ಮಂಗಳೂರು : ಕರಾವಳಿಯಾದ್ಯಂತ ಭಾನುವಾರ ಗುಡುಗು, ಸಿಡಿಲು ಸಹಿತ ಧಾರಾಕಾರ ಮಳೆಯಾಗಿದ್ದು, ಅನೇಕ ಕಡೆ ಕೃಷಿಗೆ ಹಾನಿಯಾಗಿದೆ. ಹವಾಮಾನ ಇಲಾಖೆಯು ಇಂದು ರಾಜ್ಯದ ಕರಾವಳಿಯಲ್ಲಿ ಆರೆಂಜ್ ಅಲರ್ಟ್ ಘೋಷಿಸಿದೆ.
ಬೆಳ್ತಂಗಡಿ, ಸುಳ್ಯ ಮತ್ತು ಪುತ್ತೂರು ತಾಲೂಕುಗಳಲ್ಲಿ ಬೆಳಗ್ಗಿನಿಂದಲೇ ಮಳೆ ಆರಂಭವಾಗಿದ್ದು, ದಿನವಿಡೀ ಮಳೆ ಬಂದಿದೆ. ಒಮ್ಮೆ ಧಾರಾಕಾರ ಹಾಗೂ ಕೆಲವೊಮ್ಮೆ ಜಿಟಿ ಜಿಟಿ ಮಳೆ ಸುರಿದಿದೆ. ಇದರಿಂದ ಸಾಮಾನ್ಯ ಜನ ಜೀವನ ಅಸ್ತವ್ಯಸ್ತಗೊಂಡಿತ್ತು.
ಇನ್ನು ಸುಳ್ಯ, ಸುಬ್ರಹ್ಮಣ್ಯ ಪರಿಸರದಲ್ಲೂ ಭಾರೀ ಮಳೆಯಾಗಿದ್ದು, ಇತ್ತ ಸಂಪಾಜೆ ಭಾಗದಲ್ಲಿ ಸುರಿದ ಭಾರೀ ಮಳೆಗೆ ಗೂನಡ್ಕ ದರ್ಕಸ್ ರಸ್ತೆ ತಿರುಗುವಲ್ಲಿ ರಾಷ್ಟ್ರೀಯ ಹೆದ್ದಾರಿ ಮೋರಿ ಬ್ಲಾಕ್ ಆಗಿದೆ.
ಅನೇಕ ಕಡೆಗಳಲ್ಲಿ ಸಿಡಿಲು ಮಿಂಚಿನಿಂದ ವಿದ್ಯುತ್ ಪರಿಕರಗಳಿಗೆ ಹಾನಿಯಾಗಿದ್ದು, ವಿದ್ಯುತ್ ವ್ಯತ್ಯಯ ಉಂಟಾಗಿತ್ತು. ಅಳದಂಗಡಿ ನಾವರದಲ್ಲಿ ವಿದ್ಯುತ್ ಪರಿವರ್ತಕಕ್ಕೆ ಹಾನಿಯಾಗಿದ್ದು, 1.15 ಲಕ್ಷ ರೂ.ಗೂ ಅಧಿಕ ಹಾನಿಯಾಗಿದೆ ಎಂದು ಮೆಸ್ಕಾಂ ಅಧಿಕಾರಿಗಳು ತಿಳಿಸಿದ್ದಾರೆ.
ಇನ್ನು ಅಕಾಲಿಕ ಮಳೆಯಿಂದಾಗಿ ದ.ಕ ಜಿಲ್ಲೆಯ ಗ್ರಾಮಾಂತರ ಭಾಗಗಳಲ್ಲಿ ಭತ್ತದ ಕೃಷಿಗೆ ಹಾನಿಯಾಗಿದ್ದು, ಗದ್ದೆಗಳಲ್ಲಿ ನೀರು ನಿಂತು ಕಟಾವಿಗೆ ಸಿದ್ದವಾಗಿದ್ದ ಭತ್ತದ ಪೈರು ಹಾಳಾಗಿದೆ. ತರಕಾರಿ ಕೃಷಿಗೂ ಹಾನಿ ಉಂಟಾಗಿದೆ.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…