ಮಂಗಳೂರು: ಕರಾವಳಿಯ ಖ್ಯಾತ ಪತ್ರಕರ್ತ ಮನೋಹರ್ ಪ್ರಸಾದ್ (64) ನಿಧನರಾಗಿದ್ದಾರೆ.
ಮೂಲತಃ ಕಾರ್ಕಳ ತಾಲೂಕಿನ ಕರ್ವಾಲು ಗ್ರಾಮದವರಾದ ಮನೋಹರ ಪ್ರಸಾದ್ ಮಂಗಳೂರಿನಲ್ಲಿ ಪದವಿ ಶಿಕ್ಷಣ ಪೂರ್ತಿಗೊಳಿಸಿ ನವ ಭಾರತ ಪತ್ರಿಕೆಯಲ್ಲಿ ಪತ್ರಿಕಾ ವೃತ್ತಿ ಜೀವನ ಆರಂಭಿಸಿದ್ದರು.
ಉದಯವಾಣಿ ಪತ್ರಿಕೆಯಲ್ಲಿ ಮಂಗಳೂರು ವರದಿಗಾರರಾಗಿ ಸೇರ್ಪಡೆಗೊಂಡಿದ್ದ ಮನೋಹರ್ ಪ್ರಸಾದ್, ಬಳಿಕ ಮುಖ್ಯ ವರದಿಗಾರರಾಗಿ, ಬ್ಯುರೋ ಚೀಫ್ ಜೊತೆಗೆ ಸಹಾಯಕ ಸಂಪಾಕರಾಗಿಯೂ ಕಾರ್ಯ ನಿರ್ವಹಿಸುವ ಮೂಲಕ ಸುಮಾರು 36 ವರ್ಷಗಳ ಕಾಲ ಸೇವೆ ಸಲ್ಲಿಸಿದ್ದಾರೆ.
ಮನೋಹರ ಪ್ರಸಾದ್ ತಮ್ಮ ಸಾಧನೆ ಹಾಗೂ ಸೇವೆಗಾಗಿ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ, ಕರ್ನಾಟಕ ಮಾಧ್ಯಮ ಅಕಾಡೆಮಿ ಪ್ರಶಸ್ತಿ, ಸಂದೇಶ ಪ್ರತಿಷ್ಠಾನದ ಪ್ರಶಸ್ತಿ ಪಡೆದಿದ್ದಾರೆ.
ಕಳೆದ ಎರಡು ವರ್ಷಗಳ ಹಿಂದೆ ಸೇವೆಯಿಂದ ನಿವೃತ್ತಿಗೊಂಡಿದ್ದರು. ಬಳಿಕ ಅವರು ಅನಾರೋಗ್ಯಕ್ಕೀಡಾಗಿದ್ದರು. ಇಂದು ಮುಂಜಾನೆ ಮಂಗಳೂರಿನಲ್ಲಿ ನಿಧನರಾಗಿದ್ದಾರೆ.
ಬೆಳಪು ಪ್ರದೇಶದಲ್ಲಿ ಎಲ್ಲಾ ಅಗತ್ಯ ಸೌಲಭ್ಯಗಳೊಂದಿಗೆ ಘಟಕ ನಿರ್ಮಿಸಿದರೆ ನಮ್ಮಿಂದ ಯಾವುದೇ ವಿರೋಧ ಇರುವುದಿಲ್ಲ : ದೇವಿಪ್ರಸಾದ್ ಶೆಟ್ಟಿ ಮೂಳೂರು…
ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ ಬೆಳಗಾವಿ: ಪ್ರಿಯಕರನ ಜೊತೆ…
ದೇಶದ ಜಾತ್ಯತೀತ ಮೌಲ್ಯಗಳನ್ನು ರಕ್ಷಿಸಲು ಕಾಂಗ್ರೆಸ್ ಪಕ್ಷ ಸದಾ ಸಮಾನ ಚಿಂತನೆಯ ಪಕ್ಷಗಳೊಂದಿಗೆ ಕೈಜೋಡಿಸಿದೆ : ಬಿ.ಕೆ.ಹರಿಪ್ರಸಾದ್ ಬೆಂಗಳೂರು: ‘ಬಿಜೆಪಿ…
ಪಡುಬಿದ್ರಿ: ಕಿಶೋರ್ ಆಳ್ವ ಅವರಿಗೆ ಪ್ರತಿಷ್ಠಿತ ಮಹಾತ್ಮ ಗಾಂಧಿ ಸಬರಮತಿ ಸಂತ ಪ್ರಶಸ್ತಿ ಪ್ರದಾನ ಪಡುಬಿದ್ರಿ: ಸನಾತನ ಫೌಂಡೇಶನ್ನ ಅಧ್ಯಕ್ಷ,…
ವಿವಾಹಿತ ಮಹಿಳೆ ಜತೆ ಲಿವ್ ಇನ್ ರಿಲೇಶನ್ಶಿಪ್ನಲ್ಲಿದ್ದ ಯುವಕ ಶವವಾಗಿ ಪತ್ತೆ ಬೆಂಗಳೂರು: ಲಿವ್ ಇನ್ ರಿಲೇಶನ್ಶಿಪ್ನಲ್ಲಿದ್ದ ಯುವಕ ನೇಣುಬಿಗಿದ…
ಪಶ್ಚಿಮ ಬಂಗಾಳದ ರಾಜಕೀಯ ಇತಿಹಾಸದಲ್ಲಿ ಹೊಸ ಪರ್ವ.. ಬಿಜೆಪಿ ಮೊದಲ ಸಿಎಂ ಆಗಿ ಪ್ರಮಾಣ ಸ್ವೀಕಾರ.. ಐತಿಹಾಸಿಕ ಕ್ಷಣಕ್ಕೆ ಮೋದಿ,…