ದಕ್ಷಿಣ ಕನ್ನಡ

ಮಂಗಳೂರು ಕಮಿಷನರೇಟ್‌ ವ್ಯಾಪ್ತಿಯಲ್ಲಿ ಶನಿವಾರ ನಿಷೇಧಾಜ್ಞೆ ಜಾರಿ

ಮಂಗಳೂರು:  ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ನೇತೃತ್ವದ ನೂತನ ಸರ್ಕಾರ ಶನಿವಾರ ವಿಶ್ವಾಸಮತ ಯಾಚನೆ ನಡೆಸಲಿದ್ದು, ಈ ಸಂದರ್ಭದಲ್ಲಿ ವಿವಿಧ ರಾಜಕೀಯ ಪಕ್ಷಗಳ ಕಾರ್ಯಕರ್ತರು ಘರ್ಷಣೆಗೆ ಇಳಿಯುವ ಸಾಧ್ಯತೆ ಇದೆ ಎಂಬ ವರದಿಗಳನ್ನು ಆಧರಿಸಿ ಮಂಗಳೂರು ನಗರ ಪೊಲೀಸ್ ಕಮಿಷನರೇಟ್ ವ್ಯಾಪ್ತಿಯಾದ್ಯಂತ ಶನಿವಾರ ಬೆಳಿಗ್ಗೆಯಿಂದ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ.

ಕಾನೂನು ಸುವ್ಯವಸ್ಥೆ ಡಿಸಿಪಿ ಹನುಮಂತರಾಯ ಸಲ್ಲಿಸಿದ ವರದಿ ಆಧರಿಸಿ ನಗರ ಪೊಲೀಸ್ ಕಮಿಷನರ್ ವಿಪುಲ್‌ ಕುಮಾರ್ ನಿಷೇಧಾಜ್ಞೆ ಜಾರಿಗೊಳಿಸಿ  ಆದೇಶ ಹೊರಡಿಸಿದ್ದಾರೆ.

ಶನಿವಾರ ಬೆಳಿಗ್ಗೆಯಿಂದ ಭಾನುವಾರ ಬೆಳಿಗ್ಗೆ 10 ಗಂಟೆಯವರೆಗೆ ನಿಷೇಧಾಜ್ಞೆ ಜಾರಿಯಲ್ಲಿರಲಿದೆ.ಈ ಅವಧಿಯಲ್ಲಿ ಗುಂಪು ಸೇರುವುದು, ಪ್ರತಿಭಟನೆ, ಮೆರವಣಿಗೆ, ಪ್ರದರ್ಶನ, ಘೋಷಣೆ ಕೂಗುವುದು, ಕರಪತ್ರಗಳನ್ನು ಹಂಚುವುದನ್ನು ನಿಷೇಧಿಸಲಾಗಿದೆ. ನಗರದಾದ್ಯಂತ ಹೆಚ್ಚುವರಿ ಪೊಲೀಸ್ ಬಂದೋಬಸ್ತ್‌ ವ್ಯವಸ್ಥೆ ಮಾಡಲಾಗಿದೆ.

Vishwa News 24

Recent Posts

ಬಿಜೆಪಿ ಪಕ್ಷಕ್ಕೆ ಸೇರ್ಪಡೆಗೊಂಡ ಟೆನಿಸ್ ಆಟಗಾರ ಲಿಯಾಂಡರ್ ಪೇಸ್ – vishwanews24

ಬಿಜೆಪಿ ಪಕ್ಷಕ್ಕೆ ಸೇರ್ಪಡೆಗೊಂಡ ಟೆನಿಸ್ ಆಟಗಾರ ಲಿಯಾಂಡರ್ ಪೇಸ್ ಹೊಸದಿಲ್ಲಿ: ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಗೆ ಮುನ್ನ ಟೆನಿಸ್ ಆಟಗಾರ…

