ಮಂಗಳೂರು: ದಕ್ಷಿಣ ಕನ್ನಡ, ಉಡುಪಿ ಜಿಲ್ಲೆ ಸಹಿತ ಸಹಿತ ಕರಾವಳಿ ಕರ್ನಾಟಕ ಭಾಗದಲ್ಲಿ ಮುಂದಿನ 48 ಗಂಟೆಗಳಲ್ಲಿ ಬಲವಾದ ಬಿಸಿ ಗಾಳಿ ಬೀಸುವ ಸಾಧ್ಯತೆಗಳಿವೆ ಎಂದು ಭಾರತೀಯ ಹವಾಮಾನ ಇಲಾಖೆ ಎಚ್ಚರಿಸಿದೆ.
ದ.ಕ. ಮತ್ತು ಉಡುಪಿ ಜಿಲ್ಲೆಗಳಲ್ಲಿ ಕಳೆದೊಂದು ವಾರದಿಂದ ತೀವ್ರ ಬಿಸಿಲಿನ ವಾತಾವರಣವಿದೆ. ಬೇಸಿಗೆಯ ಆರಂಭದಲ್ಲಿಯೇ ವಾಡಿಕೆಗಿಂತ ಹೆಚ್ಚಿನ ತಾಪಮಾನ ದಾಖಲಾಗುತ್ತಿದೆ. ಮಾರ್ಚ್ ಮೂರನೇ ವಾರದವರೆಗೆ ಗರಿಷ್ಟ ಉಷ್ಣಾಂಶ ಮುಂದುವರಿಯುವ ಸಾಧ್ಯತೆ ಇದೆ . ಅಲ್ಲದೆ ಈ ಅವಧಿಯಲ್ಲಿ ತಾಪಮಾನ 40 ಡಿಗ್ರಿ ಸೆಲ್ಸಿಯಸ್ ಮೀರುವ ಸಾಧ್ಯತೆಗಳಿದ್ದು, ಜನರ ಆರೋಗ್ಯದ ಮೇಲೂ ಪ್ರತಿಕೂಲ ಪರಿಣಾಮ ಬೀರುವ ಸಾಧ್ಯತೆ ಇರುವುದರಿಂದ ವಿಶೇಷ ನಿಗಾ ವಹಿಸಲು ಸೂಚನೆ ನೀಡಲಾಗಿದೆ.
ಮುಂದಿನ 48 ಗಂಟೆಗಳಲ್ಲಿ ಕರ್ನಾಟಕ ಕರಾವಳಿಯ ಕೆಲವು ಕಡೆಗಳಲ್ಲಿ ಬಿಸಿಗಾಳಿಯ ವಾತಾವರಣ ಕಂಡು ಬರಲಿದೆ. ಹಾಗಾಗಿ ಮುನ್ನೆಚ್ಚರಿಕೆ ವಹಿಸುವಂತೆ ಎಂದು ಹವಾಮಾನ ಇಲಾಖೆಯು ಹೊರಡಿಸಿರುವ ಪ್ರಕಟನೆಯಲ್ಲಿ ತಿಳಿಸಿದೆ.
ದ.ಕ. ಮತ್ತು ಉಡುಪಿ ಜಿಲ್ಲೆಗಳಲ್ಲಿ ಕಳೆದೊಂದು ವಾರದಿಂದ ತೀವ್ರ ಬಿಸಿಲಿನ ವಾತಾವರಣವಿದೆ. ಬಲವಾದ ಗಾಳಿಯೂ ಬೀಸುತ್ತಿದೆ. ಇದರಿಂದ ತಾಪಮಾನದಲ್ಲಿ ಏರಿಕೆಯೂ ಆಗಿದೆ. ತಾಪಮಾನದಲ್ಲಿ ನಿರಂತರ ಏರಿಕೆಯ ಪರಿಣಾಮ ಬಿಸಿಗಾಳಿ ಸೃಷ್ಟಿಯಾಗಲಿದೆ. ಹಾಗಾಗಿ ಹಿಟ್‌ಸ್ಟ್ರೋಕ್, ಕಣ್ಣಿನ ಉರಿ, ತಲೆಸುತ್ತು ಸಹಿತ ನಾನಾ ಆರೋಗ್ಯ ಸಮಸ್ಯೆಗಳು ತಲೆದೋರುವ ಅಪಾಯವಿದೆ ಎಂದು ತಿಳಿಸಿದೆ.
ಉಡುಪಿ: ಆಸ್ತಿಯನ್ನು ಬಲವಂತವಾಗಿ ತನ್ನ ಹೆಸರಿಗೆ ವರ್ಗಾಯಿಸಿಕೊಂಡು ವೃದ್ಧ ಪೋಷಕರನ್ನು ಮನೆಯಿಂದ ಹೊರಹಾಕಿದ ಮಗ ಉಡುಪಿ: ತಾಯಿಯ ಹೆಸರಿನಲ್ಲಿದ್ದ ಆಸ್ತಿಯನ್ನು…
ವಿಟ್ಲ : ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದ ಮರ ಹಾಗೂ ವಿದ್ಯುತ್ ಕಂಬ: ದಂಪತಿ ಅಪಾಯದಿಂದ ಪಾರು ವಿಟ್ಲ: ಮರ ಹಾಗೂ…
ಮಂಗಳೂರು: ಉದ್ಯಮಿಯ ಕಾರು ಅಡ್ಡಗಟ್ಟಿ ಕಾರು ಸಹಿತ ಚಿನ್ನಾಭರಣ ದರೋಡೆ ಮಂಗಳೂರು: ಕೇರಳ ಮೂಲದ ಉದ್ಯಮಿಯೊಬ್ಬರ ಕಾರನ್ನು ಅಡ್ಡಗಟ್ಟಿ ಕಾರು…
ವಯೋವಂದನ ಯೋಜನೆ : ವೇದಿಕೆಯ ನೇತೃತ್ವಕ್ಕೆ ಸಮಾಜದ ಸಹಭಾಗಿತ್ವ ಅಗತ್ಯ : ಸಿ ಎಂ ಗುಜ್ಜಾಡಿ ಪ್ರಭಾಕರ್ ನಾಯಕ್ ಜಿ…
ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ‘ನುವಾ’ ವಜ್ರಾಭರಣ ಅನಾವರಣ ಉಡುಪಿ: ಮಲಬಾರ್ ಗೋಲ್ಡ್ ಆ್ಯಂಡ್ ಡೈಮಂಡ್ಸ್ ಉಡುಪಿ ಶಾಖೆಯಲ್ಲಿ ಮೈನ್ ಬ್ರಾಂಡಿನ…
ಧರ್ಮಸ್ಥಳ ಪ್ರಕರಣ : ವಿಠಲ್ ಗೌಡ ವಿರುದ್ಧ ಅರೆಸ್ಟ್ ವಾರಂಟ್: ಪೊಲೀಸರಿಂದ ಹುಡುಕಾಟ ಬೆಳ್ತಂಗಡಿ: ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ…