ಮಂಗಳೂರು (Vishwanews24): ಕೆಎಸ್ಆರ್ ಟಿಸಿ ನೌಕರರು ಆರನೇ ವೇತನ ಆಯೋಗದ ಶಿಫಾರಸ್ಸು ಅನುಷ್ಠಾನಕ್ಕೆ ಒತ್ತಾಯಿಸಿ ನಡೆಸುತ್ತಿರುವ ಮುಷ್ಕರ ಎರಡನೇ ದಿನಕ್ಕೆ ಕಾಲಿಟ್ಟಿದೆ. ಆದರೆ ಖಾಸಗಿ ಮತ್ತು ಸಿಟಿ ಬಸ್ ಗಳೂ ಎಂದಿನಿಂದ ಇಂದೂ ಕೂಡಾ ಕಾರ್ಯಾಚರಣೆ ನಡೆಸಿದ್ದು ಹೀಗಾಗಿ ಕರಾವಳಿಯಲ್ಲಿ ಪ್ರಯಾಣಿಕರಿಗೆ ಮುಷ್ಕರದ ಬಿಸಿ ತಟ್ಟಿಲ್ಲ.
ಈ ನಡುವೆ ಮಂಗಳೂರು ಕೆಎಸ್ಆರ್ ಟಿಸಿ ವಿಭಾಗದಲ್ಲಿ ಏ.೮ ರ ಗುರುವಾರದಂದು ಮುಷ್ಕರ ಕೊಂಚ ನೀರಸವಾಗಿದೆ. ಗುರುವಾರ ಬೆಳಗ್ಗೆ ಧರ್ಮಸ್ಥಳ, ಮಡಿಕೇರಿ, ಬೆಂಗಳೂರು, ಮೈಸೂರು ಸೇರಿದಂತೆ ಕಾಸರಗೋಡಿಗೆ ಬಸ್ ಗಳ ಸಂಚಾರ ನಿಧಾನವಾಗಿ ಪ್ರಾರಂಭವಾಗಿದೆ.
ಶಿವಮೊಗ್ಗ ಜೆಡಿಎಸ್ ಜಿಲ್ಲಾಧ್ಯಕ್ಷ ತಮ್ಮ ಬೆಂಬಲಿಗರ ಜೊತೆ ಕಾಂಗ್ರೆಸ್ ಪಕ್ಷ ಸೇರ್ಪಡೆ -Vishwanews24
ಎರಡನೇ ದಿನ ಈವರೆಗೆ ವಿವಿಧ ರೂಟ್ ಗಳಲ್ಲಿ ಸುಮಾರು 20ಕ್ಕೂ ಅಧಿಕ ಬಸ್ ಗಳ ಓಡಾಟ ನಡೆಸಿದೆ. ಹೀಗಾಗಿ ಸರ್ಕಾರಿ ಬಸ್ ನಿಲ್ದಾಣದತ್ತ ನಿಧಾನವಾಗಿ ಪ್ರಯಾಣಿಕರು ಆಗಮಿಸತೊಡಗಿದ್ದಾರೆ.
ನಿನ್ನೆಯೇ ಬಹುತೇಕ ಕೆಎಸ್ಆರ್ ಟಿಸಿ ನೌಕರರು ಕರ್ತವ್ಯಕ್ಕೆ ಹಾಜರಾಗದಿದ್ದು, ಇಂದೂ ಕೂಡಾ ಪರಿಸ್ಥಿತಿ ಅದೇ ರೀತಿ ಮುಂದುವರಿದಿದೆ. ಇಂದು ಬೆಳಗ್ಗೆಯಿಂದ ಬೆರಳೆಣಿಕೆಯಷ್ಟು ನೌಕರರು ಕರ್ತವ್ಯಕ್ಕೆ ಹಾಜರಾಗಿದ್ದು, ಈ ಹಿನ್ನೆಲೆಯಲ್ಲಿ ದೂರ ಪ್ರಯಾಣದ ಕೆಲವೊಂದು ಬಸ್ ಗಳು ಸಂಚಾರ ನಡೆಸಿವೆ. ಆದರೆ ನಗರದೊಳಗೆ ಬಸ್ ಸಂಚಾರ ಮಾಡುವ ಪ್ರಯಾಣಿಕರಿಗೆ ತೊಂದರೆಯಾಗಿಲ್ಲದಿದ್ದರೂ, ದೂರದೂರಿಗೆ ಪ್ರಯಾಣಿಸುವ ಪ್ರಯಾಣಿಕರು ಸರಿಯಾದ ಬಸ್ ವ್ಯವಸ್ಥೆ ಇಲ್ಲದೆ ತೊಂದರೆ ಅನುಭವಿಸಿದ್ದರು.
ಅ.15ರಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ದ.ಕ. ಮತ್ತು ಉಡುಪಿ ಪ್ರವಾಸ ಮಂಗಳೂರು ಉಚ್ಚಿಲ ದಸರಾ ನವರಾತ್ರಿ ಮಹೋತ್ಸವ ದಲ್ಲಿ ಭಾಗಿ…
ಉಡುಪಿ ಉಚ್ಚಿಲ ದಸರಾ -2026 ರಾಜ್ಯ ಮಟ್ಟದ ನೃತ್ಯ ಸ್ಪರ್ಧೆ ; ಟ್ರೋಫಿ ಗೆದ್ದುಕೊಂಡ ಉಡುಪಿಯ ಎಕ್ಸ್‌ಟ್ರಿಮ್ ಡ್ಯಾನ್ಸ್ ಅಕಾಡೆಮಿ…
ಉಡುಪಿ: ‘ಭಾರತ್ ಮಾತಾ ಕೀ ಜೈ’ ಘೋಷಣೆ ಕೂಗಿದ ವಿದ್ಯಾರ್ಥಿಗಳ ಮೇಲೆ ಹಲ್ಲೆ ಆರೋಪ; ಪೊಲೀಸ್ ಅಧಿಕಾರಿಯ ವಿರುದ್ಧ ಕಠಿಣ…
ದಸರಾ ರಜೆ ವೇಳೆ ಪರೀಕ್ಷೆ ವಿವಾದ: ಅ.19 ಮತ್ತು 22ರ ಪರೀಕ್ಷೆ ಮುಂದೂಡಿದ ಸೈಂಟ್ ಆಗ್ನೆಸ್ ಕಾಲೇಜು ಮಂಗಳೂರು: ದಸರಾ…
`ಬ್ರೇಕಿಂಗ್ ಬ್ಯಾಡ್' ಖ್ಯಾತಿಯ ಹಾಲಿವುಡ್ ನಟ ಆರ್‌ಜೆ ಮಿಟ್ಟೆ ನಿಧನ ಅಮೆರಿಕದ ಜನಪ್ರಿಯ ಟಿವಿ ಸರಣಿ `ಬ್ರೇಕಿಂಗ್ ಬ್ಯಾಡ್’ನಲ್ಲಿ ವಾಲ್ಟರ್…
ಮಂಗಳೂರಿನಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಅಧಿಕಾರಿಗಳ ಸಮಿತಿ ರಚನೆ: ಸಚಿವ ಯು.ಟಿ. ಖಾದರ್ ಮಂಗಳೂರು: ಮಂಗಳೂರಿನಲ್ಲಿ ಹೈಕೋರ್ಟ್ ಪೀಠ ಸ್ಥಾಪನೆ…