2 hours ago

ಬೀದರ್ : ಮಳೆ ಆರ್ಭಟ ; ಸಿಡಿಲು ಬಡಿದು ಯುವಕ ಸಾವು – vishwanews24

ಬೀದರ್ : ಮಳೆ ಆರ್ಭಟ - ಸಿಡಿಲು ಬಡಿದು ಯುವಕ ಸಾವು ಬೀದರ್: ಸಿಡಿಲು ಬಡಿದು ಯುವಕನೊಬ್ಬ ಮೃತಪಟ್ಟ ಘಟನೆ ಔರಾದ್…

2 hours ago

ಬೆಳ್ತಂಗಡಿ:  ಚಲಿಸುತ್ತಿದ್ದ ಕೆಎಸ್ಸಾರ್ಟಿಸಿ ಬಸ್ಸಿನಿಂದ ಎಸೆಯಲ್ಪಟ್ಟು ಇಬ್ಬರು ವಿದ್ಯಾರ್ಥಿನಿಯರಿಗೆ ಗಾಯ – vishwanews24

ಬೆಳ್ತಂಗಡಿ:  ಏಕಾಏಕಿ ತೆರೆಯಲ್ಪಟ್ಟ ಬಸ್ಸಿನ ಬಾಗಿಲು ; ನಿಯಂತ್ರಣ ತಪ್ಪಿ ರಸ್ತೆಗೆ ಎಸೆಯಲ್ಪಟ್ಟು ಇಬ್ಬರು ವಿದ್ಯಾರ್ಥಿನಿಯರಿಗೆ ಗಾಯ ಬೆಳ್ತಂಗಡಿ: ಚಲಿಸುತ್ತಿದ್ದ ಬಸ್ಸಿನಿಂದ…

3 hours ago

ಉಡುಪಿ: ಚಲಿಸುತ್ತಿದ್ದ ರೈಲಿನಿಂದ ಜಿಗಿಯಲು ಯತ್ನ; ಯುವಕನ ರಕ್ಷಣೆ – vishwanews24

ಉಡುಪಿ: ಚಲಿಸುತ್ತಿದ್ದ ರೈಲಿನಿಂದ ಜಿಗಿಯಲು ಯತ್ನ; ಯುವಕನ ರಕ್ಷಣೆ ಉಡುಪಿ: ಟಿಕೆಟ್ ಇಲ್ಲದೆ ಪ್ರಯಾಣಿಸುತ್ತಿದ್ದ ಯುವಕನೊಬ್ಬ ರೈಲಿನಿಂದ ಜಿಗಿಯಲು ಯತ್ನಿಸುತ್ತಿದ್ದ…

3 hours ago

ಕಾಸರಗೋಡು :  ಕೆಟ್ಟು ನಿಂತಿದ್ದ ಪಿಕಪ್ ವ್ಯಾನ್ ಗೆ ಬೈಕ್ ಢಿಕ್ಕಿ: ಸವಾರ ಮೃತ್ಯು – vishwanews24

ಕಾಸರಗೋಡು :  ಕೆಟ್ಟು ನಿಂತಿದ್ದ ಪಿಕಪ್ ವ್ಯಾನ್ ಗೆ ಬೈಕ್ ಢಿಕ್ಕಿ: ಸವಾರ ಮೃತ್ಯು ಕಾಸರಗೋಡು : ರಾಷ್ಟ್ರೀಯ ಹೆದ್ದಾರಿಯ ಬದಿಯಲ್ಲಿ…

4 hours ago

ಪ್ರಥಮ ಪಿಯುಸಿ ಫಲಿತಾಂಶ ಪ್ರಕಟ ; ಆನ್‌ಲೈನ್‌ನಲ್ಲಿ ವೀಕ್ಷಿಸುವುದು ಹೇಗೆ? – vishwanews24

ಪ್ರಥಮ ಪಿಯುಸಿ ಫಲಿತಾಂಶ ಪ್ರಕಟ ; ಆನ್‌ಲೈನ್‌ನಲ್ಲಿ ವೀಕ್ಷಿಸುವುದು ಹೇಗೆ? ಬೆಂಗಳೂರು: ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿಯು…

4 hours ago