಿಗೆ ತಲುಪಿದ ಅನ್ ಪ್ರಕಾಶ್ ಕುಂದರ್ ಪಾರ್ಥಿವ ಶರೀರ – vishwanews24

ಕುಂದಾಪುರ: ಶಾರ್ಜಾದಲ್ಲಿ ನಿಗೂಢ ಹತ್ಯೆಗೀಡಾದ ಅಲ್ವಿನ್ ಪ್ರಕಾಶ್ ಕುಂದರ್ ಪಾರ್ಥಿವ ಶರೀರ ಹುಟ್ಟೂರಿಗೆ ಕುಂದಾಪುರ : ಶಾರ್ಜಾದಲ್ಲಿ ಜುಲೈನಲ್ಲಿ ನಿಗೂಢವಾಗಿ…

1 hour ago

ಏಷ್ಯನ್ ಗೇಮ್ಸ್ ನಲ್ಲಿ ಎರಡನೇ ಚಿನ್ನದ ಪದಕ ಗೆದ್ದುಕೊಂಡ ಭಾರತ – vishwanews24

ಏಷ್ಯನ್ ಗೇಮ್ಸ್ ನಲ್ಲಿ ಭಾರತಕ್ಕೆ 2ನೇ ಚಿನ್ನ.. 10 ಮೀಟರ್ ಏರ್ ಪಿಸ್ತೂಲ್‌ ನಲ್ಲಿ ಸ್ವರ್ಣ ಪದಕ ಗೆದ್ದ ಕಮಲ್‌ಜೀತ್–ಸುರುಚಿ…

2 hours ago